AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

17ನೇ ಲೋಕಸಭೆಯನ್ನು ವಿಸರ್ಜಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು; ಜೂ. 7ರಂದು ಹೊಸ ಸರ್ಕಾರ ರಚನೆ ಸಾಧ್ಯತೆ

ಏಪ್ರಿಲ್ 19ರಿಂದ ಶುರುವಾದ ಲೋಕಸಭಾ ಚುನಾವಣೆ 7 ಹಂತಗಳಲ್ಲಿ ನಡೆದಿದೆ. ಜೂನ್ 4ಕ್ಕೆ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಗೆ ಬಹುಮತವಿಲ್ಲದ ಕಾರಣ ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಆ ರಾಜೀನಾಮೆಯನ್ನು ಸ್ವೀಕರಿಸಿರುವ ದ್ರೌಪದಿ ಮುರ್ಮು ಸಂಸತ್ ಅನ್ನು ವಿಸರ್ಜಿಸಿದ್ದಾರೆ.

17ನೇ ಲೋಕಸಭೆಯನ್ನು ವಿಸರ್ಜಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು; ಜೂ. 7ರಂದು ಹೊಸ ಸರ್ಕಾರ ರಚನೆ ಸಾಧ್ಯತೆ
ನರೇಂದ್ರ ಮೋದಿ- ದ್ರೌಪದಿ ಮುರ್ಮು
ಸುಷ್ಮಾ ಚಕ್ರೆ
|

Updated on: Jun 05, 2024 | 7:41 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕ್ಯಾಬಿನೆಟ್ ನಿನ್ನೆ ಸಭೆ ನಡೆಸಿದೆ. ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶ (Lok Sabha Polls Result) ಪ್ರಕಟವಾಗಿದ್ದು, ಯಾವುದೇ ಪಕ್ಷಕ್ಕೂ ಬಹುಮತ ಸಿಕ್ಕಿಲ್ಲ. ಈ ನಡುವೆ ಇಂದು ಬೆಳಗ್ಗೆ ನರೇಂದ್ರ ಮೋದಿಯವರು ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಸಲ್ಲಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ 17ನೇ ಲೋಕಸಭೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸುವಂತೆ ಸಲಹೆ ನೀಡಿದೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 17ನೇ ಲೋಕಸಭೆಯನ್ನು ಇಂದು ವಿಸರ್ಜಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ಈಗಾಗಲೇ ಎನ್​ಡಿಎ ಒಕ್ಕೂಟ ಸಭೆ ನಡೆಸಿದ್ದು, ಒಕ್ಕೊರಲಿನಿಂದ ನರೇಂದ್ರ ಮೋದಿಯವರನ್ನೇ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: Lok Sabha Election Results 2024: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ

ರಾಷ್ಟ್ರಪತಿಗಳು ಇಂದು ಮೋದಿಯ ಸಚಿವ ಸಂಪುಟದ ಸಲಹೆಯನ್ನು ಅಂಗೀಕರಿಸಿದ್ದಾರೆ. ಸಂವಿಧಾನದ 85ನೇ ವಿಧಿಯ ಕಲಂ (2) ರ ಉಪ-ಕಲಂ (ಬಿ) ಮೂಲಕ ಅವರಿಗೆ ನೀಡಲಾದ ಅಧಿಕಾರವನ್ನು ಚಲಾಯಿಸುವ ಮೂಲಕ 17ನೇ ಲೋಕಸಭೆಯನ್ನು ವಿಸರ್ಜಿಸುವ ಆದೇಶಕ್ಕೆ ಸಹಿ ಹಾಕಿದ್ದಾರೆ. ಪ್ರಸಕ್ತ ಲೋಕಸಭೆಯ ಅವಧಿ ಜೂನ್ 16ಕ್ಕೆ ಕೊನೆಗೊಳ್ಳಬೇಕಿತ್ತು. ಆದರೆ, ಇಂದೇ ಲೋಕಸಭೆಯನ್ನು ವಿಸರ್ಜಿಸಲಾಗಿದೆ. ಜೂನ್ 7ಕ್ಕೆ ಹೊಸ ಸಚಿವ ಸಂಪುಟ ರಚನೆಯಾಗಲಿದ್ದು, 3ನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂದು ಮುಂಜಾನೆ, ಮೋದಿ ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದರು. ಅವರು ಅದನ್ನು ಅಂಗೀಕರಿಸಿದ್ದಾರೆ. ಹೊಸ ಸರ್ಕಾರ ಅಧಿಕಾರ ವಹಿಸಿಕೊಳ್ಳುವವರೆಗೆ ಹಾಲಿ ಪ್ರಧಾನಿಯನ್ನು ಮುಂದುವರಿಸುವಂತೆ ಮನವಿ ಮಾಡಿದ್ದಾರೆ. ಜೂನ್ 7 ರಂದು ಮುಂದಿನ ಸರ್ಕಾರ ರಚನೆಯಾಗಲಿದೆ.

ಇದನ್ನೂ ಓದಿ: ಮತ್ತೊಮ್ಮೆ ಎನ್ ಡಿಎ ಸರ್ಕಾರ ರಚಿಸಲು ಸದಸ್ಯ ಪಕ್ಷಗಳೊಂದಿಗೆ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

2014 ಮತ್ತು 2019ಕ್ಕೆ ಹೋಲಿಸಿದರೆ ಕ್ಷೀಣಿಸಿದ ಸಂಖ್ಯೆಗಳ ಹೊರತಾಗಿಯೂ, ಬುಧವಾರ ಸಂಜೆ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಸಭೆಯ ನಂತರ ಪ್ರಧಾನಿ ಮೋದಿ ಮುಂದಿನ ಸರ್ಕಾರವನ್ನು ರಚಿಸಲು ಹಕ್ಕು ಸಾಧಿಸಿದ್ದಾರೆ. ಮೋದಿ ಅವರು ಐತಿಹಾಸಿಕ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಈ ಹಿಂದೆ ದಿವಂಗತ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಕೂಡ 3 ಅವಧಿಗೆ ಪ್ರಧಾನಿಯಾಗಿದ್ದರು. ಅವರ ಬಳಿಕ ಆ ಹೆಗ್ಗಳಿಕೆ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 543 ಸದಸ್ಯರ ಲೋಕಸಭೆ ಕ್ಷೇತ್ರಗಳಲ್ಲಿ ಎನ್‌ಡಿಎ 293 ಸ್ಥಾನಗಳನ್ನು ಗೆದ್ದಿದ್ದರೆ, ವಿರೋಧ ಪಕ್ಷವಾದ ಇಂಡಿಯಾ ಬ್ಲಾಕ್ 232 ಸ್ಥಾನಗಳನ್ನು ಹೊಂದಿದೆ. ಕೇಂದ್ರದಲ್ಲಿ ಸರ್ಕಾರ ರಚಿಸಲು ಕನಿಷ್ಠ 272 ಸ್ಥಾನಗಳ ಅಗತ್ಯವಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ