Rahul Gandhi: ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿಗೆ ಭರ್ಜರಿ ಗೆಲುವು

ರಾಹುಲ್ ಗಾಂಧಿಯವರು 2004 ರಿಂದ 2019 ರವರೆಗೆ ಅಮೇಠಿ ಲೋಕಸಭಾ ಸ್ಥಾನವನ್ನು ಪ್ರತಿನಿಧಿಸಿದ್ದರು. ಕಳೆದ ಚುನಾವಣೆಯಲ್ಲಿ ಅವರು ಅಮೇಠಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿಯವರ ವಿರುದ್ಧ ಸೋತರು, ಆದರೆ ಕೇರಳದ ವಯನಾಡ್ ನಲ್ಲಿ ಗೆದ್ದು ತಮ್ಮ ಸಂಸದ ಸ್ಥಾನಮಾನವನ್ನು ಉಳಿಸಿಕೊಂಡರು.

Rahul Gandhi: ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿಗೆ ಭರ್ಜರಿ ಗೆಲುವು
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on:Jun 04, 2024 | 4:02 PM

ದೆಹಲಿ ಜೂನ್ 04 : ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ (Rae Bareli) ಕಾಂಗ್ರೆಸ್ ನಾಯಕ  ನಾಯಕ ರಾಹುಲ್ ಗಾಂಧಿ (Rahul Gandhi) 4 ಲಕ್ಷ  ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಬಾರಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿ (Sonia Gandhi) 2019 ರಲ್ಲಿ ಗಳಿಸಿದ ಗೆಲುವಿನ ಅಂತರವನ್ನು ಮೀರಿಸಿದ್ದಾರೆ. ರಾಹುಲ್ ಗಾಂಧಿ ಮುಂದೆ ಸೋಲುಂಡ ಬಿಜೆಪಿಯ (BJP) ದಿನೇಶ್ ಪ್ರತಾಪ್ ಸಿಂಗ್,  ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ಸಚಿವರಾಗಿದ್ದಾರೆ.

2004 ರಿಂದ ಈ ಸ್ಥಾನದಲ್ಲಿ ಗೆದ್ದಿದ್ದ ಸೋನಿಯಾ ಗಾಂಧಿ, 2019 ರಲ್ಲಿ ಸಿಂಗ್ ವಿರುದ್ಧ 1.67 ಲಕ್ಷ ಮತಗಳ ಅಂತರದಿಂದ ಗೆದ್ದರು. ಅವರು 2024 ರ ಲೋಕಸಭೆ ಚುನಾವಣೆಯಿಂದ ಸೋನಿಯಾ ಹೊರಗುಳಿದಿದ್ದು ರಾಯ್ ಬರೇಲಿಯಿಂದ ಕಾಂಗ್ರೆಸ್ ರಾಹುಲ್ ಗಾಂಧಿ ಅವರನ್ನು ಕಣಕ್ಕಿಳಿಸಿತ್ತು. ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ ವಯನಾಡ್ ನಲ್ಲಿ ರಾಹುಲ್ ಗಾಂಧಿ  354728 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ರಾಹುಲ್ ಗಾಂಧಿಯವರು 2004 ರಿಂದ 2019 ರವರೆಗೆ ಅಮೇಠಿ ಲೋಕಸಭಾ ಸ್ಥಾನವನ್ನು ಪ್ರತಿನಿಧಿಸಿದ್ದರು. ಕಳೆದ ಚುನಾವಣೆಯಲ್ಲಿ ಅವರು ಅಮೇಠಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿಯವರ ವಿರುದ್ಧ ಸೋತರು, ಆದರೆ ಕೇರಳದ ವಯನಾಡ್ ನಲ್ಲಿ ಗೆದ್ದು ತಮ್ಮ ಸಂಸದ ಸ್ಥಾನಮಾನವನ್ನು ಉಳಿಸಿಕೊಂಡರು.

ಇದನ್ನೂ ಓದಿ: ಲೋಕಸಭೆ ಚುನಾವಣೆ ಫಲಿತಾಂಶ 2024: ಸಚಿವರ ಮಕ್ಕಳಲ್ಲಿ ಯಾರ್ಯಾರು ಗೆದ್ರು? ಯಾರು ಸೋತ್ರು?

ಈ ಬಾರಿಯೂ ಅವರು ರಾಯ್ ಬರೇಲಿ (ಉತ್ತರ ಪ್ರದೇಶ) ಮತ್ತು ವಯನಾಡ್ (ಕೇರಳ) – ಎರಡು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಎರಡರಲ್ಲೂ ಮುನ್ನಡೆ ಸಾಧಿಸಿದ್ದಾರೆ. ವಯನಾಡಿನಲ್ಲಿ ರಾಹುಲ್ ಸಮೀಪದ ಪ್ರತಿಸ್ಪರ್ಧಿ ಸಿಪಿಎಂನ ಅನ್ನಿ ರಾಜಾ ಅವರಿಗಿಂತ 3 ಲಕ್ಷಕ್ಕೂ ಹೆಚ್ಚು ಮತಗಳಿಂದ ಮುಂದಿದ್ದಾರೆ.

2019ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ವಯನಾಡ್‌ನಿಂದ 4.3 ಲಕ್ಷ ಮತಗಳ ಬಹುಮತದಿಂದ ಗೆದ್ದಿದ್ದರು.ಇತ್ತ ಅಮೇಠಿಯಲ್ಲಿ ಸ್ಮೃತಿ ಇರಾನಿ ಅವರು ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಅವರಿಗಿಂತ 90,000 ಕ್ಕೂ ಹೆಚ್ಚು ಮತಗಳಿಂದ ಹಿಂದುಳಿದಿದ್ದು, ಬಿಜೆಪಿಯಿಂದ ತನ್ನ ಕ್ಷೇತ್ರವನ್ನು ಮರಳಿ ಪಡೆಯಲು ಕಾಂಗ್ರೆಸ್ ಎದುರು ನೋಡುತ್ತಿದೆ.

1952 ರಲ್ಲಿ ಸ್ಥಾಪಿತವಾದ ರಾಯ್ ಬರೇಲಿ ಲೋಕಸಭಾ ಕ್ಷೇತ್ರವು  ಕಾಂಗ್ರೆಸ್ ಭದ್ರಕೋಟೆ ಎಂದು ಕರೆಯಲ್ಪಡುತ್ತದೆ. ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಮತ್ತು ಫಿರೋಜ್ ಗಾಂಧಿಯವರಂತಹ ಗಾಂಧಿ ಕುಟುಂಬದ ಹಲವಾರು ಪ್ರಮುಖ ನಾಯಕರು ರಾಯ್ ಬರೇಲಿ ಕ್ಷೇತ್ರದಲ್ಲಿ ಪ್ರಾಬಲ್ಯ ಹೊಂದಿದ್ದಾರೆ. ಈ ಸ್ಥಾನಕ್ಕೆ ಸ್ಪರ್ಧಿಸಿದ ಮೂರು ಉಪಚುನಾವಣೆಗಳು ಸೇರಿದಂತೆ 20 ಲೋಕಸಭಾ ಚುನಾವಣೆಗಳಲ್ಲಿ 17 ರಲ್ಲಿ ಇವರು ಗೆದ್ದಿದ್ದಾರೆ.

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:50 pm, Tue, 4 June 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ