AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಪ್ರಧಾನಿಯವರ ಧ್ಯಾನವು ಮಾದರಿ ಸಂಹಿತೆಯ ಉಲ್ಲಂಘನೆಯಾಗಿದೆ, ಏಕೆಂದರೆ ಮೋದಿಯವರ ಧ್ಯಾನ ಮೇ 30 ರಂದು ಬೆಳಿಗ್ಗೆ 7 ರಿಂದ ಜೂನ್ 1 ರವರೆಗೆ ಇರುತ್ತದೆ.  ಪ್ರಚಾರವನ್ನು ಮುಂದುವರಿಸಲು ಅಥವಾ "ಸದಾ ಸುದ್ದಿಯಲ್ಲಿರಲು ಪ್ರಧಾನ ಮಂತ್ರಿಯ "ತಂತ್ರ" ಇದು  ಎಂದು ಸಿಂಘ್ವಿ ಟೀಕಿಸಿದ್ದಾರೆ.

ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಅಭಿಷೇಕ್ ಮನು ಸಿಂಘ್ವಿ
ರಶ್ಮಿ ಕಲ್ಲಕಟ್ಟ
|

Updated on: May 29, 2024 | 8:58 PM

Share

ದೆಹಲಿ ಮೇ 29: ಮೂರು ದಿನಗಳ ಧ್ಯಾನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಕನ್ಯಾಕುಮಾರಿಗೆ ಹೊರಡುವ ಮೊದಲು, ಕಾಂಗ್ರೆಸ್ ಬುಧವಾರ ಚುನಾವಣಾ ಆಯೋಗವನ್ನು (Election Commission) ಸಂಪರ್ಕಿಸಿದ್ದು, ಪ್ರಧಾನಿಯವರ ಈ ಕ್ರಮವು ಮಾದರಿ ನೀತಿ ಸಂಹಿತೆಯ (MCC) “ಉಲ್ಲಂಘನೆ” ಎಂದು ಹೇಳಿದೆ. 48 ಗಂಟೆಗಳ ಮೌನಾಚರಣೆ ಅವಧಿಯಲ್ಲಿ ಯಾರಿಗೂ ನೇರವಾಗಿ ಅಥವಾ ಪರೋಕ್ಷವಾಗಿ ಪ್ರಚಾರ ಮಾಡಲು ಅವಕಾಶ ನೀಡಬಾರದು ಎಂದು ನಾವು ಚುನಾವಣಾ ಆಯೋಗಕ್ಕೆ ತಿಳಿಸಿದ್ದೇವೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಭಿಷೇಕ್ ಮನು ಸಿಂಘ್ವಿ ದೆಹಲಿಯ ಚುನಾವಣಾ ಆಯೋಗದ ಕಚೇರಿಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿದ ನಂತರ ಸುದ್ದಿಗಾರರಿಗೆ ತಿಳಿಸಿದರು.

ಆದಾಗ್ಯೂ, “ಯಾವುದೇ ನಾಯಕರು ಏನು ಮಾಡಿದರೂ” ನಮ್ಮ ವಿರೋಧಿಸುವುದಿಲ್ಲ ಎಂದು ಸಿಂಘ್ವಿ ಸ್ಪಷ್ಟಪಡಿಸಿದ್ದಾರೆ. “ಮತ್ತೊಂದೆಡೆ, ಪ್ರಧಾನಿಯವರ ಧ್ಯಾನವು ಮಾದರಿ ಸಂಹಿತೆಯ ಉಲ್ಲಂಘನೆಯಾಗಿದೆ, ಏಕೆಂದರೆ ಮೋದಿಯವರ ಧ್ಯಾನ ಮೇ 30 ರಂದು ಬೆಳಿಗ್ಗೆ 7 ರಿಂದ ಜೂನ್ 1 ರವರೆಗೆ ಇರುತ್ತದೆ.  ಪ್ರಚಾರವನ್ನು ಮುಂದುವರಿಸಲು ಅಥವಾ “ಸದಾ ಸುದ್ದಿಯಲ್ಲಿರಲು ಪ್ರಧಾನ ಮಂತ್ರಿಯ “ತಂತ್ರ” ಇದು  ಎಂದು ಸಿಂಘ್ವಿ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಘ್ವಿ

“ಪ್ರಧಾನಿ ಅವರು ತಮ್ಮ ಮೌನ ವ್ರತವನ್ನು  24-48 ಗಂಟೆಗಳ ಕಾಲ ಜೂನ್ 1 ರ ಸಂಜೆಗೆ ಮುಂದೂಡಬೇಕೆಂದು ನಾವು ಚುನಾವಣಾ ಆಯೋಗವನ್ನು ಕೇಳಿದ್ದೇವೆ. ಆದರೆ ಅವರು ನಾಳೆಯೇ ಪ್ರಾರಂಭಿಸಲು ಪಟ್ಟು ಹಿಡಿದರೆ ಅದನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಸಿಂಘ್ವಿ ಹೇಳಿದ್ದಾರೆ.

2019 ರಲ್ಲಿ, ಪ್ರಧಾನಿ ಮೋದಿ ಅವರು ಸತತ ಎರಡನೇ ಅವಧಿಗೆ ಆಯ್ಕೆಯಾದಾಗ ಆ ವರ್ಷದ ಲೋಕಸಭೆ ಚುನಾವಣೆಯ ಫಲಿತಾಂಶಗಳ ಘೋಷಣೆಗೆ ಮುಂಚಿತವಾಗಿ ಬದರಿನಾಥ್ ಮತ್ತು ಕೇದಾರನಾಥ ದೇಗುಲಗಳಿಗೆ ಭೇಟಿ ನೀಡಿದ್ದರು.

ಇದನ್ನೂ ಓದಿ: ಸಿನಿಮಾದಿಂದಲೇ ಜನರಿಗೆ ಮಹಾತ್ಮಾ ಗಾಂಧಿ ಗೊತ್ತಾಗಿದ್ದು; ಮೋದಿ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ

ಬಿಜೆಪಿಯ ಹಿರಿಯ ನಾಯಕ ಮತ್ತು ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಾರಣಾಸಿಯಿಂದ ಹ್ಯಾಟ್ರಿಕ್ ಗೆಲುವನ್ನು ಬಯಸುತ್ತಿದ್ದಾರೆ, ಅಲ್ಲಿಂದ ಅವರು 2014 ರಲ್ಲಿ ತಮ್ಮ ಚೊಚ್ಚಲ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಉತ್ತರ ಪ್ರದೇಶದ ಏಳನೇ ಮತ್ತು ಅಂತಿಮ ಹಂತದಲ್ಲಿ ಶನಿವಾರ ಮತದಾನ ನಡೆಯಲಿದೆ. ಜೂನ್ 4 ರಂದು ಲೋಕಸಭೆ ಚುನಾವಣೆ ಫಲಿತಾಂಶ ಬರಲಿದೆ.

ಏಳನೇ ಹಂತದ ಪ್ರಚಾರ ಗುರುವಾರ ಸಂಜೆ 5 ಗಂಟೆಗೆ ಕೊನೆಗೊಳ್ಳಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ