AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress Vs BJP: ಇವತ್ತೇ ಲೋಕಸಭಾ ಚುನಾವಣೆಯಾದರೆ ಯಾರು ಗೆಲ್ತಾರೆ? ಚರ್ಚೆಯಾಗ್ತಿದೆ ರಾಜಕೀಯ ಸಮೀಕ್ಷೆಯ ವಿವರ

ರಾಹುಲ್ ಗಾಂಧಿ ಆರಂಭಿಸಿರುವ ‘ಭಾರತ್ ಜೋಡೋ’ ಪಾದಯಾತ್ರೆಯ ಬಗ್ಗೆ ಜನರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಮೋದಿ ಇಂದಿಗೂ ಭಾರತದ ಅತ್ಯಂತ ಜನಪ್ರಿಯ ವ್ಯಕ್ತಿಯಾಗಿದ್ದಾರೆ.

Congress Vs BJP: ಇವತ್ತೇ ಲೋಕಸಭಾ ಚುನಾವಣೆಯಾದರೆ ಯಾರು ಗೆಲ್ತಾರೆ? ಚರ್ಚೆಯಾಗ್ತಿದೆ ರಾಜಕೀಯ ಸಮೀಕ್ಷೆಯ ವಿವರ
ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
TV9 Web
| Edited By: |

Updated on:Jan 27, 2023 | 2:55 PM

Share

ಬೆಂಗಳೂರು: ಭಾರತದಲ್ಲಿ ಮುಂದಿನ ವರ್ಷ (2024) ಲೋಕಸಭಾ ಚುನಾವಣೆಯು  (Laksabha Election 2024) ನಡೆಯುವ ನಿರೀಕ್ಷೆಯಿದೆ. ಬಿಜೆಪಿ (JP) ಈಗಾಗಲೇ ಚುನಾವಣಾ ಸಿದ್ಧತೆಯನ್ನು ಚುರುಕುಗೊಳಿಸಿದ್ದು, ಕಾರ್ಯತಂತ್ರ ರೂಪಿಸುತ್ತಿದೆ. ಒಂದು ವೇಳೆ ತಕ್ಷಣಕ್ಕೆ ಚುನಾವಣೆ ನಡೆದರೆ ಯಾವ ಪಕ್ಷ ಗೆಲ್ಲಬಹುದು ಎಂಬ ಕುತೂಹಲಕ್ಕೆ ತೆರೆ ಎಳೆಯುವಂಥ ಫಲಿತಾಂಶವೊಂದನ್ನು ‘ಇಂಡಿಯಾ ಟುಡೇ-ಸಿವೋಟರ್​ ಮೂಡ್​ ಆಫ್​ ದಿ ನೇಶನ್’ ( ಸಮೀಕ್ಷೆಯು ಪ್ರಕಟಿಸಿದೆ. ಈ ಸಮೀಕ್ಷೆಯ ಪ್ರಕಾರ, ತಕ್ಷಣಕ್ಕೆ ಚುನಾವಣೆ ನಡೆದರೆ ಭಾರತೀಯ ಜನತಾ ಪಾರ್ಟಿ (Bharatiya Janata Party – BJP) 284 ಸ್ಥಾನಗಳಲ್ಲಿ ಜಯಗಳಿಸಲಿದೆ. ಕಾಂಗ್ರೆಸ್​ 191 ಕ್ಷೇತ್ರಗಳಲ್ಲಿ ಜಯಗಳಿಸಬಹುದು.

ಪ್ರಧಾನಿ ನರೇಂದ್ರ ಮೋದಿ ಇಂದಿಗೂ ದೇಶದ ಅತ್ಯಂತ ಜನಪ್ರಿಯ ನಾಯಕ ಎನಿಸಿಕೊಂಡಿದ್ದಾರೆ. ಮೋದಿ ಅವರ ಕಾರ್ಯವೈಖರಿಗೆ ಶೇ 72ರಷ್ಟು ಜನರು ಮೆಚ್ಚುಗೆ ಸೂಚಿಸಿದ್ದಾರೆ. ಮೋದಿ ಅವರ ಕಟುಟೀಕಾಕಾರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಹುಲ್ ಆರಂಭಿಸಿರುವ ‘ಭಾರತ್ ಜೋಡೋ’ ಪಾದಯಾತ್ರೆಯ ಬಗ್ಗೆ ಜನರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಪಾದಯಾತ್ರೆಯಿಂದ ಕಾಂಗ್ರೆಸ್ ಒಂದಿಷ್ಟು ಸದ್ದು ಮಾಡಿದ್ದು ನಿಜ. ಆದರೆ ಪಕ್ಷವನ್ನು ಅಧಿಕಾರಕ್ಕೆ ತರಲು ಇಷ್ಟೇ ಸಾಲದು’ ಎಂದು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ಶೇ 37ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ.

ಸಮೀಕ್ಷೆಗಾಗಿ 1,40,917 (1.40 ಲಕ್ಷ) ಮಂದಿಯನ್ನು ಸಂದರ್ಶನ ಮಾಡಲಾಯಿತು ಎಂದು ಸಿವೋಟರ್ಸ್​ ಹೇಳಿದೆ. ಸಮೀಕ್ಷೆಯಲ್ಲಿ ಬೆಳಕಿಗೆ ಬಂದ ಮುಖ್ಯ ಅಂಶಗಳು ಹೀಗಿವೆ…

  1. ಮೋದಿ ಅವರ ಕಾರ್ಯವೈಖರಿ ಸಮಾಧಾನಕರ ಎಂದು (ಜನವರಿ 2023) ಶೇ 67ರಷ್ಟು ಜನರು ಪ್ರತಿಕ್ರಿಯಿಸಿದ್ದಾರೆ. ಇದು ಆಗಸ್ಟ್ 2022ರ ಸಮೀಕ್ಷೆಗೆ ಹೋಲಿಸಿದರೆ ಮೋದಿ ಅವರ ಜನಪ್ರಿಯತೆಯು ಶೇ 11ರಷ್ಟು ಹೆಚ್ಚಾಗಿದೆ.
  2. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್​ಡಿಎ ಸರ್ಕಾರದ ಬಗ್ಗೆ ಕಳೆದ ಆಗಸ್ಟ್​​ನಲ್ಲಿ ಶೇ 37ರಷ್ಟು ಜನರು ಅಸಮಾಧಾನ ವ್ಯಕ್ತಪಡಿಸಿದ್ದುರ. ಈ ಪ್ರಮಾಣವು ಈಗ ಶೇ 18ಕ್ಕೆ ಇಳಿದಿದೆ.
  3. ಕೊವಿಡ್-19 ಪರಿಸ್ಥಿತಿಯನ್ನು ಕೇಂದ್ರ ಸರ್ಕಾರವು ಅತ್ಯುತ್ತಮವಾಗಿ ನಿಭಾಯಿಸಿತು. ಇದು ಸರ್ಕಾರದ ಅತಿದೊಡ್ಡ ಸಾಧನೆ ಎಂದು ಶೇ 20ರಷ್ಟು ಮಂದಿ ಅಭಿಪ್ರಾಯಪಟ್ಟರು. ಶೇ 14ರಷ್ಟು ಜನರು ಸಂವಿಧಾನದ 370ನೇ ವಿಧಿಯ ರದ್ದತಿ ಕೇಂದ್ರ ಸರ್ಕಾರದ ದೊಡ್ಡ ಸಾಧನೆ ಎಂದಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವು ಕೇಂದ್ರ ಸರ್ಕಾರದ ಅತಿದೊಡ್ಡ ಸಾಧನೆ ಎಂದು ಪ್ರತಿಕ್ರಿಯೆ ನೀಡಿರುವ ಶೇ 12ರಷ್ಟು ಜನರು ಹೇಳಿದ್ದಾರೆ.
  4. ಅಗತ್ಯವಸ್ತುಗಳ ಬೆಲೆಏರಿಕೆ (ಶೇ 25) ಮತ್ತು ನಿರುದ್ಯೋಘ (ಶೇ 17) ಕೇಂದ್ರ ಸರ್ಕಾರದ ವೈಫಲ್ಯ ಎಂದು ಸಾಕಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ.
  5. ಭಾರತ್ ಜೋಡೋ ಯಾತ್ರೆಯಿಂದ ಸಾಮಾನ್ಯ ಜನರೊಂದಿಗೆ ಮತ್ತೆ ಸಂಪರ್ಕ ಬೆಳೆಸಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಾಗಿದೆ (ಶೇ 29) ಹಲವರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಇದು ರಾಹುಲ್ ಗಾಂಧಿಗಾಗಿ ಮಾಡುತ್ತಿರುವ ಗಿಮಿಕ್ (ಶೇ 13) ಎಂದು ಕೆಲವರು ಹೇಳಿದ್ದಾರೆ.
  6. ಕಾಂಗ್ರೆಸ್ ಪಕ್ಷದ ಪುನರುಜ್ಜೀವನಕ್ಕೆ ರಾಹುಲ್ ಗಾಂಧಿ ಅತ್ಯುತ್ತಮ ಆಯ್ಕೆ ಎಂದು ಶೇ 26ರಷ್ಟು ಜನರು ಹೇಳಿದ್ದಾರೆ. ಶೇ 17ರಷ್ಟು ಜನರು ಸಚಿನ್ ಪೈಲಟ್ ಬಗ್ಗೆ ಒಲವು ತೋರಿದ್ದಾರೆ.

ಇದನ್ನೂ ಓದಿ: SL Bhyrappa: 2029ರ ನಂತರ ಪ್ರಧಾನಿ ಮೋದಿ ರಾಜಕೀಯ ನಿವೃತ್ತಿ ಪಡೆಯಲಿ – ಸಾಹಿತಿ ಎಸ್​.ಎಲ್. ಭೈರಪ್ಪ

ಮತ್ತಷ್ಟು ರಾಜಕೀಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:39 pm, Fri, 27 January 23

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್