AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟ್ ಬ್ಯಾಂಕ್ ಓಲೈಸಲು ಸನ್ಯಾಸಿಗಳ ಮೇಲೆ ಟಿಎಂಸಿ ದಾಳಿ ನಡೆಸುತ್ತಿದೆ: ಮೋದಿ

ಬಂಗಾಳದಲ್ಲಿ ಹಿಂದೂಗಳ ಧಾರ್ಮಿಕ ನಂಬಿಕೆಗೆ ಧಕ್ಕೆ ತರುವ ಹೊಣೆಗಾರಿಕೆಯನ್ನು ಟಿಎಂಸಿ ವಹಿಸಿಕೊಂಡಿರುವುದು ನಾಚಿಕೆಗೇಡಿನ ಸಂಗತಿ. ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಆಶ್ರಮದ ಸನ್ಯಾಸಿಗಳಿಗೆ ಸಿಎಂ ಬೆದರಿಕೆ ಹಾಕುತ್ತಿದ್ದಾರೆ. ಭಾನುವಾರ ರಾತ್ರಿ ರಾಮಕೃಷ್ಣ ಮಿಷನ್ ಆಶ್ರಮ ಜಲ್ಪೈಗುರಿಯಲ್ಲಿ ದಾಳಿ ನಡೆದಿದ್ದು, ಬಂಗಾಳದ ಜನರು ಇದನ್ನು ಸಹಿಸುವುದಿಲ್ಲ ಎಂದಿದ್ದಾರೆ ಮೋದಿ.

ವೋಟ್ ಬ್ಯಾಂಕ್ ಓಲೈಸಲು ಸನ್ಯಾಸಿಗಳ ಮೇಲೆ ಟಿಎಂಸಿ ದಾಳಿ ನಡೆಸುತ್ತಿದೆ: ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on:May 20, 2024 | 7:56 PM

Share

ಝಾರ್‌ಗ್ರಾಮ್‌ (ಪಶ್ಚಿಮ ಬಂಗಾಳ) ಮೇ 20: ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘದ ವಿರುದ್ಧ ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ಸೋಮವಾರ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಝಾರ್‌ಗ್ರಾಮ್‌ನಲ್ಲಿ ತಮ್ಮ ಲೋಕಸಭಾ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ರಾಜ್ಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಡಳಿತವು ‘ವೋಟ್ ಬ್ಯಾಂಕ್ ರಾಜಕೀಯವನ್ನು ಓಲೈಸಲು ಸನ್ಯಾಸಿಗಳ ಮೇಲೆ ದಾಳಿ ನಡೆಸಲು ಬಿಡುತ್ತಿದೆ’ ಎಂದು ಆರೋಪಿಸಿದರು. ಅದೇ ವೇಳೆ “ಟಿಎಂಸಿ ಗೂಂಡಾಗಳು ರಾಮಕೃಷ್ಣ ಮಿಷನ್‌ನ ಆಶ್ರಮದ ಮೇಲೆ ದಾಳಿ ಮಾಡುವ ಧೈರ್ಯ ತೋರಿಸುತ್ತಿದ್ದಾರೆ” ಎಂದು ಪ್ರಧಾನಿ ಹೇಳಿದರು.

“ಬಂಗಾಳದಲ್ಲಿ ಹಿಂದೂಗಳ ಧಾರ್ಮಿಕ ನಂಬಿಕೆಗೆ ಧಕ್ಕೆ ತರುವ ಹೊಣೆಗಾರಿಕೆಯನ್ನು ಟಿಎಂಸಿ ವಹಿಸಿಕೊಂಡಿರುವುದು ನಾಚಿಕೆಗೇಡಿನ ಸಂಗತಿ. ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಆಶ್ರಮದ ಸನ್ಯಾಸಿಗಳಿಗೆ ಸಿಎಂ ಬೆದರಿಕೆ ಹಾಕುತ್ತಿದ್ದಾರೆ. ಭಾನುವಾರ ರಾತ್ರಿ ರಾಮಕೃಷ್ಣ ಮಿಷನ್ ಆಶ್ರಮ ಜಲ್ಪೈಗುರಿಯಲ್ಲಿ ದಾಳಿ ನಡೆದಿದ್ದು, ಬಂಗಾಳದ ಜನರು ಇದನ್ನು ಸಹಿಸುವುದಿಲ್ಲ ಎಂದಿದ್ದಾರೆ ಮೋದಿ. ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘದ ಸನ್ಯಾಸಿಗಳ ವಿರುದ್ಧ ಮಮತಾ ಬ್ಯಾನರ್ಜಿ ಅವರು ಇತ್ತೀಚೆಗೆ ಮಾಡಿದ ಹೇಳಿಕೆಯನ್ನು ಟೀಕಿಸಿದ ಪ್ರಧಾನಿ, ಈ ಸಾಮಾಜಿಕ-ಧಾರ್ಮಿಕ ಸಂಸ್ಥೆಗಳಿಗೆ ಟಿಎಂಸಿಯ ವೋಟ್ ಬ್ಯಾಂಕ್ ಅನ್ನು “ಸಮಾಧಾನಪಡಿಸಲು” ಬೆದರಿಕೆ ಹಾಕಲಾಗುತ್ತಿದೆ ಎಂದಿದ್ದಾರೆ.

ಮೋದಿ ಭಾಷಣ

ಇಸ್ಕಾನ್, ರಾಮಕೃಷ್ಣ ಮಿಷನ್ ಮತ್ತು ಭಾರತ ಸೇವಾಶ್ರಮ ಸಂಘ ಸೇವೆ ಮತ್ತು ನೈತಿಕತೆಗೆ ಹೆಸರಾಗಿದೆ, ಆದರೆ ಇಂದು ಬಂಗಾಳದ ಮುಖ್ಯಮಂತ್ರಿ ಬಹಿರಂಗವಾಗಿ ಬೆದರಿಕೆ ಹಾಕುತ್ತಿದ್ದಾರೆ. ವೋಟ್ ಬ್ಯಾಂಕ್ ಓಲೈಕೆಗಾಗಿ ಈ ರೀತಿ ಮಾಡಲಾಗುತ್ತಿದೆ. ಸ್ವತಃ ಸಿಎಂ ಸನ್ಯಾಸಿಗಳಿಗೆ ಬೆದರಿಕೆ ಹಾಕುತ್ತಿರುವುದರಿಂದ ಟಿಎಂಸಿ ಗೂಂಡಾಗಳು ರಾಮಕೃಷ್ಣ ಮಿಷನ್ ಮೇಲೆ ದಾಳಿ ಮಾಡಲು ಹಿಂಜರಿಯುವುದಿಲ್ಲ ಎಂದಿದ್ದಾರೆ.

ಮಮತಾ ಬ್ಯಾನರ್ಜಿ ಹೇಳಿದ್ದೇನು?

ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘದ ಕೆಲವು ಸನ್ಯಾಸಿಗಳು ಬಿಜೆಪಿಯ ಸೂಚನೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಚುನಾವಣಾ ರ‍್ಯಾಲಿಯಲ್ಲಿ ಮಮತಾ ಬ್ಯಾನರ್ಜಿ ಆರೋಪಿಸಿದ್ದರು.

ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ನೀಡುವುದಾಗಿ ರಾಹುಲ್ ಗಾಂಧಿಯೇ ಹೇಳಿದ್ದಾರೆ; ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ರಾಮಕೃಷ್ಣ ಮಿಷನ್‌ನ ಕೆಲವು ಸನ್ಯಾಸಿಗಳು ಬಿಜೆಪಿ ಪರವಾಗಿ ಮತ ಹಾಕುವಂತೆ ಅಸನ್ಸೋಲ್‌ನಲ್ಲಿ ಭಕ್ತರನ್ನು ಕೇಳಿದ್ದಾರೆ ಎಂದು ಅವರು ಆರೋಪಿಸಿದ್ದರು. ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘಗಳೆರಡೂ ಆರೋಪಗಳನ್ನು ತಳ್ಳಿಹಾಕಿದ್ದು ನಾವು ಸಮಾಜ ಸೇವೆಯತ್ತ ಮಾತ್ರ ಗಮನಹರಿಸುತ್ತವೆ ಎಂದು ಹೇಳಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Mon, 20 May 24

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..