Viral Video: ಇವಿಎಂ ತಡವಾಗಿ ಬಂದಿದ್ದಕ್ಕೆ ಮತಯಂತ್ರಕ್ಕೆ ಬೆಂಕಿ ಹಚ್ಚಿದ ಮತದಾರ!

Maharashtra Lok Sabha Election: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಸಂಗೋಳದಲ್ಲಿ ಮತದಾರರೊಬ್ಬರು ಇವಿಎಂಗೆ ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ನಡೆದಿದೆ. ಇಂದು ಚುನಾವಣೆ ವೇಳೆ ಇವಿಎಂ ಮಷಿನ್ ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ಮತದಾರ ಆ ಮತ ಯಂತ್ರಕ್ಕೆ ಬೆಂಕಿ ಹಚ್ಚಿದ್ದಾರೆ.

Viral Video: ಇವಿಎಂ ತಡವಾಗಿ ಬಂದಿದ್ದಕ್ಕೆ ಮತಯಂತ್ರಕ್ಕೆ ಬೆಂಕಿ ಹಚ್ಚಿದ ಮತದಾರ!
ಮತಯಂತ್ರಕ್ಕೆ ಬೆಂಕಿ ಹಚ್ಚಿದ ಮತದಾರ
Follow us
ಸುಷ್ಮಾ ಚಕ್ರೆ
|

Updated on: May 07, 2024 | 5:25 PM

ಮುಂಬೈ: ಮಹಾರಾಷ್ಟ್ರದ (Maharashtra) ಸೊಲ್ಲಾಪುರ (Solapur) ಜಿಲ್ಲೆಯ ಸಂಗೋಳ ತಾಲೂಕಿನ ಬಾದಲವಾಡಿಯಲ್ಲಿ ಮತಯಂತ್ರವನ್ನು (EVM) ಮತಗಟ್ಟೆಗೆ ತರುವುದು ತಡವಾಗಿದ್ದರಿಂದ ಕೋಪಗೊಂಡ ಮತದಾರ ಪೆಟ್ರೋಲ್ ತಂದು ಇವಿಎಂಗೆ ಬೆಂಕಿ ಹಚ್ಚಿರುವ ವಿಚಿತ್ರ ಘಟನೆ ನಡೆದಿದೆ. ಚುನಾವಣಾ ಅಧಿಕಾರಿಗಳು ಆ ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಾದ ಲೋಕಸಭಾ ಕ್ಷೇತ್ರದ ಸಂಗೋಳ ತಾಲೂಕಿನ ಬಾಗಲವಾಡಿಯ ಮತಗಟ್ಟೆಯಲ್ಲಿ ಮತದಾರನೊಬ್ಬ ಇವಿಎಂ ಯಂತ್ರಕ್ಕೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ತಕ್ಷಣ ಪೊಲೀಸರು ಆತನನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಸೊಲ್ಲಾಪುರ ಪೊಲೀಸ್ ವರಿಷ್ಠಾಧಿಕಾರಿ ಶಿರೀಶ ದೇಶಪಾಂಡೆ ಮತಗಟ್ಟೆಗೆ ಭೇಟಿ ನೀಡಿದರು. ಸಂಗೋಳ ಪೊಲೀಸ್ ಠಾಣೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸುವ ಪ್ರಕ್ರಿಯೆ ಆರಂಭವಾಗಿದೆ.

ಇದನ್ನೂ ಓದಿ: Lok Sabha Elections: ಅಂತಿಮ ಹಂತದ ಲೋಕಸಭಾ ಚುನಾವಣೆ; ಮೇ 14ಕ್ಕೆ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ಬೆಂಕಿ ಹಚ್ಚಲು ಬಂದಿದ್ದ ಯುವಕ ಮರಾಠರ ಪರವಾಗಿ ಘೋಷಣೆಗಳನ್ನು ಕೂಗುತ್ತಿದ್ದನು. ಅಷ್ಟೇ ಅಲ್ಲ, ಮತಗಟ್ಟೆಯಲ್ಲಿ ಅಳವಡಿಸಿರುವ ಮತಯಂತ್ರವೂ ಬೋಗಸ್ ಎಂದು ಯುವಕ ಆರೋಪಿಸಿದ್ದಾನೆ. ಈ ವೇಳೆ ಯುವಕ ಮತಯಂತ್ರಕ್ಕೆ ಪೆಟ್ರೋಲ್ ಸುರಿದು ಸುಡಲು ಯತ್ನಿಸಿದ್ದಾನೆ. ಆದರೆ, ಅಧಿಕಾರಿಗಳು ಆ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಹೊರಬಿದ್ದಿದೆ. ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಮಹಾರಾಷ್ಟ್ರ ಸೇರಿದಂತೆ ದೇಶಾದ್ಯಂತ ನಡೆಯುತ್ತಿದೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮತಗಟ್ಟೆಯ ಒಳಗೆ ಮತ್ತು ಹೊರಗೆ ಗದ್ದಲ ಉಂಟಾದಾಗ ವ್ಯಕ್ತಿಯೊಬ್ಬ ನೀರನ್ನು ಬಳಸಿ ಇವಿಎಂನಲ್ಲಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ಘಟನೆಯಿಂದಾಗಿ ಹೊಸ ಯಂತ್ರ ತರುವವರೆಗೆ ಕೆಲಕಾಲ ಮತದಾನ ಸ್ಥಗಿತಗೊಳಿಸಬೇಕಾಯಿತು. ನಂತರ ಚುನಾವಣಾ ಮತಗಟ್ಟೆಯ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಇದನ್ನೂ ಓದಿ: ಲೋಕಸಭಾ ಚುನಾವಣೆ 2024: ಮತದಾನ ಮಾಡಿ ಬಂದ ಮೋದಿಗೆ ರಾಖಿ ಕಟ್ಟಿ ಹಾರೈಸಿದ ಮಹಿಳೆ

ಸೊಲ್ಲಾಪುರದಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರ ಪುತ್ರಿ ಹಾಗೂ ಸೊಲ್ಲಾಪುರ ಸಿಟಿ ಸೆಂಟ್ರಲ್ ಕ್ಷೇತ್ರದಿಂದ 3 ಬಾರಿ ಶಾಸಕಿಯಾಗಿರುವ ಪ್ರಣಿತಿ ಶಿಂಧೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿಯ ರಾಮ್ ಸತ್ಪುಟೆಯಿಂದ ಅವರು ಕಠಿಣ ಸವಾಲು ಎದುರಿಸುತ್ತಿದ್ದಾರೆ. ಸತ್ಪುಟೆ ಅವರು ಪಕ್ಕದ ಮಾಧಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸೋಲಾಪುರ ಜಿಲ್ಲೆಯ ಮಲ್ಶಿರಾಸ್‌ನಿಂದ ಶಾಸಕರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?