ಅಂಬೇಡ್ಕರ್ ಇಲ್ಲದಿದ್ದರೆ, ನೆಹರೂ ಅವರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಕೋಟಾಗಳನ್ನು ಎಂದಿಗೂ ಒಪ್ಪುತ್ತಿರಲಿಲ್ಲ: ಮೋದಿ

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಬಿಜೆಪಿಯು ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿದ ನಂತರ ಸಂವಿಧಾನವನ್ನು ಬದಲಾಯಿಸುವ ಮೂಲಕ ಕೋಟಾಗಳನ್ನು ರದ್ದುಗೊಳಿಸಬಹುದು ಎಂಬ "ಸುಳ್ಳು" ಹರಡುತ್ತಿದೆ ಎಂದು ಆರೋಪಿಸಿದರು. ನಾವು ಹಿಂದುಳಿದ ಜಾತಿಗಳ ಹಕ್ಕುಗಳನ್ನು ರಕ್ಷಿಸುತ್ತಿದ್ದೇವೆ ಎಂಬುದು ಸತ್ಯ ಎಂದಿದ್ದಾರೆ ಮೋದಿ.

ಅಂಬೇಡ್ಕರ್ ಇಲ್ಲದಿದ್ದರೆ, ನೆಹರೂ ಅವರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಕೋಟಾಗಳನ್ನು ಎಂದಿಗೂ ಒಪ್ಪುತ್ತಿರಲಿಲ್ಲ: ಮೋದಿ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on:May 21, 2024 | 6:06 PM

ಮೋತಿಹಾರಿ (ಬಿಹಾರ) ಮೇ 21: ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು (Pandit Jawaharlal Nehru) ಅವರು ಹಿಂದುಳಿದ ಜಾತಿಗಳಿಗೆ ಮೀಸಲಾತಿಯನ್ನು ‘ವಿರೋಧ’ ಮಾಡಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi)  ಮಂಗಳವಾರ ಆರೋಪಿಸಿದ್ದಾರೆ. ಬಿಹಾರದ (Bihar) ಮೋತಿಹಾರಿಯಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ಬಾಬಾ ಸಾಹೇಬ್ ಅಂಬೇಡ್ಕರ್ ಇಲ್ಲದಿದ್ದರೆ, ನೆಹರೂ ಅವರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಕೋಟಾಗಳನ್ನು ಎಂದಿಗೂ ಒಪ್ಪುತ್ತಿರಲಿಲ್ಲ. ನೆಹರೂ ಅವರು ದೇಶದ ಅಂದಿನ ಮುಖ್ಯಮಂತ್ರಿಗಳಿಗೆ ಬರೆದ ಪತ್ರಗಳಲ್ಲಿ ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಸ್ಪಷ್ಟಪಡಿಸಿದ್ದರು ಎಂದು ಮೋದಿ ಹೇಳಿದ್ದಾರೆ.

“ಇದು ಸತತವಾಗಿ ಪ್ರಧಾನಿಗಳ ಅವಧಿಯಲ್ಲಿ ಕಾಂಗ್ರೆಸ್‌ನ ಲಕ್ಷಣವಾಗಿದೆ. ಇಂದಿರಾಗಾಂಧಿ ಅಥವಾ ರಾಜೀವ್ ಗಾಂಧಿ ಆಗಿರಬಹುದು, ಅವರೆಲ್ಲರೂ ಮೀಸಲಾತಿಯನ್ನು ವಿರೋಧಿಸಿದರು. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಕಾಂಗ್ರೆಸ್‌ನಿಂದ ಎಂದಿಗೂ ಗೌರವ ಸಿಕ್ಕಿಲ್ಲ” ಎಂದು ಮೋದಿ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಬಿಜೆಪಿಯು ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿದ ನಂತರ ಸಂವಿಧಾನವನ್ನು ಬದಲಾಯಿಸುವ ಮೂಲಕ ಕೋಟಾಗಳನ್ನು ರದ್ದುಗೊಳಿಸಬಹುದು ಎಂಬ “ಸುಳ್ಳು” ಹರಡುತ್ತಿದೆ ಎಂದು ಆರೋಪಿಸಿದರು. ನಾವು ಹಿಂದುಳಿದ ಜಾತಿಗಳ ಹಕ್ಕುಗಳನ್ನು ರಕ್ಷಿಸುತ್ತಿದ್ದೇವೆ ಎಂಬುದು ಸತ್ಯ. ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಮಾತ್ರ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಹಕ್ಕುಗಳು ಸುರಕ್ಷಿತವಾಗಿದೆ ಎಂದು ಮೋದಿ ಹೇಳಿದ್ದಾರೆ.

“ಧರ್ಮದ ಆಧಾರದ ಮೇಲೆ” ಮೀಸಲಾತಿ ಪ್ರಯೋಜನಗಳನ್ನು ನೀಡುವ ಯೋಜನೆಯನ್ನು ಇಂಡಿಯಾ ಬಣ ಹೊಂದಿದೆ ಎಂದು ಪ್ರಧಾನಮಂತ್ರಿ ಆರೋಪಿಸಿದ್ದಾರೆ.

“ಅವರು ಇದನ್ನು ಮಾಡಲು ಬಯಸುತ್ತಾರೆ ಏಕೆಂದರೆ ಅವರು ಈಗ ಕೇವಲ ಒಂದು ವೋಟ್ ಬ್ಯಾಂಕ್ ಅನ್ನು ಹೊಂದಿದ್ದಾರೆ. ಅವರನ್ನು ಇನ್ನು ಮುಂದೆ ಎಸ್‌ಸಿಗಳು, ಎಸ್‌ಟಿಗಳು ಮತ್ತು ಒಬಿಸಿಗಳು ಬೆಂಬಲಿಸುವುದಿಲ್ಲ, ಆದ್ದರಿಂದ ಅವರು ಈಗ ವೋಟ್ ಜಿಹಾದ್ ನಡೆಸುತ್ತಿರುವವರ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ” ಎಂದು ಮೋದಿ ಹೇಳಿದರು. ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಅವರು ಧರ್ಮದ ಆಧಾರದ ಮೇಲೆ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ಮೀಸಲಿಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಪದೇ ಪದೇ ಆರೋಪಿಸುತ್ತಲೇ ಇದ್ದಾರೆ.

ಇದನ್ನೂ ಓದಿ: 21ನೇ ಶತಮಾನದಲ್ಲಿ ಭಾರತವು ಇಂಡಿಯಾ ಮೈತ್ರಿಕೂಟದ ಪಾಪಗಳೊಂದಿಗೆ ಮುಂದುವರೆಯಲು ಸಾಧ್ಯವಿಲ್ಲ: ಮೋದಿ

“ಅವರು (ಕಾಂಗ್ರೆಸ್) ಸಂಸತ್ತಿನ ಕಾರ್ಯನಿರ್ವಹಣೆಯನ್ನು ನಿಲ್ಲಿಸುವ ಜನರು, ಅವರು ಚುನಾವಣಾ ಆಯೋಗವನ್ನು ಪ್ರಶ್ನಿಸುತ್ತಾರೆ, ಅವರು ಇವಿಎಂ ಅನ್ನು ಪ್ರಶ್ನಿಸುತ್ತಾರೆ. ಈಗ ಅವರು ತಮ್ಮ ಮತ ಬ್ಯಾಂಕ್‌ಗಾಗಿ ಅವರು ಸಂವಿಧಾನವನ್ನು ಅವಮಾನಿಸುತ್ತಿದ್ದಾರೆ ನಾನು ಬದುಕಿರುವವರೆಗೂ, ನಾನು ದಲಿತರು, ಎಸ್‌ಸಿಗಳು, ಎಸ್‌ಟಿಗಳು ಮತ್ತು ಒಬಿಸಿಗಳಿಗೆ ಮೀಸಲಾದ ಮೀಸಲಾತಿಯನ್ನು ಮುಸ್ಲಿಮರಿಗೆ ಧರ್ಮದ ಹೆಸರಿನಲ್ಲಿ ನೀಡಲು ಬಿಡುವುದಿಲ್ಲ ಎಂದು ಅವರು ತೆಲಂಗಾಣದ ಮೇದಕ್‌ನಲ್ಲಿ ನಡೆದ ರ‍್ಯಾಲಿಯಲ್ಲಿ  ಮೋದಿ ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:04 pm, Tue, 21 May 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್