ಒಂದು ಕಾಲದಲ್ಲಿ ಸೂಫಿ ಸಂತರ ನಾಡಾಗಿದ್ದು, ಆನಂತರ, 12ನೇ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯ ಪರಿಣಾಮದಿಂದ ಪ್ರಮುಖವಾಗಿ ಗುರುತಿಸಲ್ಪಟ್ಟ ಕ್ಷೇತ್ರ. ಸ್ವಾತಂತ್ರ್ಯ ಬಂದಾಗಿನಿಂದಲೂ ಇದು ಅಸ್ತಿತ್ತದಲ್ಲಿರುವ ಕ್ಷೇತ್ರವಾಗಿದ್ದು, ಈ ಮೊದಲು ಇದನ್ನು ಬಿಜಾಪುರ ಲೋಕಸಭಾ ಕ್ಷೇತ್ರವೆಂದು ಕರೆಯಲಾಗುತ್ತಿತ್ತು. ಇದೀಗ ಈ ಕ್ಷೇತ್ರವನ್ನು ವಿಜಯಪುರ ಲೋಕಸಭಾ ಕ್ಷೇತ್ರ ಎಂದು ಕರೆಯಲ್ಪಡುತ್ತಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರವು ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಗೆ ಮೀಸಲಾಗಿರುವ ಕ್ಷೇತ್ರ.
ಇನ್ನೇನು ಕೆಲವೇ ಕ್ಷಣಗಳಲ್ಲಿ ಲೋಕಸಭಾ ಚುನಾವಣೆಯ ಫಲಿತಾಂಶಗಳು ಹೊರ ಬೀಳಲಿವೆ. ರಾಜಕೀಯ ಅನುಭವವನ್ನು ಸಾಕಷ್ಟು ಹೊಂದಿರುವ ರಮೇಶ್ ಜಿಗಜಿಣಗಿ ಬಿಜೆಪಿ ಅಭ್ಯರ್ಥಿಯಾಗಿದ್ದರೆ, ಕಾಂಗ್ರೆಸ್ನಿಂದ ರಾಜು ಆಲಗೂರ ಕಣದಲ್ಲಿದ್ದಾರೆ. ಉಭಯ ಪಕ್ಷಗಳು ಜಾತೀಯ ಲೆಕ್ಕಾಚಾರವನ್ನೇ ಹಾಕಿ ಟಿಕೆಟ್ ನೀಡಿದ್ದು, ಈ ಬಾರಿ ಚುನಾವಣೆಯಲ್ಲಿ ವಿಜಯಾಪುರದ ಜನತೆ ಯಾರನ್ನು ಕೈ ಹಿಡಿಯಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ರಮೇಶ್ ಜಿಗಜಿಣಗಿ 6,35,867 ಮತಗಳನ್ನು ಪಡೆದು ಜಯ ಸಾಧಿಸಿದ್ದರು. ಇವರಿಗೆ ಜೆಡಿಎಸ್‌ನ ಡಾ.ಸುನಿತಾ ದೇವಾನಂದ್ ಚೌಹಾಣ್ ಸ್ಪರ್ಧೆ ನಿಡಿದ್ದರು. ಇವರು ಕಳೆದ ಚುನಾವಣೆಯಲ್ಲಿ 377,829 ಮತ ಪಡೆದಿದ್ದರು. ಈ ಬಾರಿ ಹಾಲಿ ಸಂಸದ ಮತ್ತೊಮ್ಮೆ ಇಂತಹದ್ದೆ ಸಾಧನೆ ಮಾಡುವ ವಿಶ್ವಾಸ ಹೊಂದಿದ್ದಾರೆ. ಒಟ್ಟು 8 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ವಿಜಯಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ 6, ಬಿಜೆಪಿ ಹಾಗೂ ಜೆಡಿಎಸ್ ತಲಾ ಒಂದು ಸ್ಥಾನವನ್ನು ಗೆದ್ದಿವೆ. ಈ ಬಾರಿ ಮತದಾರ ಯಾವ ಪಕ್ಷಕ್ಕೆ ಮತ ಹಾಕಲಿದ್ದಾನೆ ಎಂಬುದು ಕುತೂಹಲ ಮೂಡಿಸಿದೆ.
ಈ ಕ್ಷೇತ್ರವನ್ನು ಮೊದಲು ಉತ್ತರ ಲೋಕಸಭಾ ಕ್ಷೇತ್ರ ಎಂದು ಕರೆಯಲಾಗುತ್ತಿತ್ತು (ಅಂದರೆ ಬಾಂಬೆ ರಾಜ್ಯ). 1952ರಿಂದ 2009ರವರಗೆ ಜನರಲ್ ಕೆಟಗರಿಯ ಅಭ್ಯರ್ಥಿಗಳು ಪ್ರತಿನಿಧಿಸುತ್ತಿದ್ದ ಕ್ಷೇತ್ರವಾಗಿತ್ತು. ಕಳೆದ 25 ವರ್ಷಗಳಿಂದ ಮೀಸಲು ಕ್ಷೇತ್ರವಾಗಿ ಮಾರ್ಪಟ್ಟಿದೆ. 2009ರಿಂದ 2024ರವರೆಗೂ ಬಿಜೆಪಿಯ ರಮೇಶ್ ಜಿಗಜಿಣಗಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಪರಿಶಿಷ್ಟ ಪಂಗಡದವರಿಗೆ ಮೀಸಲಿರುವ ಕ್ಷೇತ್ರ ಇದಾಗಿದೆ. 1952 ರಿಂದ 2009ರ ಅವಧಿಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜನತಾದಳದ ಅಭ್ಯರ್ಥಿಗಳು ಸಂಸದರಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿ ಸತತ ಐದು ಗೆಲುವುಗಳನ್ನು ಕಂಡಿರುವ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಲೋಕಸಭಾ ಚುನಾವಣೆ 2024ರಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯೊಂದಿಗೆ ಹೋರಾಡಿವೆ ಬಿಜೆಪಿಯಿಂದ ರಮೇಶ್ ಜಿಗಜಿಣಗಿ, ಕಾಂಗ್ರೆಸ್ನಿಂದ ಪ್ರೋ ರಾಜು ಆಲಗೂರ ಕಣದಲ್ಲಿದ್ದು, ಯಾರು ಗೆಲ್ಲಲಿದ್ದಾರೆ ಎಂದು ಕಾದುನೋಡಬೇಕಿದೆ.
ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:43 am, Tue, 4 June 24