ಭುವನೇಶ್ವರ್ (ಒಡಿಶಾ ) ಮೇ 11: ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ (Mani Shankar Aiyar) ಅವರ ‘ಪಾಕಿಸ್ತಾನವನ್ನು ಗೌರವಿಸಿ’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಆರ್ಥಿಕ ಸಮಸ್ಯೆಗಳಿಂದಾಗಿ ಭಾರತದಿಂದ ದೂರವಿರುವ ನೆರೆರಾಷ್ಟ್ರ ಪಾಕಿಸ್ತಾನ (Pakistan) ತನ್ನ ಪರಮಾಣು ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡಬೇಕಾದ ಪರಿಸ್ಥಿತಿಯಲ್ಲಿದೆ ಎಂದು ಶನಿವಾರ ವ್ಯಂಗ್ಯವಾಡಿದ್ದಾರೆ. ಒಡಿಶಾದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ಪಾಕಿಸ್ತಾನ ಪರಮಾಣು ಬಾಂಬ್‌ಗಳನ್ನು ಹೊಂದಿದೆ ಎಂದು ಹೇಳುವ ಮೂಲಕ ಭಾರತದ ಜನರನ್ನು ಹೆದರಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಂತಹ ದುರ್ಬಲ ಮನೋಭಾವವು ಈ ಹಿಂದೆ ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಿತು ಎಂದಿದ್ದಾರೆ ಮೋದಿ.
“ಕಾಂಗ್ರೆಸ್ ನಿರಂತರವಾಗಿ ತನ್ನದೇ ದೇಶವನ್ನು ಹೆದರಿಸಲು ಪ್ರಯತ್ನಿಸುತ್ತಿದೆ. ‘ಎಚ್ಚರಿಕೆ, ಪಾಕಿಸ್ತಾನದಲ್ಲಿ ಅಣುಬಾಂಬ್ ಇದೆ’ ಎಂದು ಅವರು ಹೇಳುತ್ತಾರೆ. ಈ ದುರ್ಬಲರು ಭಾರತದ ಆತ್ಮವನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಯಾವಾಗಲೂ ಅಂತಹ ಮನೋಭಾವವನ್ನು ಹೊಂದಿತ್ತು. ಪಾಕಿಸ್ತಾನ ತಮ್ಮ ಸ್ವಂತ ಬಾಂಬ್‌ಗಳನ್ನು ಸಹ ನಿಭಾಯಿಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ. ಅವರು ತಮ್ಮ ಬಾಂಬ್‌ಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರ ಕಳಪೆ ಗುಣಮಟ್ಟದ ಕಾರಣದಿಂದ ಯಾರೂ ಖರೀದಿಸಲು ಬಯಸುವುದಿಲ್ಲ. ಕಾಂಗ್ರೆಸ್ ಪಕ್ಷದ ದುರ್ಬಲ ಧೋರಣೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ಜನರು ಆರು ದಶಕಗಳಿಂದ ಭಯೋತ್ಪಾದನೆಯನ್ನು ಎದುರಿಸಬೇಕಾಯಿತು” ಎಂದು ಮೋದಿ ಹೇಳಿದ್ದಾರೆ.
#WATCH | While addressing a public meeting in Odisha’s Kandhamal, PM Narendra Modi says, “Time and again Congress try to scare its own country. They say ‘sambhal ke chalo Pakistan ke pass atom bomb hai. Ye mare pade log, desh ke man ko bhi maar rahe hain’. They talk about… pic.twitter.com/DmbBWnZpfX
— ANI (@ANI) May 11, 2024
ಹಳೆಯ ವೈರಲ್ ವಿಡಿಯೊದಲ್ಲಿ, ಮಣಿಶಂಕರ್ ಅಯ್ಯರ್ ಅವರು ಪಾಕಿಸ್ತಾನ ಪರಮಾಣು ಬಾಂಬ್‌ಗಳನ್ನು ಹೊಂದಿರುವುದರಿಂದ ಪಾಕಿಸ್ತಾನಕ್ಕೆ ಭಾರತ ಗೌರವ ನೀಡಬೇಕು. ಪಾಕಿಸ್ತಾನದಲ್ಲಿ ಹುಚ್ಚನೊಬ್ಬ ಅಧಿಕಾರಕ್ಕೆ ಬಂದರೆ ಬಾಂಬ್ ಬಳಸಿ ಭಾರತಕ್ಕೆ ಹಾನಿ ಮಾಡಬಹುದೆಂದು ಹೇಳಿದ್ದರು.
ಮಣಿಶಂಕರ್ ಅಯ್ಯರ್ ಅವರ ಹೇಳಿಕೆಯಿಂದ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದ್ದು, ಬಿಜೆಪಿಯು ಪ್ರಧಾನಿ ಮೋದಿಯವರ “ಎಡವಟ್ಟು”ಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.”ಕಾಂಗ್ರೆಸ್ ಕೆಲವು ತಿಂಗಳ ಹಿಂದೆ ಮಣಿಶಂಕರ್ ಅಯ್ಯರ್ ಅವರು ಮಾಡಿದ ಕೆಲವು ಟೀಕೆಗಳಿಂದ ಸಂಪೂರ್ಣವಾಗಿ ಭಿನ್ನಾಭಿಪ್ರಾಯವನ್ನು ಹೊಂದಿದೆ. ಪ್ರಧಾನಿ ಮೋದಿಯವರ ದೈನಂದಿನ ಎಡವಟ್ಟುಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನದಲ್ಲಿ ಬಿಜೆಪಿಯು ಇಂದು ಅದನ್ನು ಮತ್ತೆ ಉಲ್ಲೇಖಿಸುತ್ತಿದೆ. ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಹೇಳಿದ್ದಾರೆ.
ಇದನ್ನೂ ಓದಿ: Video: ಬಾಲಕಿಯ ಫೋಟೋಗೆ ಪ್ರಧಾನಿ ಆಟೋಗ್ರಾಫ್, ಈ ಹುಡುಗಿಗೆ ಮೋದಿ ಫಿದಾ ಆಗಿದ್ದೇಕೆ? ಇದರ ಹಿಂದಿದೆ ವಿಶೇಷ ಕಥೆ
ಗೃಹ ಸಚಿವ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಕೂಡಾ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
“ಮಣಿಶಂಕರ್ ಅಯ್ಯರ್ ಅವರು ಪಾಕಿಸ್ತಾನವು ಪರಮಾಣು ಬಾಂಬ್ ಹೊಂದಿರುವುದರಿಂದ ಅದನ್ನು ಗೌರವಿಸಿ ಎಂದು ಹೇಳುತ್ತಿದ್ದಾರೆ. ಕೆಲವು ದಿನಗಳ ಹಿಂದೆ, ಇಂಡಿಯಾ ಬ್ಲಾಕ್ ನಾಯಕ ಫಾರೂಕ್ ಅಬ್ದುಲ್ಲಾ ಪಾಕಿಸ್ತಾನದಲ್ಲಿ ಪರಮಾಣು ಬಾಂಬ್ ಇರುವುದರಿಂದ ಪಿಒಕೆ ಬಗ್ಗೆ ಮಾತನಾಡಬೇಡಿ ಎಂದು ಹೇಳಿದ್ದರು.ಪಿಒಕೆ ಭಾರತಕ್ಕೆ ಸೇರಿದ್ದು ಮತ್ತು ಅದನ್ನು ಯಾವುದೇ ಶಕ್ತಿ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ನಾನು ಕಾಂಗ್ರೆಸ್ ಮತ್ತು ಇಂಡಿಯಾ ಬಣಕ್ಕೆ ಹೇಳಲು ಬಯಸುತ್ತೇನೆ ಎಂದಿದ್ದರು ಅಮಿತ್ ಶಾ.
ಏತನ್ಮಧ್ಯೆ, ಸಾರ್ವತ್ರಿಕ ಚುನಾವಣೆ ಫಲಿತಾಂಶದ ನಂತರ ಲೋಕಸಭೆಯಲ್ಲಿ ಕಾಂಗ್ರೆಸ್ 50 ಕ್ಕಿಂತ ಕಡಿಮೆ ಸ್ಥಾನಗಳಿಗೆ ಇಳಿಯಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:13 pm, Sat, 11 May 24