ಬಿಜೆಪಿ ಜತೆ ನಿತೀಶ್ ಕುಮಾರ್ ಮೈತ್ರಿ ಸರಿ ಇಲ್ಲ, ಚುನಾವಣೆ ನಂತರ ಮಹತ್ವವಾದುದು ಸಂಭವಿಸುತ್ತದೆ: ತೇಜಸ್ವಿ ಯಾದವ್

"ಲೋಕಸಭಾ ಚುನಾವಣೆಯ ನಂತರ ಚಾಚಾ (ನಿತೀಶ್ ಕುಮಾರ್ ಅವರನ್ನು ಉಲ್ಲೇಖಿಸಿ) ದೊಡ್ಡ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ನಾನು ಭವಿಷ್ಯ ನುಡಿದ ನಂತರ, ಅವರು ಪ್ರಚಾರಕ್ಕೆ ಹೋಗುತ್ತಿಲ್ಲ" ಎಂದು ತೇಜಸ್ವಿ ಯಾದವ್ ಅವರು ಒಂದೆರಡು ದಿನಗಳ ಹಿಂದೆ ಹೇಳಿಕೊಂಡಿದ್ದನ್ನು ಉಲ್ಲೇಖಿಸಿ ಹೇಳಿದ್ದಾರೆ.

ಬಿಜೆಪಿ ಜತೆ ನಿತೀಶ್ ಕುಮಾರ್ ಮೈತ್ರಿ ಸರಿ ಇಲ್ಲ, ಚುನಾವಣೆ ನಂತರ ಮಹತ್ವವಾದುದು ಸಂಭವಿಸುತ್ತದೆ: ತೇಜಸ್ವಿ ಯಾದವ್
ನಿತೀಶ್ ಕುಮಾರ್- ತೇಜಸ್ವಿ ಯಾದವ್
Follow us
ರಶ್ಮಿ ಕಲ್ಲಕಟ್ಟ
|

Updated on: May 30, 2024 | 6:56 PM

ದೆಹಲಿ ಮೇ 30:ಲೋಕಸಭೆ ಚುನಾವಣೆಯ (Lok sabha Election)  ಫಲಿತಾಂಶ ಪ್ರಕಟವಾದ ನಂತರ ಬಿಹಾರದಲ್ಲಿ ಏನಾದರೂ ಪ್ರಮುಖ ಘಟನೆ ನಡೆಯಲಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ಬಿಜೆಪಿ (BJP) ಮೈತ್ರಿಕೂಟದೊಂದಿಗೆ “ಸರಿಯಾಗಿಲ್ಲ” ಎಂದು ರಾಷ್ಟ್ರೀಯ ಜನತಾ ದಳ (RJD) ನಾಯಕ ತೇಜಸ್ವಿ ಯಾದವ್ (Tejashwi Yadav) ಅವರು ಗುರುವಾರ ಹೇಳಿದ್ದಾರೆ. ಈ ವರ್ಷದ ಜನವರಿಯಲ್ಲಿ ಕುಮಾರ್ ಎನ್‌ಡಿಎಗೆ ಹಠಾತ್ ವಾಪಸಾದ ನಂತರ ಉಪಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಂಡಿದ್ದ ತೇಜಸ್ವಿ ಯಾದವ್, ಪಾಟ್ನಾದಲ್ಲಿ ಪತ್ರಕರ್ತರೊಂದಿಗಿನ ಸಂವಾದದಲ್ಲಿ ಈ ಮಾತು ಹೇಳಿದ್ದಾರೆ.

“ಲೋಕಸಭಾ ಚುನಾವಣೆಯ ನಂತರ ಚಾಚಾ (ನಿತೀಶ್ ಕುಮಾರ್ ಅವರನ್ನು ಉಲ್ಲೇಖಿಸಿ) ದೊಡ್ಡ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ನಾನು ಭವಿಷ್ಯ ನುಡಿದ ನಂತರ, ಅವರು ಪ್ರಚಾರಕ್ಕೆ ಹೋಗುತ್ತಿಲ್ಲ” ಎಂದು ಯಾದವ್ ಅವರು ಒಂದೆರಡು ದಿನಗಳ ಹಿಂದೆ ಹೇಳಿಕೊಂಡಿದ್ದನ್ನು ಉಲ್ಲೇಖಿಸಿ ಹೇಳಿದ್ದಾರೆ.

“ರಾಜ್ಯಪಾಲರು ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸುತ್ತಿದ್ದಾರೆ ಮತ್ತು ಸೂಚನೆಗಳನ್ನು ನೀಡುತ್ತಾರೆ ಎಂದು ನಾನು ತಿಳಿದುಕೊಂಡಿದ್ದೇನೆ. ಚುನಾವಣೆ ವೇಳೆ ಬಿಜೆಪಿ ಮತ್ತು ಜೆಡಿಯು ಯಾವುದೇ ಸಂವಹನ ಇಲ್ಲದೆ ತಮ್ಮ ತಮ್ಮ ಸ್ಥಾನಗಳ ಮೇಲೆ ಕೇಂದ್ರೀಕರಿಸುತ್ತಿವೆ ಎಂದು ಆರ್‌ಜೆಡಿ ನಾಯಕ ಆರೋಪಿಸಿದ್ದಾರೆ. ಜೂನ್ 4 ರ ನಂತರ ಬಿಹಾರ ಯಾವುದೋ ದೊಡ್ಡ ವಿಷಯಕ್ಕೆ ಸಾಕ್ಷಿಯಾಗಲಿದೆ ಎಂಬ ನನ್ನ ಆತಂಕವನ್ನು ಈ ಎಲ್ಲಾ ವಿಷಯಗಳು ದೃಢಪಡಿಸುತ್ತವೆ ಎಂದಿದ್ದಾರೆ ಅವರು. ಅದೇ ವೇಳೆ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಬಣ ಅದ್ಭುತ ಗೆಲುವಿನತ್ತ ಸಾಗುತ್ತಿದೆ ಎಂದು ಯಾದವ್ ವಿಶ್ವಾಸ ವ್ಯಕ್ತಪಡಿಸಿದರು.

ಇಂಡಿಯಾ ಬಣ ಅದ್ಭುತ ಗೆಲುವಿನತ್ತ ಸಾಗುತ್ತಿದೆ. ಮೈತ್ರಿಕೂಟ 300ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಬಹುದು. ಬಡತನ, ಬೆಲೆ ಏರಿಕೆ ಮತ್ತು ನಿರುದ್ಯೋಗ (ಈ ಮೂರು ಮೆಹಬೂಬಾಗಳು) ನರೇಂದ್ರ ಮೋದಿಯನ್ನು ಸೋಲಿಸುತ್ತವೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ನಿತೀಶ್ ಕುಮಾರ್ ಯು-ಟರ್ನ್

2022 ರಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ತೊರೆದು ವಿರೋಧಪಕ್ಷ ನೇತೃತ್ವದ ಮಹಾಘಟಬಂಧನ್‌ಗೆ ಸೇರಿದ್ದ ನಿತೀಶ್ ಕುಮಾರ್, ಯು-ಟರ್ನ್ ಮಾಡಿ 2024 ರ ಜನವರಿಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಮರಳಿದರು. ನಂತರ ಒಂಬತ್ತನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಆರ್‌ಜೆಡಿಯಿಂದ ನೇತೃತ್ವದ ‘ಮಹಾಘಟಬಂಧನ್’ ಅನ್ನು ಕುಮಾರ್ ತ್ಯಜಿಸಿದಾಗಿನಿಂದ, ತೇಜಸ್ವಿ ಯಾದವ್ ಜೆಡಿಯು ಅಧ್ಯಕ್ಷರ ಮೇಲೆ ವಾಗ್ದಾಳಿ ನಡೆಸುವುದನ್ನು ನಿಲ್ಲಿಸಿದ್ದರು.

ತಮ್ಮ ಚುನಾವಣಾ ಪ್ರಚಾರದಲ್ಲಿ, ನಿತೀಶ್ ಕುಮಾರ್ ಅವರು ಬಿಜೆಪಿಯನ್ನು ಸೋಲಿಸಬೇಕೆಂದು ಬಯಸುತ್ತಾರೆ.ಮೈತ್ರಿ ಕೊನೆಗೊಂಡಿದ್ದರೂ “ಅವರ ಆಶೀರ್ವಾದ ನನ್ನೊಂದಿಗಿದೆ” ಎಂದು ಯಾದವ್ ಹೇಳಿಕೊಂಡಿದ್ದಾರೆ. ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟದ ಪಾಲುದಾರರಾದ ಬಿಜೆಪಿ ಮತ್ತು ಜೆಡಿಯು ಕ್ರಮವಾಗಿ 17 ಮತ್ತು 16 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ. ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಐದು ಸ್ಥಾನಗಳಲ್ಲಿ ಕಣದಲ್ಲಿದ್ದು, ಜಿತನ್ ಮಾಂಝಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾ (ಎಚ್‌ಎಎಂ) ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ತಲಾ ಒಂದು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ, ಮಹಾಘಟಬಂಧನ್ (ಮಹಾಮೈತ್ರಿಕೂಟ) ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡ ಪಕ್ಷಗಳನ್ನೊಳಗೊಂಡಿದೆ.

ಇದನ್ನೂ ಓದಿ: Narendra Modi: 206 ರೋಡ್ ಶೋ, 80 ಸಂದರ್ಶನಗಳು; ಇತಿಹಾಸ ಸೃಷ್ಟಿಸಿದ ಪ್ರಧಾನಿ ನರೇಂದ್ರ ಮೋದಿ

2019 ರಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ 40 ಸ್ಥಾನಗಳಲ್ಲಿ 39 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯವನ್ನು ಮುನ್ನಡೆಸಿದರೆ, ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಗೆದ್ದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್