ರೋಡ್ ಶೋ ಬಳಿಕ ವಾರಾಣಸಿಯ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ನಾಳೆ (ಮಂಗಳವಾರ) ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ವಾರಾಣಸಿಯಲ್ಲಿ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ರೋಡ್ ಶೋ ಬಳಿಕ ವಾರಾಣಸಿಯ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
Follow us
ಸುಷ್ಮಾ ಚಕ್ರೆ
|

Updated on: May 13, 2024 | 10:40 PM

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ವಾರಾಣಸಿಯಿಂದ 3ನೇ ಅವಧಿಗೆ ನಾಮಪತ್ರ ಸಲ್ಲಿಸಲು ಸಿದ್ಧರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ದೆಹಲಿಯಿಂದ ವಾರಾಣಸಿಗೆ (Varanasi) ಪ್ರಯಾಣಿಸಿದ್ದಾರೆ. ಅವರಿಗೆ ರಸ್ತೆಯಲ್ಲಿ ಇಕ್ಕೆಲಗಳಲ್ಲಿ ನೆರೆದಿದ್ದ ಸಾವಿರಾರು ಜನರು ಡ್ರಮ್, ಆರತಿ, ಜೈಕಾರಗಳೊಂದಿಗೆ ಸ್ವಾಗತಿಸಿದ್ದಾರೆ. ನಾಮಪತ್ರ ಸಲ್ಲಿಕೆಯ ಒಂದು ದಿನ ಮೊದಲೇ ಮೋದಿ ರೋಡ್ ಶೋ ನಡೆಸಿದ್ದಾರೆ. ಇದಾದ ಬಳಿಕ ಕಾಶಿ ವಿಶ್ವನಾಥನ ದೇವಸ್ಥಾನಕ್ಕೆ (Kashi Vishwanath Temple) ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಮಂಗಳವಾರ ನಾಮಪತ್ರ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಸಜ್ಜಾಗುತ್ತಿದ್ದು, ನಾಮಪತ್ರ ಸಲ್ಲಿಕೆಯ ಮುನ್ನಾದಿನದ ರೋಡ್ ಶೋಗಾಗಿ ಕಾಶಿ ನಗರವು ಸಂಭ್ರಮದಿಂದ ಸಜ್ಜಾಗಿತ್ತು.

ಇದನ್ನೂ ಓದಿ: ನಾಮಪತ್ರ ಸಲ್ಲಿಕೆ ಒಂದು ದಿನ ಮೊದಲೇ ವಾರಾಣಸಿಯಲ್ಲಿ ಮೋದಿ ರೋಡ್ ಶೋ, ನೇರಪ್ರಸಾರ

2014ರಲ್ಲಿ ಈ ಕ್ಷೇತ್ರದಿಂದ ಭಾರೀ ಅಂತರದಿಂದ ಗೆದ್ದಿರುವ ಪ್ರಧಾನಿ ಮೋದಿಯವರು ನಾಳೆ ನಾಮಪತ್ರ ಸಲ್ಲಿಸುವ ಮುನ್ನ ರೋಡ್‌ಶೋ ನಡೆಯುತ್ತಿದೆ. ವಾರಾಣಸಿಯಲ್ಲಿ ಬಿಜೆಪಿಯ 12 ಮುಖ್ಯಮಂತ್ರಿಗಳು ಈ ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ. 2019ರಲ್ಲಿ, ಪಿಎಂ ಮೋದಿ ಅವರು ತಮ್ಮ ಹತ್ತಿರದ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷದ ಶಾಲಿನಿ ಯಾದವ್ ಅವರನ್ನು ಸೋಲಿಸುವ ಮೂಲಕ 6.7 ಲಕ್ಷ ಮತಗಳನ್ನು ಗಳಿಸಿದ್ದರು.

ಈ ಬಾರಿ ವಾರಾಣಸಿಯಲ್ಲಿ ಜೂನ್ 1ರಂದು ಕೊನೆಯ ಹಂತದ ಚುನಾವಣೆ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಕೊಟ್ಟ ಮಾತಿನಂತೆ ಬಾಗಲಕೋಟೆಯ ಯುವತಿಗೆ ಪತ್ರ ಬರೆದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಐದು ಕಿಲೋಮೀಟರ್ ಉದ್ದದ ಬೃಹತ್ ರೋಡ್‌ಶೋ ನಡೆಸಿದರು. ಈ ಮೂಲಕ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಮುಂಬರುವ ನಾಮಪತ್ರ ಸಲ್ಲಿಕೆಗೆ ವೇದಿಕೆ ಸಿದ್ಧಪಡಿಸಿದರು. ದಾರಿಯುದ್ದಕ್ಕೂ ಮಹಿಳೆಯರ ಸಾಂಪ್ರದಾಯಿಕ ನೃತ್ಯಗಳು ಮತ್ತು ಪುರುಷರಿಂದ ಉತ್ಸಾಹಭರಿತ ಧ್ವಜಾರೋಹಣ ಸೇರಿದಂತೆ ರೋಮಾಂಚಕ ಪ್ರದರ್ಶನಗಳು ಹಬ್ಬದ ವಾತಾವರಣವನ್ನು ಹೆಚ್ಚಿಸಿತ್ತು. ಪುರಾತನ ನಗರದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಎತ್ತಿ ಹಿಡಿಯುವ ಮೂಲಕ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಆಶೀರ್ವಾದ ಪಡೆಯುವ ಮೂಲಕ ರೋಡ್‌ಶೋ ಸಮಾಪ್ತಿಗೊಂಡಿತು.

ವಾರಾಣಸಿ ಬಿಜೆಪಿ ಮತ್ತು ಪ್ರಧಾನಿ ಮೋದಿಗೆ ಅಪಾರ ಮಹತ್ವವನ್ನು ಹೊಂದಿದೆ. ಬಿಜೆಪಿ ಭದ್ರಕೋಟೆಯಾಗಿ ಕಾರ್ಯ ನಿರ್ವಹಿಸುತ್ತಿದೆ. ವಾರಾಣಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ಅವರನ್ನು ಕಾಂಗ್ರೆಸ್ ಪಕ್ಷವು ಕಣಕ್ಕಿಳಿಸಿದೆ. ಇದು ಲೋಕಸಭೆಯ ಸ್ಪರ್ಧೆಯಲ್ಲಿ ಪ್ರಧಾನಿಯೊಂದಿಗೆ ಅಜಯ್ ರೈ ಅವರ ಮೂರನೇ ಚುನಾವಣಾ ಮುಖಾಮುಖಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ