ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆ 2024 ಫಲಿತಾಂಶ: ಜಯಪ್ರಕಾಶ್ ಹೆಗ್ಡೆ ವಿರುದ್ಧ ಶ್ರೀನಿವಾಸ್ ಪೂಜಾರಿಗೆ ಭರ್ಜರಿ ಗೆಲುವು

Udupi Chikmagalur Lok Sabha Election Results 2024 Live Counting Updates: ಲೋಕಸಭೆ ಚುನಾವಣೆಯ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಗೆಲುವು ಸಾಧಿಸಿದ್ದಾರೆ. ಗೆಲುವಿನ ಅಂತರ, ಅಭ್ಯರ್ಥಿಗಳು ಪಡೆದ ಮತಗಳ ವಿವರ ಇತ್ಯಾದಿ ಮಾಹಿತಿ ಇಲ್ಲಿ ಸಿಗಲಿದೆ.

ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆ 2024 ಫಲಿತಾಂಶ: ಜಯಪ್ರಕಾಶ್ ಹೆಗ್ಡೆ ವಿರುದ್ಧ ಶ್ರೀನಿವಾಸ್ ಪೂಜಾರಿಗೆ ಭರ್ಜರಿ ಗೆಲುವು
ಕೋಟ ಶ್ರೀನಿವಾಸ್ ಪೂಜಾರಿ & ಜಯಪ್ರಕಾಶ್ ಹೆಗ್ಡೆ
Follow us
Ganapathi Sharma
|

Updated on:Jun 04, 2024 | 5:00 PM

ಬೆಂಗಳೂರು, ಜೂನ್ 4: ಬಹು ನಿರೀಕ್ಷಿತ ಲೋಕಸಭೆ ಚುನಾವಣೆಯ ಫಲಿತಾಂಶ (Udupi Chikmagalur Election Result) ಪ್ರಕಟವಾಗಿದ್ದು, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ (Kota Srinivas Poojary) ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಜಯಪ್ರಕಾಶ್ ಹೆಗ್ಡೆ (Jayaprakash Hegde) ವಿರುದ್ಧ 2,58,903 ಮತಗಳಿಂದ ಜಯ ಗಳಿಸಿದ್ದಾರೆ. ಕಳೆದ ಬಾರಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿನಿಧಿಸಿದ್ದ ಈ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಗೆ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡಿತ್ತು. ಅಂತಿಮವಾಗಿ ಗೆಲುವು ಪೂಜಾರಿಯವರದ್ದಾಗಿದೆ.

ಶ್ರೀನಿವಾಸ ಪೂಜಾರಿಗೆ 7,31,408 ಮತgಳು ದೊರೆತರೆ, ಜಯಪ್ರಕಾಶ್‌ ಹೆಗ್ಡೆಗೆ 4,72,505 ಮತಗಳು ದೊರೆತಿವೆ.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವು ಚಿಕ್ಕಮಗಳೂರಿನ ತರೀಕೆರೆ, ಶೃಂಗೇರಿ, ಮೂಡಿಗೆರೆ ಹಾಗೂ ಉಡುಪಿ ಜಿಲ್ಲೆಯ ಕುಂದಾಪುರ, ಉಡುಪಿ ಕಾಪು, ಕಾರ್ಕಳ ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡಿದೆ.

ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಒಟ್ಟು 9,63,738 ಮತದಾರರಿದ್ದು, ಈ ಪೈಕಿ 4,75,419 ಪುರುಷರು ಹಾಗೂ 4,88,284 ಮಹಿಳೆಯರಾಗಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಶೇ 76.06ರಷ್ಟು ಮತದಾನವಾಗಿದೆ. ಕಳೆದ ಬಾರಿ (2019ರಲ್ಲಿ) ಶೇ 75.74 ರಷ್ಟು ಮತದಾನವಾಗಿತ್ತು.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

2019ರ ಫಲಿತಾಂಶ ಹೀಗಿತ್ತು

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೇ 62.46 ರಷ್ಟು ಮತಗಳನ್ನು ಗಳಿಸುವ ಮೂಲಕ ಭಾರತೀಯ ಜನತಾ ಪಕ್ಷದ ಶೋಭಾ ಕರಂದ್ಲಾಜೆ 2019 ರ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಕರಂದ್ಲಾಜೆ ಅವರು ಜೆಡಿಎಸ್‌ನ ಪ್ರಮೋದ್ ಮಧ್ವರಾಜ್ ವಿರುದ್ಧ ಶೇ 32.09 ರಷ್ಟು ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. 2019 ರ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಶೇ 75.74 ರಷ್ಟು ಮತದಾನವಾಗಿತ್ತು.

ಲೋಕಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:13 am, Tue, 4 June 24

ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ
ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ
ಶಿವಣ್ಣ ಶೀಘ್ರದಲ್ಲೇ ಶೂಟಿಂಗ್ ಮಾಡಬಹುದು: ಖುಷಿ ಹಂಚಿಕೊಂಡ ಡಾಲಿ
ಶಿವಣ್ಣ ಶೀಘ್ರದಲ್ಲೇ ಶೂಟಿಂಗ್ ಮಾಡಬಹುದು: ಖುಷಿ ಹಂಚಿಕೊಂಡ ಡಾಲಿ
ಸಿದ್ದರಾಮಯ್ಯ ಪಾದಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಶಿವಣ್ಣ
ಸಿದ್ದರಾಮಯ್ಯ ಪಾದಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಶಿವಣ್ಣ
ಡಾಮಿನೇಟ್ ಮಾಡುವ ಪ್ರವೃತ್ತಿ ರಜತ್​ಗೆ ಮುಳುವಾಯಿತೇ?
ಡಾಮಿನೇಟ್ ಮಾಡುವ ಪ್ರವೃತ್ತಿ ರಜತ್​ಗೆ ಮುಳುವಾಯಿತೇ?
ಹೆದ್ದಾರಿಯಲ್ಲೇ ಕಾರು ಬೈಕ್ ನಿಲ್ಲಿಸಿ ರಂಪಾಟ, ಕಿ.ಮೀಗಟ್ಟಲೆ ಟ್ರಾಫಿಕ್ ಜಾಮ್
ಹೆದ್ದಾರಿಯಲ್ಲೇ ಕಾರು ಬೈಕ್ ನಿಲ್ಲಿಸಿ ರಂಪಾಟ, ಕಿ.ಮೀಗಟ್ಟಲೆ ಟ್ರಾಫಿಕ್ ಜಾಮ್
ಅಧಿಕಾರಿಗಳು ಕೇವಲ ಸಿದ್ದರಾಮಯ್ಯ ಪ್ರಕರಣದಲ್ಲಿ ತಪ್ಪು ಮಾಡ್ತಾರೆಯೇ? ಕೃಷ್ಣ
ಅಧಿಕಾರಿಗಳು ಕೇವಲ ಸಿದ್ದರಾಮಯ್ಯ ಪ್ರಕರಣದಲ್ಲಿ ತಪ್ಪು ಮಾಡ್ತಾರೆಯೇ? ಕೃಷ್ಣ
ರನ್ನಿಂಗ್ ಕ್ಯಾಚ್ ಹಿಡಿದು ಎಲ್ಲರನ್ನು ಚಕಿತರನ್ನಾಗಿಸಿದ ಡೊನೊವನ್ ಫೆರೇರಾ
ರನ್ನಿಂಗ್ ಕ್ಯಾಚ್ ಹಿಡಿದು ಎಲ್ಲರನ್ನು ಚಕಿತರನ್ನಾಗಿಸಿದ ಡೊನೊವನ್ ಫೆರೇರಾ
‘ಭವ್ಯಾ ಗೌಡ ಪರಿಚಯ ಮೊದಲೇ ಇತ್ತು’; ಕೊನೆಗೂ ಒಪ್ಪಿಕೊಂಡ ತ್ರಿವಿಕ್ರಮ್
‘ಭವ್ಯಾ ಗೌಡ ಪರಿಚಯ ಮೊದಲೇ ಇತ್ತು’; ಕೊನೆಗೂ ಒಪ್ಪಿಕೊಂಡ ತ್ರಿವಿಕ್ರಮ್