ಮೂವರು ಬಿಜೆಪಿ ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಟಿಎಂಸಿ
ಈಗಾಗಲೇ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಮೂಲಗಳ ಪ್ರಕಾರ, ಬಿಜೆಪಿಯ ಮೂವರು ಸಂಸದರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹೇಳಿಕೊಂಡಿದೆ. ಆದರೆ, ಬಿಜೆಪಿ ಅದನ್ನು "ಸುಳ್ಳು ಸುದ್ದಿ" ಎಂದು ಹೇಳಿದೆ.
ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬಿಜೆಪಿಯ ಮೂವರು ಸಂಸದರು ನಮ್ಮ ಪಕ್ಷದ ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೊಂಡಿದೆ. ಈಗಾಗಲೇ ಲೋಕಸಭಾ ಚುನಾವಣೆ ಫಲಿತಾಂಶ (Lok Sabha Elections Result) ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ಕೇಂದ್ರದಲ್ಲಿ ಸರ್ಕಾರ ರಚಿಸುವುದು ಖಚಿತವಾಗಿದೆ. ನರೇಂದ್ರ ಮೋದಿ (Narendra Modi) ಶನಿವಾರ 3ನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಮೂಲಗಳ ಪ್ರಕಾರ, ಪಶ್ಚಿಮ ಬಂಗಾಳದ ಮೂವರು ಬಿಜೆಪಿ ಸಂಸದರು ಪಕ್ಷದ ಸಂಪರ್ಕದಲ್ಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿಕೊಂಡಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತ ಪಕ್ಷವು ಎಕ್ಸಿಟ್ ಪೋಲ್ ಮುನ್ನೋಟಗಳನ್ನು ಧಿಕ್ಕರಿಸಿ, ಬಂಗಾಳದಲ್ಲಿ ತನ್ನ ಹಿಡಿತವನ್ನು ಉಳಿಸಿಕೊಂಡ 2 ದಿನಗಳ ನಂತರ ಈ ಬೆಳವಣಿಗೆ ಸಂಭವಿಸಿದೆ.
ಇದನ್ನೂ ಓದಿ: ಅಯೋಧ್ಯೆಯ ಜನರಿಗೆ ಅನ್ಯಾಯ ಮಾಡಿದ್ದೇ ಬಿಜೆಪಿ ಸೋಲಿಗೆ ಕಾರಣ: ಅಖಿಲೇಶ್ ಯಾದವ್
ಬಿಜೆಪಿಯು ತೃಣಮೂಲ ಕಾಂಗ್ರೆಸ್ನ ಹೇಳಿಕೆಗಳನ್ನು ತಳ್ಳಿಹಾಕಿದೆ. ಈ ಹೇಳಿಕೆ ಸುಳ್ಳು ಎಂದು ಹೇಳಿದೆ. ಲೋಕಸಭೆ ಚುನಾವಣೆಯ ಎಲ್ಲಾ 7 ಹಂತಗಳಲ್ಲಿ ಚುನಾವಣೆ ಎದುರಿಸಿದ ಪಶ್ಚಿಮ ಬಂಗಾಳವು ಬಿಜೆಪಿಯತ್ತ ಒಲವು ತೋರುವ ನಿರೀಕ್ಷೆ ಇತ್ತು. ತಮ್ಮ ಹೆಚ್ಚಿನ ರ್ಯಾಲಿಗಳಲ್ಲಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎಲ್ಲಾ 42 ಲೋಕಸಭಾ ಸ್ಥಾನಗಳನ್ನು ಪಡೆಯುತ್ತದೆ ಎಂದು ಭವಿಷ್ಯ ನುಡಿದಿದ್ದರು. ಆದರೆ, ತೃಣಮೂಲ ಕಾಂಗ್ರೆಸ್ ಎಕ್ಸಿಟ್ ಪೋಲ್ ಮುನ್ಸೂಚನೆಯನ್ನು ಉಲ್ಟಾಪಲ್ಟಾ ಮಾಡಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ