ಸರ್ವಾಧಿಕಾರದ ವಿರುದ್ಧ ಮತ ಚಲಾಯಿಸಿ: 6ನೇ ಹಂತದ ಮತದಾನದ ವೇಳೆ ಮತದಾರರಿಗೆ ಅರವಿಂದ್ ಕೇಜ್ರಿವಾಲ್ ಮನವಿ

|

Updated on: May 25, 2024 | 1:59 PM

ನಾನು ಇಂದು ನನ್ನ ತಂದೆ, ಹೆಂಡತಿ ಮತ್ತು ಮಕ್ಕಳೊಂದಿಗೆ ಮತ ಚಲಾಯಿಸಿದ್ದೇನೆ. ನನ್ನ ತಾಯಿ ತುಂಬಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರಿಗೆ ಮತದಾನ ಮಾಡಲು ಹೋಗಲಾಗಲಿಲ್ಲ. ನಾನು ಸರ್ವಾಧಿಕಾರ, ನಿರುದ್ಯೋಗ ಮತ್ತು ಹಣದುಬ್ಬರದ ವಿರುದ್ಧ ಮತ ಹಾಕಿದ್ದೇನೆ. ನೀವೂ ಹೋಗಿ ಅದರ ವಿರುದ್ಧ ಮತ ಚಲಾಯಿಸಬೇಕು” ಎಂದು ಮಾಧ್ಯಮದವರ ಜತೆ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ

ಸರ್ವಾಧಿಕಾರದ ವಿರುದ್ಧ ಮತ ಚಲಾಯಿಸಿ: 6ನೇ ಹಂತದ ಮತದಾನದ ವೇಳೆ ಮತದಾರರಿಗೆ ಅರವಿಂದ್ ಕೇಜ್ರಿವಾಲ್ ಮನವಿ
ಅರವಿಂದ್ ಕೇಜ್ರಿವಾಲ್
Follow us on

ದೆಹಲಿ ಮೇ 25: ದೆಹಲಿ (Delhi) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ನಡೆಯುತ್ತಿರುವ ಲೋಕಸಭೆ ಚುನಾವಣೆಯ (Lok Sabha Election) ಆರನೇ ಹಂತದಲ್ಲಿ “ಸರ್ವಾಧಿಕಾರದ ವಿರುದ್ಧ ಮತ ಚಲಾಯಿಸುವಂತೆ” ಮತದಾರರನ್ನು ಶನಿವಾರ ಒತ್ತಾಯಿಸಿದ್ದಾರೆ. ಚಾಂದಿನಿ ಚೌಕ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಿವಿಲ್ ಲೈನ್ಸ್ ಪ್ರದೇಶದ ಮತಗಟ್ಟೆಯಲ್ಲಿ ಅರವಿಂದ್ ಕೇಜ್ರಿವಾಲ್, ಅವರ ಪತ್ನಿ ಸುನೀತಾ ಕೇಜ್ರಿವಾಲ್ ಮತ್ತು ಇತರ ಕುಟುಂಬ ಸದಸ್ಯರು ತಮ್ಮ ಮತ ಚಲಾಯಿಸಿದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ. ಕೇಜ್ರಿವಾಲ್ ಅವರ ತಾಯಿಗೆ ಅನಾರೋಗ್ಯದ ಕಾರಣ ಅವರು ಮತದಾನ ಮಾಡಲಾಗಲಿಲ್ಲ.

“ನಾನು ಇಂದು ನನ್ನ ತಂದೆ, ಹೆಂಡತಿ ಮತ್ತು ಮಕ್ಕಳೊಂದಿಗೆ ಮತ ಚಲಾಯಿಸಿದ್ದೇನೆ. ನನ್ನ ತಾಯಿ ತುಂಬಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರಿಗೆ ಮತದಾನ ಮಾಡಲು ಹೋಗಲಾಗಲಿಲ್ಲ. ನಾನು ಸರ್ವಾಧಿಕಾರ, ನಿರುದ್ಯೋಗ ಮತ್ತು ಹಣದುಬ್ಬರದ ವಿರುದ್ಧ ಮತ ಹಾಕಿದ್ದೇನೆ. ನೀವೂ ಹೋಗಿ ಅದರ ವಿರುದ್ಧ ಮತ ಚಲಾಯಿಸಬೇಕು” ಎಂದು ಮಾಧ್ಯಮದವರ ಜತೆ ಮಾತನಾಡಿದ ಕೇಜ್ರಿವಾಲ್ ಹೇಳಿದ್ದಾರೆ.

ಮತ ಚಲಾಯಿಸಿದ ಕೇಜ್ರಿವಾಲ್


ಬೇಸಿಗೆಯ ತೀವ್ರತೆಯ ನಡುವೆಯೂ ಮತಗಟ್ಟೆಗಳಿಗೆ ತೆರಳಿ ನಿರುದ್ಯೋಗ, ಹಣದುಬ್ಬರ ಸೇರಿದಂತೆ ಹಲವು ಸಮಸ್ಯೆಗಳ ವಿರುದ್ಧ ಮತ ಚಲಾಯಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು. ಶುಕ್ರವಾರ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಕೇಜ್ರಿವಾಲ್, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು “ಬಲಪಡಿಸುವಂತೆ” ಮತದಾರರಿಗೆ ಮನವಿ ಮಾಡಿದ್ದಾರೆ.

ನನ್ನ ಎಲ್ಲಾ ಮತದಾರ ಸಹೋದರ ಸಹೋದರಿಯರು ಖಂಡಿತವಾಗಿ ಬಂದು ಮತ ಚಲಾಯಿಸುವಂತೆ ನಾನು ಮನವಿ ಮಾಡುತ್ತೇನೆ. ನಿಮ್ಮ ಕುಟುಂಬ, ಸಂಬಂಧಿಕರು ಮತ್ತು ಸ್ನೇಹಿತರಲ್ಲಿಯೂ ಸಹ ಮತ ಚಲಾಯಿಸಲು ಕೇಳಿ. ಪ್ರಜಾಪ್ರಭುತ್ವದ ಈ ಮಹಾನ್ ಹಬ್ಬದಲ್ಲಿ, ನಿಮ್ಮ ಪ್ರತಿಯೊಂದು ಮತವೂ ಸರ್ವಾಧಿಕಾರಿ ಚಿಂತನೆಯ ವಿರುದ್ಧ ಮತ್ತು ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಬಲಪಡಿಸುತ್ತದೆ. ಮತಗಟ್ಟೆಗೆ ಹೋಗಿ ಭಾರತದಲ್ಲಿ ಪ್ರಜಾಪ್ರಭುತ್ವವಿದೆ ಎಂದು ನಿಮ್ಮ ಮತದೊಂದಿಗೆ ತೋರಿಸಿ. ಪ್ರಜಾಪ್ರಭುತ್ವ ಉಳಿಯುತ್ತದೆ, ”ಎಂದು ಅವರು ಕೇಜ್ರಿವಾಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಎಲ್ಲಾ ಏಳು ಲೋಕಸಭಾ ಸ್ಥಾನಗಳಿಗೆ – ನವದೆಹಲಿ, ಈಶಾನ್ಯ ದೆಹಲಿ, ಪೂರ್ವ ದೆಹಲಿ, ಪಶ್ಚಿಮ ದೆಹಲಿ, ದಕ್ಷಿಣ ದೆಹಲಿ, ವಾಯುವ್ಯ ದೆಹಲಿ ಮತ್ತು ಚಾಂದಿನಿ ಚೌಕ್ – ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದ್ದು ಮತ್ತು ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ.

ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ವಿರುದ್ಧ ಎಎಪಿ-ಕಾಂಗ್ರೆಸ್ ಮೈತ್ರಿಕೂಟಗಳು ಸ್ಪರ್ಧಿಸುತ್ತಿವೆ.

ಈಶಾನ್ಯ ದೆಹಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ವಿರುದ್ಧ ಬಿಜೆಪಿಯ ಎರಡು ಬಾರಿ ಸಂಸದ ಮನೋಜ್ ತಿವಾರಿ, ವಾಯವ್ಯ ದೆಹಲಿಯಿಂದ ಕಾಂಗ್ರೆಸ್‌ನ ಉದಿತ್ ರಾಜ್, ನವದೆಹಲಿಯಿಂದ ಬಿಜೆಪಿಯ ಬಾನ್ಸುರಿ ಸ್ವರಾಜ್ ಮತ್ತು ಪೂರ್ವ ದೆಹಲಿಯಲ್ಲಿ ಎಎಪಿಯ ಕುಲದೀಪ್ ಕುಮಾರ್ ಸೇರಿದಂತೆ ಕೆಲವು ಪ್ರಮುಖ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಭವಿಷ್ಯ ನುಡಿದ ಯೋಗೇಂದ್ರ ಯಾದವ್; ಲೆಕ್ಕಾಚಾರ ಹೀಗಿದೆ

ಏತನ್ಮಧ್ಯೆ, ಹಿಂದಿನ ದಿನ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇಂಡಿಯಾ ಬ್ಲಾಕ್‌ನ ಭದ್ರಕೋಟೆಯಾಗಿರುವ ಪ್ರದೇಶಗಳಲ್ಲಿ ಮತದಾನ ಪ್ರಕ್ರಿಯೆಯನ್ನು “ನಿಧಾನಗೊಳಿಸಲು” ದೆಹಲಿ ಪೊಲೀಸರೊಂದಿಗೆ ಸಭೆ ನಡೆಸಿದರು ಎಂದು ದೆಹಲಿ ಸಚಿವರು ಮತ್ತು ಎಎಪಿ ನಾಯಕಿ ಅತಿಶಿ ಆರೋಪಿಸಿದರು. ಆದಾಗ್ಯೂ, “ಅಂತಹ ಆರೋಪಗಳನ್ನು ಮಾಡುವವರ ವಿರುದ್ಧ ಕಠಿಣ ಕ್ರಮ” ತೆಗೆದುಕೊಳ್ಳುವುದಾಗಿ ರಾಜ್ಯಪಾಲರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:55 pm, Sat, 25 May 24