ಆಮ್ ಆದ್ಮಿ ನಾಯಕರು ಹೋಲ್​ಸೇಲ್ ಡ್ರಗ್ಸ್ ವ್ಯಾಪಾರಿಗಳು; ಪಂಜಾಬ್‌ನಲ್ಲಿ ಮೋದಿ ಟೀಕೆ

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು. ಅವರನ್ನು ತಿಹಾರ್ ಜೈಲಿಗೆ ಹಾಕಲಾಗಿತ್ತು. ಪ್ರಸ್ತುತ ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನಿನ ಮೇಲೆ ಕೇಜ್ರಿವಾಲ್ ಬಿಡುಗಡೆಯಾಗಿದ್ದಾರೆ. ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಪಂಜಾಬ್​ನಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಆಮ್ ಆದ್ಮಿ ನಾಯಕರು ಹೋಲ್​ಸೇಲ್ ಡ್ರಗ್ಸ್ ವ್ಯಾಪಾರಿಗಳು; ಪಂಜಾಬ್‌ನಲ್ಲಿ ಮೋದಿ ಟೀಕೆ
ಪ್ರಧಾನಿ ನರೇಂದ್ರ ಮೋದಿ
Follow us
ಸುಷ್ಮಾ ಚಕ್ರೆ
|

Updated on: May 25, 2024 | 7:56 PM

ಜಲಂಧರ್: ಆಮ್ ಆದ್ಮಿ ಪಕ್ಷದ (Aam Aadmi Party) ನಾಯಕರು “ಡ್ರಗ್‌ನ ಹೋಲ್​ಸೇಲ್ ವ್ಯಾಪಾರಿಗಳು” ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಆರೋಪಿಸಿದ್ದಾರೆ. ಕಾಂಗ್ರೆಸ್ 1984ರಲ್ಲಿ ಸಿಖ್ಖರ ಹತ್ಯಾಕಾಂಡಕ್ಕೆ ಅವಕಾಶ ಮಾಡಿಕೊಟ್ಟಿತು ಮತ್ತು ಗಲಭೆಕೋರರನ್ನು ರಕ್ಷಿಸಿತು ಎಂದು ಅವರು ಟೀಕಿಸಿದ್ದಾರೆ. ಪಂಜಾಬ್‌ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಮೋದಿ, ಜಲಂಧರ್ ಮತ್ತು ಗುರುದಾಸ್‌ಪುರದಲ್ಲಿ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು.

ಈ ಚುನಾವಣಾ ಪ್ರಚಾರದ ವೇಳೆ ಮತ್ತೊಮ್ಮೆ ಸಿಎಂ ಭಗವಂತ್ ಮಾನ್ ಅವರನ್ನು ‘ಕಾಗ್ಜಿ ಮುಖ್ಯಮಂತ್ರಿ’ ಎಂದು ಮೋದಿ ಟೀಕಿಸಿದ್ದಾರೆ. ಅವರು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಂದ ಆದೇಶವನ್ನು ಪಡೆಯಲು ದೆಹಲಿಯ ತಿಹಾರ್ ಜೈಲಿಗೆ ಹೋಗಬೇಕಾಯಿತು ಎಂದು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: PM Modi: ಹಿಮಾಚಲ ಪ್ರದೇಶದ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿದ ಪ್ರಧಾನಿ ನರೇಂದ್ರ ಮೋದಿ

“ಎಎಪಿ 2 ತಿಂಗಳಲ್ಲಿ ಡ್ರಗ್ಸ್ ವ್ಯಾಪಾರವನ್ನು ಕೊನೆಗೊಳಿಸುವುದಾಗಿ ಭರವಸೆ ನೀಡಿತ್ತು, ಆದರೆ, ಇಂದು ಪಂಜಾಬ್‌ನಲ್ಲಿ ಡ್ರಗ್ ಡೀಲರ್‌ಗಳಿಗೆ ಉಚಿತ ಪರವಾನಗಿ ನೀಡಲಾಗಿದೆ. ಇದರಿಂದ ಹಲವು ಕುಟುಂಬಗಳು ನಾಶವಾಗುತ್ತಿವೆ” ಎಂದು ಜಲಂಧರ್‌ನಲ್ಲಿ ಮೋದಿ ಹೇಳಿದ್ದಾರೆ. ದೆಹಲಿಯಲ್ಲಿ ಆಪಾದಿತ ಮದ್ಯ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ ಮೋದಿ ಅವರು, “ಇಷ್ಟು ದೊಡ್ಡ ಮದ್ಯದ ಹಗರಣವನ್ನು ಮಾಡಿದವರು ಡ್ರಗ್ಸ್ ಮಾಫಿಯಾದಲ್ಲಿ ಕೂಡ ಭಾಗಿಯಾಗಿರಬಹುದು. ಪಂಜಾಬ್‌ನ ಜನರು ಆಮ್ ಆದ್ಮಿ ಪಕ್ಷದ ನಾಯಕರು ಸ್ವತಃ ಡ್ರಗ್‌ಗಳ ಹೋಲ್​ಸೇಲ್ ವ್ಯಾಪಾರಿಗಳು ಎಂದು ಅರ್ಥಮಾಡಿಕೊಂಡಿದ್ದಾರೆ. ಪಂಜಾಬ್ ಗಡಿ ರಾಜ್ಯವಾಗಿದ್ದು, ಅದನ್ನು ಮತ್ತೆ ಬಿಕ್ಕಟ್ಟಿಗೆ ಬೀಳಲು ಬಿಡಬಾರದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಮತ್ತೊಮ್ಮೆ ಗೆದ್ದರೆ ತಮ್ಮ ದೇವಸ್ಥಾನ ತಾವೇ ಕಟ್ಟಿಕೊಳ್ತಾರೆ: ಶಿವರಾಜ ತಂಗಡಗಿ ಲೇವಡಿ

ಇದಕ್ಕೂ ಮೊದಲು ಗುರುದಾಸ್‌ಪುರದಲ್ಲಿ ಮೋದಿ ಅವರು, “ಕೇಜ್ರಿವಾಲ್ ದೆಹಲಿಯಿಂದಲೇ ರಿಮೋಟ್ ಕಂಟ್ರೋಲ್‌ನಲ್ಲಿ ಪಂಜಾಬ್ ಸರ್ಕಾರವನ್ನು ನಡೆಸುತ್ತಿದ್ದಾರೆ. ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್ ಸ್ವಂತವಾಗಿ ಒಂದು ನಿರ್ಧಾರವನ್ನೂ ತೆಗೆದುಕೊಳ್ಳಲು ಸಾಧ್ಯವಿಲ್ಲ. ಅವರ ಮಾಲೀಕ ಜೈಲಿನಲ್ಲಿದ್ದುದರಿಂದ ಪಂಜಾಬ್ ಸರ್ಕಾರವು ಸ್ಥಗಿತಗೊಂಡಿತು. ಆದೇಶವನ್ನು ಸ್ವೀಕರಿಸಲು ಮತ್ತು ಸರ್ಕಾರವನ್ನು ನಡೆಸಲು ಮುಖ್ಯಮಂತ್ರಿ ಕೂಡ ತಿಹಾರ್ ಜೈಲಿಗೆ ಹೋಗಿ ಕೇಜ್ರಿವಾಲ್​ಗೆ ತಮ್ಮ ವರದಿ ಕಾರ್ಡ್ ನೀಡಬೇಕಾಗಿತ್ತು ಎಂದು ಟೀಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ