ಝಾರ್‌ಗ್ರಾಮ್ (ಪಶ್ಚಿಮ ಬಂಗಾಳ) ಮೇ 20: ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘದ ವಿರುದ್ಧ ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ಸೋಮವಾರ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಝಾರ್‌ಗ್ರಾಮ್‌ನಲ್ಲಿ ತಮ್ಮ ಲೋಕಸಭಾ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ರಾಜ್ಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಡಳಿತವು ‘ವೋಟ್ ಬ್ಯಾಂಕ್ ರಾಜಕೀಯವನ್ನು ಓಲೈಸಲು ಸನ್ಯಾಸಿಗಳ ಮೇಲೆ ದಾಳಿ ನಡೆಸಲು ಬಿಡುತ್ತಿದೆ’ ಎಂದು ಆರೋಪಿಸಿದರು. ಅದೇ ವೇಳೆ “ಟಿಎಂಸಿ ಗೂಂಡಾಗಳು ರಾಮಕೃಷ್ಣ ಮಿಷನ್‌ನ ಆಶ್ರಮದ ಮೇಲೆ ದಾಳಿ ಮಾಡುವ ಧೈರ್ಯ ತೋರಿಸುತ್ತಿದ್ದಾರೆ” ಎಂದು ಪ್ರಧಾನಿ ಹೇಳಿದರು.
“ಬಂಗಾಳದಲ್ಲಿ ಹಿಂದೂಗಳ ಧಾರ್ಮಿಕ ನಂಬಿಕೆಗೆ ಧಕ್ಕೆ ತರುವ ಹೊಣೆಗಾರಿಕೆಯನ್ನು ಟಿಎಂಸಿ ವಹಿಸಿಕೊಂಡಿರುವುದು ನಾಚಿಕೆಗೇಡಿನ ಸಂಗತಿ. ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಆಶ್ರಮದ ಸನ್ಯಾಸಿಗಳಿಗೆ ಸಿಎಂ ಬೆದರಿಕೆ ಹಾಕುತ್ತಿದ್ದಾರೆ. ಭಾನುವಾರ ರಾತ್ರಿ ರಾಮಕೃಷ್ಣ ಮಿಷನ್ ಆಶ್ರಮ ಜಲ್ಪೈಗುರಿಯಲ್ಲಿ ದಾಳಿ ನಡೆದಿದ್ದು, ಬಂಗಾಳದ ಜನರು ಇದನ್ನು ಸಹಿಸುವುದಿಲ್ಲ ಎಂದಿದ್ದಾರೆ ಮೋದಿ.
ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘದ ಸನ್ಯಾಸಿಗಳ ವಿರುದ್ಧ ಮಮತಾ ಬ್ಯಾನರ್ಜಿ ಅವರು ಇತ್ತೀಚೆಗೆ ಮಾಡಿದ ಹೇಳಿಕೆಯನ್ನು ಟೀಕಿಸಿದ ಪ್ರಧಾನಿ, ಈ ಸಾಮಾಜಿಕ-ಧಾರ್ಮಿಕ ಸಂಸ್ಥೆಗಳಿಗೆ ಟಿಎಂಸಿಯ ವೋಟ್ ಬ್ಯಾಂಕ್ ಅನ್ನು “ಸಮಾಧಾನಪಡಿಸಲು” ಬೆದರಿಕೆ ಹಾಕಲಾಗುತ್ತಿದೆ ಎಂದಿದ್ದಾರೆ.
West Bengal rejects TMC’s culture of loot, bullying and misgovernance. People want the BJP. Watch from Jhargram.https://t.co/MNoAMbWJZy
— Narendra Modi (@narendramodi) May 20, 2024
ಇಸ್ಕಾನ್, ರಾಮಕೃಷ್ಣ ಮಿಷನ್ ಮತ್ತು ಭಾರತ ಸೇವಾಶ್ರಮ ಸಂಘ ಸೇವೆ ಮತ್ತು ನೈತಿಕತೆಗೆ ಹೆಸರಾಗಿದೆ, ಆದರೆ ಇಂದು ಬಂಗಾಳದ ಮುಖ್ಯಮಂತ್ರಿ ಬಹಿರಂಗವಾಗಿ ಬೆದರಿಕೆ ಹಾಕುತ್ತಿದ್ದಾರೆ. ವೋಟ್ ಬ್ಯಾಂಕ್ ಓಲೈಕೆಗಾಗಿ ಈ ರೀತಿ ಮಾಡಲಾಗುತ್ತಿದೆ. ಸ್ವತಃ ಸಿಎಂ ಸನ್ಯಾಸಿಗಳಿಗೆ ಬೆದರಿಕೆ ಹಾಕುತ್ತಿರುವುದರಿಂದ ಟಿಎಂಸಿ ಗೂಂಡಾಗಳು ರಾಮಕೃಷ್ಣ ಮಿಷನ್ ಮೇಲೆ ದಾಳಿ ಮಾಡಲು ಹಿಂಜರಿಯುವುದಿಲ್ಲ ಎಂದಿದ್ದಾರೆ.
ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘದ ಕೆಲವು ಸನ್ಯಾಸಿಗಳು ಬಿಜೆಪಿಯ ಸೂಚನೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಚುನಾವಣಾ ರ‍್ಯಾಲಿಯಲ್ಲಿ ಮಮತಾ ಬ್ಯಾನರ್ಜಿ ಆರೋಪಿಸಿದ್ದರು.
ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ನೀಡುವುದಾಗಿ ರಾಹುಲ್ ಗಾಂಧಿಯೇ ಹೇಳಿದ್ದಾರೆ; ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ
ರಾಮಕೃಷ್ಣ ಮಿಷನ್‌ನ ಕೆಲವು ಸನ್ಯಾಸಿಗಳು ಬಿಜೆಪಿ ಪರವಾಗಿ ಮತ ಹಾಕುವಂತೆ ಅಸನ್ಸೋಲ್‌ನಲ್ಲಿ ಭಕ್ತರನ್ನು ಕೇಳಿದ್ದಾರೆ ಎಂದು ಅವರು ಆರೋಪಿಸಿದ್ದರು. ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘಗಳೆರಡೂ ಆರೋಪಗಳನ್ನು ತಳ್ಳಿಹಾಕಿದ್ದು ನಾವು ಸಮಾಜ ಸೇವೆಯತ್ತ ಮಾತ್ರ ಗಮನಹರಿಸುತ್ತವೆ ಎಂದು ಹೇಳಿವೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:51 pm, Mon, 20 May 24