ಕಲಬುರಗಿ ಮರಳಿ ಕಾಂಗ್ರೆಸ್ ತೆಕ್ಕೆಗೆ: ಮಾವನ ಸೋಲಿನ ಸೇಡು ತೀರಿಸಿಕೊಂಡ ಅಳಿಯ

Kalburagi Lok Sabha Election Results 2024: ಜಿದ್ದಾಜಿದ್ದಿನ ಕಣವಾಗಿದ್ದ ಕಲಬುರಗಿ ಲೋಕ ಕ್ಷೇತ್ರ ಸದ್ಯ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ. ಆ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ಕಾಂಗ್ರೆಸ್​ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ 625116 ಮತಗಳನ್ನು ಪಡೆದುಕೊಂಡಿದ್ದಾರೆ. ಜಾಧವ್​ರನ್ನು ಸೋಲಿಸುವ ಮೂಲಕ ಮಾವನ ಸೋಲಿನ ಸೇಡನ್ನು ರಾಧಾಕೃಷ್ಣ ತೀರಿಸಿಕೊಂಡಿದ್ದಾರೆ.

ಕಲಬುರಗಿ ಮರಳಿ ಕಾಂಗ್ರೆಸ್ ತೆಕ್ಕೆಗೆ: ಮಾವನ ಸೋಲಿನ ಸೇಡು ತೀರಿಸಿಕೊಂಡ ಅಳಿಯ
ಕಲಬುರಗಿ ಮರಳಿ ಕಾಂಗ್ರೆಸ್ ತೆಕ್ಕೆಗೆ: ಮಾವನ ಸೋಲಿನ ಸೇಡು ತೀರಿಸಿಕೊಂಡ ಅಳಿಯ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jun 04, 2024 | 7:03 PM

ಕಲಬುರಗಿ, ಜೂನ್​​ 04: ಜಿದ್ದಾಜಿದ್ದಿನ ಕಣವಾಗಿದ್ದ ಕಲಬುರಗಿ ಲೋಕ ಕ್ಷೇತ್ರ (Kalaburgi Constituency) ಸದ್ಯ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ. ಆ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ಕಾಂಗ್ರೆಸ್​ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ (adhakrina Doddamani) 652321 ಮತಗಳಿಂದ ಗೆಲವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ 625116 ಮತಗಳನ್ನು ಪಡೆದುಕೊಂಡಿದ್ದಾರೆ. ಜಾಧವ್​ರನ್ನು ಸೋಲಿಸುವ ಮೂಲಕ ಮಾವನ ಸೋಲಿನ ಸೇಡನ್ನು ರಾಧಾಕೃಷ್ಣ ತೀರಿಸಿಕೊಂಡಿದ್ದಾರೆ.

ಸೋಲಿಲ್ಲದ ಸರದಾರನಂತೆ ಮಲ್ಲಿಕಾರ್ಜುನ ಖರ್ಗೆ ಪ್ರತಿ ಕಲಬುರಗಿ ಲೋಕ ಕ್ಷೇತ್ರದಿಂದ ಗೆಲುವು ಸಾಧಿಸಿಕೊಂಡು ಬಂದಿದ್ದರು. ಆದರೆ 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನಲ್ಲಿದ್ದ ಉಮೇಶ್​ ಜಾಧವ್​ ಅವರನ್ನು ಆಪರೇಷನ್ ಕಮಲ​ ಮಾಡುವ ಮೂಲಕ ಬಿಜೆಪಿಗೆ ಕರೆತರಲಾಗಿತ್ತು. ಅಷ್ಟೇ ಅಲ್ಲದೇ ಅವರನ್ನು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಆ ಮೂಲಕ ಸತತ ಗೆಲುವು ಸಾಧಿಸಿದ್ದ ಮಲ್ಲಿಕಾರ್ಜುನ ಖರ್ಗೆ ಸೋಲುಂಡಿದ್ದರು.

ಇದನ್ನೂ ಓದಿ: ಕಲಬುರಗಿ ಲೋಕಸಭಾ ಚುನಾವಣೆ 2024 ಫಲಿತಾಂಶ: ಕಾಂಗ್ರೆಸ್​ನ ರಾಧಾಕೃಷ್ಣ ದೊಡ್ಡಮನಿ ಗೆಲವು

2019ರ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್​ ಅವರ ವಿರುದ್ಧ ಮೊದಲ ಬಾರಿಗೆ ಸೋಲು ಕಂಡಿದ್ದರು. ಉಮೇಶ್ ಜಾಧವ್​ ಅವರು 6,20,192 ಮತಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಗೆಲುವು ಸಾಧಿಸಿದ್ದರು. ಮಲ್ಲಿಕಾರ್ಜುನ್​ ಖರ್ಗೆ ಅವರು 5,24,740 ಮತಗಳನ್ನು ಪಡೆದುಕೊಂಡಿದ್ದರು.

ಇದನ್ನೂ ಓದಿ: ಒಕ್ಕಲಿಗರ ಏಕಮೇವಾದ್ವಿತೀಯ ನಾಯಕನಾಗಲು ಡಿಸಿಎಂ ಹಲ್ಕಾ ಕೆಲಸ ಮಾಡಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಆದರೆ ಇದೀಗ ತಮ್ಮ ಬದಲಿಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರಿಗೆ ಕಾಂಗ್ರೆಸ್​ ಟಿಕೆಟ್​ ನೀಡುವ ಮೂಲಕ ಕಣಕ್ಕಿಳಿಸಿದ್ದರು. ಲೋಕಸಭೆ ಚುನಾವಣೆಯ ಪ್ರಚಾರ ವೇಳೆ ರಾಧಾಕೃಷ್ಣ ದೊಡ್ಡಮನಿ ಪರ ಮಲ್ಲಿಕಾರ್ಜುನ ಖರ್ಗೆ ಪ್ರಚಾರಕ್ಕೆ ಮಾಡಿದ್ದು, ಈ ವೇಳೆ ನನ್ನ ಅಳಿಯ ರಾಧಾಕೃಷ್ಣ ದೊಡ್ಡಮನಿಗೆ ಮತ ಹಾಕಿ ಇಲ್ಲಾ ನಾನು ಸತ್ತ ಮೇಲೆ ಬಂದು ಮಣ್ಣು ಹಾಕಿ ಎಂದು ಭಾವನಾತ್ಮಕವಾಗಿ ಭಾಷಣ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:01 pm, Tue, 4 June 24

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್