ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಸೋಲಿಗೆ ಕಾರಣ ಕೊಟ್ಟ ಸತೀಶ್ ಜಾರಕಿಹೊಳಿ
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಸೋಲುಕಂಡಿದ್ದರೆ, ಸತೀಶ್ ಜಾರಕಿಹೊಳಿ ಪುತ್ರಿ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲೇ ಬೆಳಗಾವಿ ಸೋಲಿಗೆ ಸಂಬಂಧಿಸಿದಂತೆ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಮುಸುಕಿನ ಗುದ್ದಾಟ ಶುರುವಾದಂತೆ ಕಾಣುತ್ತಿದೆ.
ಬೆಳಗಾವಿ, (ಜೂನ್ 05): ನಮ್ಮ ನಾಯಕರ ಅತಿಯಾದ ವಿಶ್ವಾಸವೇ ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ತಲುಪದೇ ಇರಲು ಕಾರಣ ಎಂದು ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಳಗಾವಿ ಲೋಕಸಭಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ್ದು, ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಲು ನಾನು ಕಾರಣವಲ್ಲ. 5 ಲಕ್ಷ ಲಿಂಗಾಯತ ಮತದಾರರಿದ್ದಾರೆ. ಅವರು ನನ್ನ ಮಾತು ಕೇಳುತ್ತಾರಾ? ಮತದಾರರನ್ನು ಸೆಳೆಯುವಲ್ಲಿ ಸಚಿವೆ ಹೆಬ್ಬಾಳ್ಕರ್ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಲು ನಾನು ಕಾರಣವಲ್ಲ. 5 ಲಕ್ಷ ಲಿಂಗಾಯತ ಮತದಾರರಿದ್ದಾರೆ. ಅವರು ನನ್ನ ಮಾತು ಕೇಳುತ್ತಾರಾ? ಮತದಾರರನ್ನು ಸೆಳೆಯುವಲ್ಲಿ ಸಚಿವೆ ಹೆಬ್ಬಾಳ್ಕರ್ ವಿಫಲರಾಗಿದ್ದಾರೆ. ಇದೇ ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಸೋಲಿಗೆ ಕಾರಣ. ನಾವು ಗೆಲ್ಲುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇವೆ, ಸೋಲಿಸಲು ಅಲ್ಲ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲೇ ಮೃಣಾಲ್‌ಗೆ ಹಿನ್ನಡೆ ಆಗಿದೆ. ಲಿಂಗಾಯತ, ಮರಾಠ ಮತ ಸೆಳೆಯಲು ವಿಫಲವಾಗಿದ್ದರಿಂದ ಸೋಲಾಗಿದೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಸತೀಶ್ ಜಾರಕಿಹೊಳಿ ತಮ್ಮ ಮೇಲಿನ ಆರೋಪದ ಬಗ್ಗೆ ಸ್ಪಷ್ಟನೆ ನೀಡಿದರು.
ಲೋಕಸಭೆ ಚುನಾವಣೆ ವೇಳೆ ಚಿಕ್ಕೋಡಿ ಕ್ಷೇತ್ರದ ಉಸ್ತುವಾರಿಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ನೀಡಲಾಗಿತ್ತು. ಅದರಂತೆ ಹೆಬ್ಬಾಳ್ಕರ್ ಸಹ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕ ಪರ ಚಿಕ್ಕೋಡಿ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದು, ಇದೀಗ ಪ್ರಿಯಾಂಕ ಗೆಲುವಿನ ನಗೆ ಬೀರಿದ್ದಾರೆ. ಇನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಹೊಣೆಯನ್ನು ಸಚಿವ ಸತೀಶ್ ಜಾರಕಿಹೊಳಿ ವಹಿಸಲಾಗಿತ್ತು. ಸಚಿವೆ ಲಕ್ಷ್ಮೀ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಗೆಲ್ಲಿಸಿಕೊಂಡು ಬರುವ ಹೊಣೆ ಸತೀಶ್ ಜಾರಕಿಹೊಳಿಗೆ ನೀಡಲಾಗಿತ್ತು. ಆದ್ರೆ, ಅದು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಸೋಲಿಗೆ ಕಾರಣ ಸತೀಶ್ ಜಾರಕಿಹೊಳಿ ಎನ್ನುವ ಮಾತುಗಳು ಕೇಳಿಬರುತ್ತಿವೆ. ಹೀಗಾಗಿ ಇದಕ್ಕೆ ಖುದ್ದು ಸತೀಶ್ ಜಾರಕಿಹೊಳಿ ತಮ್ಮ ಮೇಲಿನ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಸ್ವಪಕ್ಷದ ನಾಯಕರ ವಿರುದ್ಧ ಅಸಮಾಧಾನ
ಯಕರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಥಣಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಕಡಿಮೆ ಲೀಡ್ ಸಿಕ್ಕಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ನಮ್ಮವರೇ ನಮಗೆ ಮೋಸ ಮಾಡಿದ್ರು. ಅಥಣಿಯಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದವರಿಂದ ಚುನಾವಣೆಯಲ್ಲಿ ಮೋಸ ಆಗಿದೆ. ಮೊದಲೇ ಅವರು ಮೈಂಡ್ ಸೆಟ್ ಮಾಡಿಕೊಂಡಿದ್ರು. ನಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಮ್ಮ ಪರವಾಗಿ ಇದ್ದರು ಎಂದು ಪರೋಕ್ಷವಾಗಿ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವಿರುದ್ಧವೂ ಸತೀಶ್ ಜಾರಕಿಹೊಳಿ ಅಸಮಾಧಾನ ಹೊರಹಾಕಿದರು.
ಡೈರೆಕ್ಟರ್, ಪ್ರೊಡ್ಯೂಸರ್ ಫೇಲ್ ಆದರೆ ಈ ರೀತಿಯ ಫಲಿತಾಂಶ ನಿರೀಕ್ಷಿತ. ಚುನಾವಣೆಗೆ ಸಮಯ ಕಡಿಮೆ ಇರುತ್ತದೆ, ಆ ಸಮಯದಲ್ಲಿ ಅಲರ್ಟ್ ಇರಬೇಕು. ಇಲ್ಲವಾದರೆ ಚುನಾವಣೆ ಬಂದು ಹೋಗುತ್ತದೆ, ಆಗಲೇ ನಾವು ಕೆಲಸ ಮಾಡಬೇಕು. ನಮ್ಮ ನಾಯಕರು ಹಲವು ಕ್ಷೇತ್ರಗಳನ್ನು ನಿರ್ಲಕ್ಷಿಸಿದ್ದೂ ನಮ್ಮ ಹಿನ್ನಡೆಗೆ ಕಾರಣ. ಗೆಲ್ಲುವ ವಿಶ್ವಾಸದ ಕಾರಣಕ್ಕೆ ಇನ್ನೂ ಹಲವು ಕ್ಷೇತ್ರಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಚಾರ ಆಗಲಿಲ್ಲ. ಕೆಲವಡೆ ಕಡಿಮೆ ಮತಗಳ ಅಂತರದಿಂದ ಸೋಲಲು ನಮ್ಮ ನಿರ್ಲಕ್ಷ್ಯ ಕಾರಣ ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.