Raichur Lok Sabha constituency Election Result 2024: ರಾಯಚೂರಿನಲ್ಲಿ ಗೆಲುವಿನ ನಗೆ ಬೀರಿದ ಕುಮಾರ್ ನಾಯ್ಕ್: ಬಿಜೆಪಿಗೆ ಸೋಲು

Raichur Lok Sabha Election Results 2024 Live Counting Updates: ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಬಿಜೆಪಿ ಜಿದ್ದಾಜಿದ್ದಿಗೆ ಕಾರಣವಾಗಿತ್ತು. ಎಸ್​ಟಿ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಪಕ್ಷದಲ್ಲಿ ಸಮರ್ಥ ಅಭ್ಯರ್ಥಿ ಸಿಗದ ಕಾರಣ ನಿವೃತ್ತ ಐಎಎಸ್​ ಅಧಿಕಾರಿ ಜಿ ಕುಮಾರ್ ನಾಯ್ಕ್​​​ರನ್ನು ಕಾಂಗ್ರೆಸ್​ ಕಣಕ್ಕಿಳಿಸಿತ್ತು. ಇದೀಗ ಬಿಜೆಪಿ ಅಭ್ಯರ್ಥಿ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ್​ರನ್ನು 75,930 ಅಂತರದಿಂದ ಸೋಲಿಸಿ ಗೆಲುವಿನ ನಗೆ ಬೀರಿದ್ದಾರೆ.

Raichur Lok Sabha constituency Election Result 2024: ರಾಯಚೂರಿನಲ್ಲಿ ಗೆಲುವಿನ ನಗೆ ಬೀರಿದ ಕುಮಾರ್ ನಾಯ್ಕ್: ಬಿಜೆಪಿಗೆ ಸೋಲು
ರಾಯಚೂರು ಗೆಲುವಿಗೆ ಕಾಂಗ್ರೆಸ್​ ಬಿಜೆಪಿ ರಣತಂತ್ರ!
Follow us
|

Updated on:Jun 04, 2024 | 3:58 PM

ರಾಯಚೂರು ಲೋಕಸಭಾ ಕ್ಷೇತ್ರವು (Raichur Lok Sabha constituency) ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಒಂದು. ಬಿಜೆಪಿ ಅಭ್ಯರ್ಥಿ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ್​ಗೆ ಸೋಲಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ನಿವೃತ್ತ ಐಎಎಸ್​ ಅಧಿಕಾರಿ ಜಿ ಕುಮಾರ್ ನಾಯ್ಕ್ 75,930 ಅಂತರದಿಂದ ಗೆಲುವು ಸಾಧಿಸಿದ್ದಾರೆ. 14ನೇ ಸುತ್ತಿನಲ್ಲಿ ಕಾಂಗ್ರೆಸ್ ಒಟ್ಟು 5,61,533 ಮತ ಪಡೆದುಕೊಂಡಿತ್ತು. ಜಿ. ಕುಮಾರ್ ‌ನಾಯ್ಕ್​ 75,930 ಮತಗಳಿಂದ ಮುನ್ನಡೆ ಸಾಧಿಸಿದ್ದರು. ರಾಜಾ ಅಮರೇಶ್ವರ ನಾಯಕ 4,85,603 ಮತ ಪಡೆದುಕೊಂಡಿದ್ದಾರೆ.

ರಾಯಚೂರು ಲೋಕಸಭಾ ಟಿಕೆಟ್​ ಆಕಾಂಕ್ಷಿಯಾಗಿದ್ದ ಬಿವಿ ನಾಯಕ್ ಅವರಿಗೆ ಈ ಭಾರಿ ಟಿಕೆಟ್​ ಕೈತಪ್ಪಿತ್ತು. ಅವರ ಬದಲಾಗಿ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ್​ಗೆ ಬಿಜೆಪಿ ಟಿಕೆಟ್​ ನೀಡಲಾಗಿತ್ತು. ಇದು ಬಿಜೆಪಿಯಲ್ಲಿಯೇ ಅಸಮಾಧಾನಕ್ಕೂ ಕಾರಣವಾಗಿತ್ತು. ಇನ್ನು ಎಸ್​ಟಿ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಪಕ್ಷದಲ್ಲಿ ಸಮರ್ಥ ಅಭ್ಯರ್ಥಿ ಸಿಗದ ಕಾರಣ ಕಾಂಗ್ರೆಸ್​ ನಿವೃತ್ತ ಐಎಎಸ್​ ಅಧಿಕಾರಿ ಜಿ ಕುಮಾರ್ ನಾಯ್ಕ್  ಅವರನ್ನು ಚುನಾವಣಾ ಕಣಕ್ಕೆ ಇಳಿಸಿತ್ತು.

ಇದು ಪರಿಶಿಷ್ಟ ಪಂಗಡಗಳ (ST) ಮೀಸಲು ಸ್ಥಾನವಾಗಿದೆ. ಈ ಕ್ಷೇತ್ರವು ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಭಾಗಗಳನ್ನು ಒಳಗೊಂಡಿದೆ. ರಾಯಚೂರು ಲೋಕಸಭಾ ಕ್ಷೇತ್ರವು ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಶೋರಾಪುರ, ಶಹಪುರ, ಯಾದಗಿರಿ, ರಾಯಚೂರು ಗ್ರಾಮಾಂತರ, ರಾಯಚೂರು, ಮಾನ್ವಿ, ದೇವದುರ್ಗ ಮತ್ತು ಲಿಂಗಸೂಗೂರು. ಈ ಪೈಕಿ ನಾಲ್ಕು ಸ್ಥಾನಗಳು (ಶೋರಾಪುರ, ರಾಯಚೂರು ಗ್ರಾಮಾಂತರ, ಮಾನ್ವಿ, ದೇವದುರ್ಗ) ಪರಿಶಿಷ್ಟ ಪಂಗಡಕ್ಕೆ ಮತ್ತು ಒಂದು ಸ್ಥಾನ (ಲಿಂಗಸೂಗೂರು) ಪರಿಶಿಷ್ಟ ಜಾತಿಗೆ ಮೀಸಲಾಗಿಡಲಾಗಿದೆ.

2014 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿವಿ ನಾಯಕ್ ಅವರು ಬಿಜೆಪಿಯ ತಮ್ಮ ಪ್ರತಿಸ್ಪರ್ಧಿ ಅಭ್ಯರ್ಥಿ ಕೆ ಶಿವನಗೌಡ ನಾಯಕ್ ಅವರನ್ನು ಸೋಲಿಸಿದ್ದರು. ಬಿಜೆಪಿಯ ರಾಜಾ ಅಮರೇಶ್ ನಾಯಕ್ 2019 ರಲ್ಲಿ ಬಿವಿ ನಾಯಕ್ ಅವರನ್ನು ಸೋಲಿಸಿ 50% ಕ್ಕಿಂತ ಹೆಚ್ಚು ಮತಗಳನ್ನು ಪಡೆದುಕೊಳ್ಳುವ ಮೂಲಕ ಜಯಶಾಲಿಯಾಗಿದ್ದರು. 2019 ರ ಲೋಕಸಭಾ ಚುನಾವಣೆಯಲ್ಲಿ, ಮತದಾನದ ಪ್ರಮಾಣವು 60.1% ರಷ್ಟಿತ್ತು.

941969 ಪುರುಷ ಮತದಾರರಿಗೆ ಹೋಲಿಸಿದರೆ ಮಹಿಳಾ ಮತದಾರರು 954317 ರಷ್ಟಿದ್ದಾರೆ. ಈ ಬಾರಿ ಬಿಜೆಪಿಯು ರಾಜಾ ಅಮರೇಶ್ ನಾಯಕ್ ಅವರನ್ನು ಕಣಕ್ಕಿಳಿಸಿದ್ದು, ಅವರು ಎರಡನೇ ಅವಧಿಗೆ ಅಧಿಕಾರ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಾಜಿ ಅಧಿಕಾರಿ ಜಿ ಕುಮಾರ್ ನಾಯ್ಕ್. 1999 ರಿಂದ 2002 ರವರೆಗೆ ರಾಯಚೂರಿನಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ ಅವರು ನಿವೃತ್ತಿಯ ನಂತರ ಕಾಂಗ್ರೆಸ್ ಸೇರಿದ್ದರು.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:46 am, Tue, 4 June 24

ತಾಜಾ ಸುದ್ದಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು