AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿಯವರು ಫೋನ್ ಮಾಡಿ ನನ್ನ ಆರೋಗ್ಯದ ಬಗ್ಗೆ ವಿಚಾರಿಸಬಹುದಿತ್ತು: ನವೀನ್ ಪಟ್ನಾಯಕ್

ನವೀನ್ ಬಾಬು ಅವರ ಅನಾರೋಗ್ಯದ ಹಿಂದೆ ಏನಾದರೂ ಪಿತೂರಿ ಇದೆಯೇ? ಇದನ್ನು ತಿಳಿಯುವುದು ಒಡಿಶಾದ ಜನರ ಹಕ್ಕು. ನವೀನ್ ಪಟ್ನಾಯಕ್ ಹೆಸರಿನಲ್ಲಿ ತೆರೆಮರೆಯಲ್ಲಿ ಒಡಿಶಾದಲ್ಲಿ ಅಧಿಕಾರ ಅನುಭವಿಸುತ್ತಿರುವವರ ಲಾಬಿಯ ಕೈವಾಡ ಇದರಲ್ಲಿ ಇದೆಯೇ ಎಂಬುದು ಪ್ರಶ್ನೆ ಎಂದಿದ್ದರು ನರೇಂದ್ರ ಮೋದಿ.

ಮೋದಿಯವರು ಫೋನ್ ಮಾಡಿ ನನ್ನ ಆರೋಗ್ಯದ ಬಗ್ಗೆ ವಿಚಾರಿಸಬಹುದಿತ್ತು: ನವೀನ್ ಪಟ್ನಾಯಕ್
ನವೀನ್ ಪಟ್ನಾಯಕ್
ರಶ್ಮಿ ಕಲ್ಲಕಟ್ಟ
|

Updated on:May 29, 2024 | 8:02 PM

Share

ದೆಹಲಿ ಮೇ 29: ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ (Naveen Patnaik) ಅವರ ಆರೋಗ್ಯದ ಮೇಲಿನ ಊಹಾಪೋಹಗಳು ಬುಧವಾರ ತೀವ್ರಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜ್ಯದಲ್ಲಿ ನಡೆದ ರ‍್ಯಾಲಿಯಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ನವೀನ್ ಪಟ್ನಾಯಕ್ ಅವರ ಶೀಘ್ರವಾಗಿ ಹದಗೆಡುತ್ತಿರುವ ಆರೋಗ್ಯದ ಹಿಂದೆ ಏನಾದರೂ ಪಿತೂರಿ ಇದೆಯೇ ಎಂದು ಮೋದಿ ಶಂಕಿಸಿದ್ದಾರೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಚುನಾವಣಾ ರ‍್ಯಾಲಿಯಲ್ಲಿ ಸಿಎಂ ಆಪ್ತ ಮತ್ತು ಬಿಜೆಡಿ (BJD) ನಾಯಕ ವಿಕೆ ಪಾಂಡಿಯನ್, ನವೀನ್ ಅವರ ನಡುಗುತ್ತಿರುವ ಕೈ ಹಿಡಿದ ವಿಡಿಯೊ ವೈರಲ್ ಆಗಿದ್ದ ಬೆನ್ನಲ್ಲೇ ಮೋದಿ, ಒಡಿಶಾ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ  ನವೀನ್ ಬಾಬು ಆರೋಗ್ಯದ  ಬಗ್ಗೆ ವಿಚಾರಣೆ ನಡೆಸಲಿದೆ ಎಂದು ಹೇಳಿದ್ದಾರೆ.

ಒಡಿಶಾದ ಮಯೂರ್‌ಭಂಜ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇತ್ತೀಚಿನ ದಿನಗಳಲ್ಲಿ ನವೀನ್ ಬಾಬು ಅವರ ಎಲ್ಲಾ ಹಿತೈಷಿಗಳು ತುಂಬಾ ಚಿಂತಿತರಾಗಿದ್ದಾರೆ. ಕಳೆದ ವರ್ಷ ನವೀನ್ ಬಾಬು ಅವರ ಆರೋಗ್ಯವು ಹೇಗೆ ಹದಗೆಟ್ಟಿದೆ ಎಂಬುದನ್ನು ನೋಡಿ. ನವೀನ್ ಬಾಬು ಅವರ ಆಪ್ತರು ನನ್ನನ್ನು ಭೇಟಿಯಾದಾಗಲೆಲ್ಲಾ ನವೀನ್ ಬಾಬು ಅವರ ಆರೋಗ್ಯದ ಬಗ್ಗೆ ಚರ್ಚಿಸುತ್ತಾರೆ. ನವೀನ್ ಬಾಬು ಅವರು ಸ್ವಂತವಾಗಿ ಏನನ್ನೂ ಮಾಡಲು ಸಾಧ್ಯವಿಲ್ಲ, ಅವರು ಎಲ್ಲದಕ್ಕೂ ಬೇರೆಯವರ ಮೇಲೆ ಅವಲಂಬಿತರಾಗಬೇಕಾಗಿದೆ. ನವೀನ್ ಬಾಬು ಅವರ ಅನಾರೋಗ್ಯದ ಹಿಂದೆ ಕೆಲವರ ಷಡ್ಯಂತ್ರವಿದೆ ಎಂಬ ಅನುಮಾನ ನಮಗಿದೆ ಎಂದು ಹೇಳಿದ್ದಾರೆ.

ನವೀನ್ ಬಾಬು ಅವರ ಅನಾರೋಗ್ಯದ ಹಿಂದೆ ಏನಾದರೂ ಪಿತೂರಿ ಇದೆಯೇ? ಇದನ್ನು ತಿಳಿಯುವುದು ಒಡಿಶಾದ ಜನರ ಹಕ್ಕು. ನವೀನ್ ಪಟ್ನಾಯಕ್ ಹೆಸರಿನಲ್ಲಿ ತೆರೆಮರೆಯಲ್ಲಿ ಒಡಿಶಾದಲ್ಲಿ ಅಧಿಕಾರ ಅನುಭವಿಸುತ್ತಿರುವವರ ಲಾಬಿಯ ಕೈವಾಡ ಇದರಲ್ಲಿ ಇದೆಯೇ ಎಂಬುದು ಪ್ರಶ್ನೆ. ಈ ನಿಗೂಢವನ್ನು ಬಯಲಿಗೆಳೆಯುವುದು ಮುಖ್ಯವಾದ್ದರಿಂದ ಜೂನ್ 10ರಂದು ಒಡಿಶಾದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಬಳಿಕ ನವೀನ್ ಬಾಬು ಅವರ ಆರೋಗ್ಯ ಏಕಾಏಕಿ ಹದಗೆಡಲು ಕಾರಣವೇನು ಎಂದು ತನಿಖೆ ನಡೆಸಲಿದೆ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನವೀನ್ ಪಟ್ನಾಯಕ್, “ಅವರು (ನರೇಂದ್ರ ಮೋದಿ) ನಾನು ಅವರ ಉತ್ತಮ ಸ್ನೇಹಿತ ಎಂದು ಸಾರ್ವಜನಿಕವಾಗಿ ಹೇಳಿದ್ದರು. ಅವರು ಫೋನ್ ಕರೆ ಕರೆ ಮಾಡಿ ನನ್ನ ಆರೋಗ್ಯದ ಬಗ್ಗೆ ವಿಚಾರಿಸಬೇಕಾಗಿತ್ತು. ಕಳೆದ 10 ವರ್ಷಗಳಿಂದ ನನ್ನ ಆರೋಗ್ಯದ ಬಗ್ಗೆ ಬಿಜೆಪಿ ವದಂತಿಗಳನ್ನು ಹಬ್ಬಿಸುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಸಿಎಂ ನವೀನ್ ಪಟ್ನಾಯಕ್ ಆರೋಗ್ಯದ ತನಿಖೆಗೆ ವಿಶೇಷ ಸಮಿತಿ ರಚನೆ; ಪ್ರಧಾನಿ ಮೋದಿ

ನಾನು ಪೂರ್ಣವಾಗಿ ಆರೋಗ್ಯವಾಗಿದ್ದೇನೆ. ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಪ್ರಚಾರ ಮಾಡುತ್ತಿದ್ದೇನೆ ಎಂದು ಪ್ರಧಾನಿಗೆ ಭರವಸೆ ನೀಡುತ್ತೇನೆ.”ನನ್ನ ಆರೋಗ್ಯವು ಸಂಪೂರ್ಣವಾಗಿ ಉತ್ತಮವಾಗಿದೆ. ಇಲ್ಲದಿದ್ದರೆ, ಈ ಬಿಸಿಲಿನ ನಡುವೆ ನಾನು ಪ್ರಚಾರ ಮಾಡಲು ಸಾಧ್ಯವಿಲ್ಲ” ಎಂದು ಎಂದು ಒಡಿಶಾ ಮುಖ್ಯಮಂತ್ರಿ ಹೇಳಿದ್ದಾರೆ.

ಒಡಿಶಾದಲ್ಲಿ ಮೇ 13 ರಿಂದ ಜೂನ್ 1 ರವರೆಗೆ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. 77 ವರ್ಷ ವಯಸ್ಸಿನ ನವೀನ್ ಪಟ್ನಾಯಕ್ ಅವರು ಈ ಬಾರಿ ಚುನಾವಣೆಯಲ್ಲಿ ಗೆದ್ದರೆ ದೇಶದಲ್ಲೇ ಅತಿ ಹೆಚ್ಚು ಅವಧಿಯ ಮುಖ್ಯಮಂತ್ರಿಯಾಗಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:01 pm, Wed, 29 May 24

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ