ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (CM Mamata Banerjee) ಅವರು ಇಂದು ಪಶ್ಚಿಮ ಬಂಗಾಳದಲ್ಲಿ (West Bengal) ತಮ್ಮ ಸಾರ್ವಜನಿಕ ರ‍್ಯಾಲಿಯಲ್ಲಿ ವೇದಿಕೆಯ ಮೇಲೆ ಹಲವಾರು ಮಹಿಳೆಯರೊಂದಿಗೆ ನೃತ್ಯ ಮಾಡಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಮತಾ ಬ್ಯಾನರ್ಜಿ ಭಾಗವಹಿಸಿದ್ದ ರ‍್ಯಾಲಿ ಮುಕ್ತಾಯವಾಗುತ್ತಿದ್ದಂತೆ, ಅವರು ವೇದಿಕೆಯಲ್ಲಿ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಮಹಿಳಾ ಕಾರ್ಯಕರ್ತರೊಂದಿಗೆ ಸೇರಿಕೊಂಡು ಸಾಂಪ್ರದಾಯಿಕ ಗೀತೆಗೆ ಡ್ಯಾನ್ಸ್ ಮಾಡಿದ್ದಾರೆ.
ಮಮತಾ ಬ್ಯಾನರ್ಜಿ ಮಹಿಳೆಯರೊಂದಿಗೆ ನಿಂತು ಕಾಲು ಕುಣಿಸುತ್ತಾ, ಅವರ ಕೈ ಹಿಡಿದು ಹೆಜ್ಜೆ ಹಾಕುತ್ತಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ನಂತರ ಅವರು ವೇದಿಕೆಯಿಂದ ಕೆಳಗಿಳಿದು, ಡ್ಯಾನ್ಸ್ ಮಾಡಲು ತನ್ನನ್ನು ಹುರಿದುಂಬಿಸಿದ ಸಭಿಕರತ್ತ ಕೈ ಬೀಸಿದರು.
#WATCH | West Bengal CM Mamata Banerjee joins a few women as they dance together on stage, at her public rally in South 24 Parganas.#LokSabhaElections2024 pic.twitter.com/ZhSNC2ZZLj
— ANI (@ANI) May 29, 2024
ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಇಂಡಿಯಾ ಮೈತ್ರಿಕೂಟಕ್ಕೆ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದಲ್ಲಿ ಕೊನೆಯ ಹಂತದ ಲೋಕಸಭೆ ಚುನಾವಣೆಗೆ 72 ಗಂಟೆಗಳಿಗಿಂತ ಕಡಿಮೆ ಸಮಯ ಉಳಿದಿದ್ದು, ಮಮತಾ ಬ್ಯಾನರ್ಜಿ ಮತ್ತು ಅವರ ಟಿಎಂಸಿ ಪಕ್ಷವು ಪಶ್ಚಿಮ ಬಂಗಾಳದಲ್ಲಿ ಭಾರೀ ಪ್ರಚಾರವನ್ನು ನಡೆಸುತ್ತಿದೆ.
ಜೂನ್ 1ರಂದು ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಪ್ರತಿನಿಧಿಸುವ ಡೈಮಂಡ್ ಹಾರ್ಬರ್ ಸೇರಿದಂತೆ 9 ಸ್ಥಾನಗಳಲ್ಲಿ 7ನೇ ಹಂತದಲ್ಲಿ ಮತದಾನ ನಡೆಯಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ