
ಬೆಂಗಳೂರು: ಭಾರತದಲ್ಲಿ ಮುಂದಿನ ವರ್ಷ (2024) ಲೋಕಸಭಾ ಚುನಾವಣೆಯು (Laksabha Election 2024) ನಡೆಯುವ ನಿರೀಕ್ಷೆಯಿದೆ. ಬಿಜೆಪಿ (JP) ಈಗಾಗಲೇ ಚುನಾವಣಾ ಸಿದ್ಧತೆಯನ್ನು ಚುರುಕುಗೊಳಿಸಿದ್ದು, ಕಾರ್ಯತಂತ್ರ ರೂಪಿಸುತ್ತಿದೆ. ಒಂದು ವೇಳೆ ತಕ್ಷಣಕ್ಕೆ ಚುನಾವಣೆ ನಡೆದರೆ ಯಾವ ಪಕ್ಷ ಗೆಲ್ಲಬಹುದು ಎಂಬ ಕುತೂಹಲಕ್ಕೆ ತೆರೆ ಎಳೆಯುವಂಥ ಫಲಿತಾಂಶವೊಂದನ್ನು ‘ಇಂಡಿಯಾ ಟುಡೇ-ಸಿವೋಟರ್ ಮೂಡ್ ಆಫ್ ದಿ ನೇಶನ್’ ( ಸಮೀಕ್ಷೆಯು ಪ್ರಕಟಿಸಿದೆ. ಈ ಸಮೀಕ್ಷೆಯ ಪ್ರಕಾರ, ತಕ್ಷಣಕ್ಕೆ ಚುನಾವಣೆ ನಡೆದರೆ ಭಾರತೀಯ ಜನತಾ ಪಾರ್ಟಿ (Bharatiya Janata Party – BJP) 284 ಸ್ಥಾನಗಳಲ್ಲಿ ಜಯಗಳಿಸಲಿದೆ. ಕಾಂಗ್ರೆಸ್ 191 ಕ್ಷೇತ್ರಗಳಲ್ಲಿ ಜಯಗಳಿಸಬಹುದು.
ಪ್ರಧಾನಿ ನರೇಂದ್ರ ಮೋದಿ ಇಂದಿಗೂ ದೇಶದ ಅತ್ಯಂತ ಜನಪ್ರಿಯ ನಾಯಕ ಎನಿಸಿಕೊಂಡಿದ್ದಾರೆ. ಮೋದಿ ಅವರ ಕಾರ್ಯವೈಖರಿಗೆ ಶೇ 72ರಷ್ಟು ಜನರು ಮೆಚ್ಚುಗೆ ಸೂಚಿಸಿದ್ದಾರೆ. ಮೋದಿ ಅವರ ಕಟುಟೀಕಾಕಾರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಹುಲ್ ಆರಂಭಿಸಿರುವ ‘ಭಾರತ್ ಜೋಡೋ’ ಪಾದಯಾತ್ರೆಯ ಬಗ್ಗೆ ಜನರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಪಾದಯಾತ್ರೆಯಿಂದ ಕಾಂಗ್ರೆಸ್ ಒಂದಿಷ್ಟು ಸದ್ದು ಮಾಡಿದ್ದು ನಿಜ. ಆದರೆ ಪಕ್ಷವನ್ನು ಅಧಿಕಾರಕ್ಕೆ ತರಲು ಇಷ್ಟೇ ಸಾಲದು’ ಎಂದು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ಶೇ 37ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ.
ಸಮೀಕ್ಷೆಗಾಗಿ 1,40,917 (1.40 ಲಕ್ಷ) ಮಂದಿಯನ್ನು ಸಂದರ್ಶನ ಮಾಡಲಾಯಿತು ಎಂದು ಸಿವೋಟರ್ಸ್ ಹೇಳಿದೆ. ಸಮೀಕ್ಷೆಯಲ್ಲಿ ಬೆಳಕಿಗೆ ಬಂದ ಮುಖ್ಯ ಅಂಶಗಳು ಹೀಗಿವೆ…
ಇದನ್ನೂ ಓದಿ: SL Bhyrappa: 2029ರ ನಂತರ ಪ್ರಧಾನಿ ಮೋದಿ ರಾಜಕೀಯ ನಿವೃತ್ತಿ ಪಡೆಯಲಿ – ಸಾಹಿತಿ ಎಸ್.ಎಲ್. ಭೈರಪ್ಪ
ಮತ್ತಷ್ಟು ರಾಜಕೀಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:39 pm, Fri, 27 January 23