Lok Sabha Polls: ಜನ 140 ಸೀಟುಗಳಿಗೂ ಬಿಜೆಪಿ ಪರದಾಡುವಂತೆ ಮಾಡುತ್ತಾರೆ; ಅಖಿಲೇಶ್ ಯಾದವ್ ವಿಶ್ವಾಸ

ಸಮಾಜವಾದಿ ಪಕ್ಷದ ಬೆಂಬಲಿಗರು ಮತ್ತು ಉತ್ತರ ಪ್ರದೇಶ ಪೊಲೀಸರ ನಡುವೆ ಇಂದು ಚುನಾವಣಾ ಪ್ರಚಾರದ ವೇಳೆ ಮಾತಿನ ಚಕಮಕಿ ನಡೆದಿದ್ದು, ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಯಿತು. ಕಾಲ್ತುಳಿತ ಸಂಭವಿಸಿದಾಗ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಅವರ ಪತ್ನಿ ಡಿಂಪಲ್ ಯಾದವ್ ವೇದಿಕೆಯಲ್ಲಿದ್ದರು.

Lok Sabha Polls: ಜನ 140 ಸೀಟುಗಳಿಗೂ ಬಿಜೆಪಿ ಪರದಾಡುವಂತೆ ಮಾಡುತ್ತಾರೆ; ಅಖಿಲೇಶ್ ಯಾದವ್ ವಿಶ್ವಾಸ
ಅಖಿಲೇಶ್ ಯಾದವ್
Follow us
ಸುಷ್ಮಾ ಚಕ್ರೆ
|

Updated on: May 21, 2024 | 8:40 PM

ಲೋಕಸಭೆ ಚುನಾವಣೆ 2024: ಇದೀಗ ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಜನರು ಬಿಜೆಪಿ 140 ಸ್ಥಾನಗಳನ್ನು ಪಡೆಯಲು ಪರದಾಡುವಂತೆ ಮಾಡುತ್ತಾರೆ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ವರಿಷ್ಠ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ (Akhilesh Yadav) ಹೇಳಿದ್ದಾರೆ. ಉತ್ತರ ಪ್ರದೇಶದ ಅಜಂಗಢದಲ್ಲಿ ಚುನಾವಣಾ ರ್ಯಾಲಿ ಬಳಿಕ ಮಾಜಿ ಸಿಎಂ ಅಖಿಲೇಶ್ ಯಾದವ್ ಈ ಹೇಳಿಕೆ ನೀಡಿದ್ದಾರೆ. ಚುನಾವಣಾ ರ್ಯಾಲಿ ವೇಳೆ ಕಾಲ್ತುಳಿತವಾದ ಕಾರಣ ಇಂದು ನಡೆದ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಲೋಕಸಭೆ ಚುನಾವಣೆಯ ರ್ಯಾಲಿಯಲ್ಲಿ ಭಾಗವಹಿಸಿದ್ದ ಜನರ ಮೇಲೆ ಉತ್ತರ ಪ್ರದೇಶ ಪೊಲೀಸರು (Uttar Pradesh Police) ಲಾಠಿ ಚಾರ್ಜ್ ಮಾಡಿದ್ದಾರೆ.

”ಪೂರ್ವಾಂಚಲ ಚುನಾವಣೆ ನಡೆಯುವಾಗ ಬಿಜೆಪಿ ವಿರುದ್ಧ ಆರಂಭವಾದ ಮತದಾನ ಕೊನೆಯವರೆಗೂ ನಡೆಯಲಿದ್ದು, ಏಳನೇ ಹಂತ ಮುಗಿಯುವ ವೇಳೆಗೆ ಬಿಜೆಪಿ ಸರ್ವನಾಶವಾಗಲಿದೆ. ಸಾರ್ವಜನಿಕರು ಬಿಜೆಪಿಯನ್ನು 140 ಸ್ಥಾನಗಳಿಗೆ ಪರದಾಡುವಂತೆ ಮಾಡುತ್ತಾರೆ.’’ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: Elections 2024: ಚುನಾವಣೆಯಲ್ಲಿ ಇಂಡಿಯಾ ಬಣ ಗೆದ್ದರೆ ಪ್ರಧಾನಿ ಹೆಸರನ್ನು ನಿರ್ಧರಿಸುತ್ತೇವೆ; ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಇದೀಗ ನಡೆಯುತ್ತಿರುವ ಚುನಾವಣೆಗಳು ಮತ್ತು ಬಿಜೆಪಿಯ ‘400-ಪಾರ್’ ಘೋಷಣೆ ಕುರಿತು ಮಾತನಾಡಿದ ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, “ಇಂಡಿಯಾ ಮೈತ್ರಿಕೂಟವು 300 ಸೀಟುಗಳು ದಾಟಿದೆ. ಇಂಡಿಯಾ ಒಕ್ಕೂಟದ ಸರ್ಕಾರ ಖಂಡಿತ ರಚನೆಯಾಗುತ್ತದೆ ಎಂದು ತಿಳಿದಿರುವ ಕಾರಣ ಪ್ರಧಾನಿ ಮೋದಿಗೆ ಹೇಳಲು ಏನೂ ಉಳಿದಿಲ್ಲ. ಎನ್​ಡಿಎ ಸರ್ಕಾರವು 400 ಪಡೆಯುವುದಿರಲಿ ಅವರಿಗೆ 240 ಸ್ಥಾನ ಪಡೆಯುವುದು ಕೂಡ ಕಷ್ಟವಾಗಲಿದೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್