ನೇಹಾ, ಜೈನಮುನಿ ಹತ್ಯೆ, ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿದ್ದ ಪ್ರಕರಣ ಪ್ರಸ್ತಾಪಿಸಿ ಕಾಂಗ್ರೆಸ್​ ವಿರುದ್ಧ ಮೋದಿ ಚಾಟಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಏ.28) ಬೆಳಗ್ಗೆ ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ಸಮಾವೇಶದ ಮುಖಾಂತರ ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ಮೋದಿ ಮತಯಾಚಿಸಿದರು.

ನೇಹಾ, ಜೈನಮುನಿ ಹತ್ಯೆ, ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿದ್ದ ಪ್ರಕರಣ ಪ್ರಸ್ತಾಪಿಸಿ ಕಾಂಗ್ರೆಸ್​ ವಿರುದ್ಧ ಮೋದಿ ಚಾಟಿ
ಪ್ರಧಾನಿ ಮೋದಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Apr 28, 2024 | 12:54 PM

ಬೆಳಗಾವಿ, ಏಪ್ರಿಲ್​ 28: ರಾಜ್ಯದಲ್ಲಿ ಕಾಂಗ್ರೆಸ್ (Congress)​ ಅಧಿಕಾರಕ್ಕೆ ಬಂದ ಮೇಲೆ ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಅಪಮಾನ ಮಾಡಲಾಯಿತು. ಚಿಕ್ಕೋಡಿಯಲ್ಲಿ ಜೈನ ಮುನಿಯ ಹತ್ಯೆಯಾಯಿತು. ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಕೊಲೆಯಾಯಿತು. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಂಡಿತು. ಈ ಸ್ಫೋಟವನ್ನು ಕಾಂಗ್ರೆಸ್​ ಸಿಲೆಂಡರ್ ಬ್ಲಾಸ್ಟ್​ ಎಂದಿತು. ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸರಿಯಿಲ್ಲ. ತುಷ್ಟೀಕರಣದಿಂದ ಕಾಂಗ್ರೆಸ್​ ಸರ್ಕಾರದಲ್ಲಿ ಇಂಥ ಘಟನೆ ನಡೆಯುತ್ತಿವೆ. ಕಾಂಗ್ರೆಸ್ ಮತಕ್ಕಾಗಿ ತುಷ್ಟೀಕರಣ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ದೇಶವಿರೋಧಿ ಪಿಎಫ್​ಐ ಸಂಘಟನೆ ಕಾಂಗ್ರೆಸ್​ಗೆ ಬೆಂಬಲ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ಕೊರೊನಾ ಸಂದರ್ಭದಲ್ಲಿ ವ್ಯಾಕ್ಸಿನ್ ಅನ್ನು ವಿರೋಧಿಸಿದರು. ಇದು ಬಿಜೆಪಿಯ ವ್ಯಾಕ್ಸಿನ್ ಅಂತ ಹೇಳಿದರು. ಈಗ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯಾಗಿದೆ. ಈ ಪ್ರಕರಣ ಇಡೀ ದೇಶದಲ್ಲಿ ಸದ್ದು ಮಾಡಿದೆ. ಔರಂಗಜೇಬ್​ನನ್ನು ಗುಣಗಾನ ಮಾಡಿದವರ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ. ನಮ್ಮ ದೇಶದ ರಾಜ ಮಹಾರಾಜರ ಬಗ್ಗೆ ಕಾಂಗ್ರೆಸ್​ಗೆ ಗೌರವ ಇಲ್ಲ. ಆದರೆ ನವಾಬ್, ಬಾದಶಾಹ್, ಸುಲ್ತಾನ್​​ಗಳ ಬಗ್ಗೆ ಅಪಾರ ಗೌರವ ಹೊಂದಿದೆ ಎಂದು ವಾಗ್ದಾಳಿ ಮಾಡಿದರು.

ಕರ್ನಾಟಕದಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ಯಾರೂ ಬರುತ್ತಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ​ ರಸ್ತೆ ಅಭಿವೃದ್ಧಿ ಕೂಡ ಮಾಡುತ್ತಿಲ್ಲ. ಎಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತೆ ಅಲ್ಲಿ ಸರ್ವನಾಶ ತರುತ್ತೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ರೈತರಿಗೆ ವಿಶ್ವಾಸದ್ರೋಹ ಮಾಡಿದೆ ಎಂದು ಕಿಡಿ ಕಾರಿದರು.

ಇದನ್ನೂ ಓದಿ: ಬೆಳಗಾವಿಯ ಬಿಜೆಪಿ ಸಮಾವೇಶದಲ್ಲಿ ಗಿಫ್ಟ್ ನೋಡಿ ಭಾವುಕರಾದ ಮೋದಿ, ವಿಡಿಯೋ ನೋಡಿ

ಸುಪ್ರೀಂಕೋರ್ಟ್​ನಲ್ಲಿ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳಿಗೆ ಕಪಾಳ ಮೋಕ್ಷವಾಗಿದೆ. ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿತು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬರ್ಬಾದ್ ಮಾಡಲು ಹೊರಟಿದ್ದ ಕಾಂಗ್ರೆಸ್ ದೇಶದ ಜನರ ಕ್ಷಮೆ ಕೇಬೇಕು. ಈಗಲೂ ಕಾಂಗ್ರೆಸ್​ನವರು ಬ್ರಿಟಿಷರ ಗುಲಾಮರಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಬ್ಬ ವ್ಯಕ್ತಿಯನ್ನು ಭಾರತದ ರಾಜ, ಮಹಾರಾಜ್ ಅಂತ ಬಿಂಬಿಸಲು ಕಾಂಗ್ರೆಸ್ ಯತ್ನಿಸುತ್ತಿದೆ. ಹೀಗೆ ಹೇಳಿ ಛತ್ರಪತಿ ಶಿವಾಜಿ ಮತ್ತು ಕಿತ್ತೂರು ಚೆನ್ನಾಮ್ಮನಿಗೆ ಅಪಮಾನ ಮಾಡುತ್ತಿದೆ. ಕಾಂಗ್ರೆಸ್​​ನವರಿಗೆ ರಾಜ, ಮಹಾರಾಜರ ಕೊಡುಗೆಯ ಸ್ಮರಣೆ ಬೇಕಿಲ್ಲ. ನವಾಬ್, ಸುಲ್ತಾನರ ಪರ ಕಾಂಗ್ರೆಸ್ ಕೆಲಸ ಮಾತನಾಡುತ್ತೆ ಎಂದು ವಾಗ್ದಾಳಿ ಮಾಡಿದರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಇದೇ ಮಾನಸಿಕತೆಯನ್ನು ಪ್ರದರ್ಶಿಸಿದೆ. ಕಾಂಗ್ರೆಸ್​ ಜನರನ್ನು ದಿವಾಳಿ ಮಾಡಲು ಹೊರಟಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ​​ ನಿಮ್ಮ ಆಸ್ತಿಗಳನ್ನು ತಪಾಸಣೆ ಮಾಡುತ್ತೆ. ಮಹಿಳೆಯರ ಬಳಿಯ ಹಣ, ಚಿನ್ನ ಮತ್ತು ಮಂಗಳ ಸೂತ್ರವನ್ನು ತಪಾಸಣೆ ಮಾಡುತ್ತೆ. ನಿಮ್ಮ ಆಸ್ತಿಯನ್ನು ಹಂಚುತ್ತದೆ. ಮತಕ್ಕಾಗಿ ತುಷ್ಟೀಕರಣ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಕುಂಟಿತವಾಗುತ್ತದೆ. ಕರ್ನಾಟಕದಲ್ಲಿ ಇದೇ ಆಗಿದೆ. ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಮೇಲೆ ರಸ್ತೆ ನಿರ್ಮಾಣ, ವಿದ್ಯುತ್​ ಸಮಸ್ಯೆ, ಉದ್ಯೋಗ ಸಮಸ್ಯೆ ಉದ್ಭವಿಸಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ