ಗೆಲುವು, ಸೋಲು ರಾಜಕೀಯದ ಭಾಗ, ನಂಬರ್ ಗೇಮ್ ಮುಂದುವರಿಯುತ್ತದೆ: ಪ್ರಧಾನಿ ಮೋದಿ
ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ಮಾತನಾಡಿದ ಅವರು ಎನ್‌ಡಿಎ ಮೂರನೇ ಬಾರಿಗೆ ಸರ್ಕಾರ ರಚಿಸಲು ಹಕ್ಕು ಸಾಧಿಸಲಿದೆ. ಈ ಫಲಿತಾಂಶ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಗೆಲುವು. ಗೆಲುವು ಮತ್ತು ಸೋಲು ರಾಜಕೀಯದ ಭಾಗವಾಗಿದೆ. ಸಂಖ್ಯೆಗಳ ಆಟ ಮುಂದುವರಿಯುತ್ತದೆ ಎಂದು ಮೋದಿ ಹೇಳಿದ್ದಾರೆ.
ದೆಹಲಿ ಜೂನ್ 05: ಪ್ರಸಕ್ತ ಸಾಲಿನ ಕೊನೆಯ ಸಂಪುಟ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಸೋಲು-ಗೆಲುವು ರಾಜಕೀಯದ ಭಾಗ ಎಂದು ಹೇಳಿದ್ದಾರೆ. 2014 ರಲ್ಲಿ 282 ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ (Lok sabha Elections) 303 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಈ ಬಾರಿ 240 ಸ್ಥಾನಗಳನ್ನು ಗೆದ್ದಿದೆ. 272 ಸ್ಥಾನಗಳು ಬಹುಮತಕ್ಕೆ ಬೇಕಾಗಿದ್ದು ಬಿಜೆಪಿಗೆ 32 ಸ್ಥಾನಗಳ ಕೊರತೆಯಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸದಸ್ಯರು ಗೆದ್ದಿರುವ 53 ಸ್ಥಾನಗಳ ಮೇಲೆ ಸರ್ಕಾರ ರಚನೆ ಅವಲಂಬಿತವಾಗಿದೆ.
“ಕಳೆದ 10 ವರ್ಷಗಳಿಂದ ನಾವು ಉತ್ತಮ ಕೆಲಸ ಮಾಡಿದ್ದೇವೆ. ನಾವು ಅದನ್ನು ಮುಂದುವರಿಸುತ್ತೇವೆ” ಎಂದು ಪ್ರಧಾನಿ ಮೋದಿ ಕ್ಯಾಬಿನೆಟ್ ಸಭೆಯಲ್ಲಿ ಎನ್‌ಡಿಎ ನಾಯಕರಿಗೆ ಹೇಳಿದ್ದಾರೆ.
ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ಮಾತನಾಡಿದ ಅವರು ಎನ್‌ಡಿಎ ಮೂರನೇ ಬಾರಿಗೆ ಸರ್ಕಾರ ರಚಿಸಲು ಹಕ್ಕು ಸಾಧಿಸಲಿದೆ. ಈ ಫಲಿತಾಂಶ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಗೆಲುವು. ಗೆಲುವು ಮತ್ತು ಸೋಲು ರಾಜಕೀಯದ ಭಾಗವಾಗಿದೆ. ಸಂಖ್ಯೆಗಳ ಆಟ ಮುಂದುವರಿಯುತ್ತದೆ ಎಂದು ಮೋದಿ ಹೇಳಿದ್ದಾರೆ.
ಕಳೆದ 10 ವರ್ಷಗಳಲ್ಲಿ ಅತ್ಯುತ್ತಮ ಕೊಡುಗೆ ನೀಡಿದ ಕೇಂದ್ರ ಸಚಿವರಿಗೆ ಧನ್ಯವಾದ ಅರ್ಪಿಸಿದ ಮೋದಿ,ನೀವೆಲ್ಲರೂ ತುಂಬಾ ಶ್ರಮಿಸಿದ್ದೀರಿ ಎಂದು ಹೇಳಿದ್ದಾರೆ. ಸಭೆಯ ನಂತರ ರಾಜೀನಾಮೆ ಸಲ್ಲಿಸಲು ರಾಷ್ಟ್ರಪತಿ ಭವನಕ್ಕೆ ತೆರಳಿದಅವರು ಶನಿವಾರ ನೂತನ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇದನ್ನೂ ಓದಿ: ಜೂನ್ 8ರಂದು ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸಾಧ್ಯತೆ
“ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಹೊಸ ಸರ್ಕಾರ ಅಧಿಕಾರ ಸ್ವೀಕರಿಸುವವರೆಗೆ ಮುಂದುವರಿಯಲು ನರೇಂದ್ರ ಮೋದಿ ಮತ್ತು ಮಂತ್ರಿ ಮಂಡಳಿಗೆ ವಿನಂತಿಸಿದ್ದಾರೆ” ಎಂದು ರಾಷ್ಟ್ರಪತಿ ಭವನ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಸ್ತುತ 17ನೇ ಲೋಕಸಭೆಯ ಅವಧಿ ಜೂನ್ 16ಕ್ಕೆ ಕೊನೆಗೊಳ್ಳಲಿದೆ. 2019 ರಲ್ಲಿ 52 ಸ್ಥಾನ ಗಳಿಸಿದ್ದ ಕಾಂಗ್ರೆಸ್ ಈ ಚುನಾವಣೆಯಲ್ಲಿ 99 ಸ್ಥಾನಗಳನ್ನು ಗೆದ್ದುಕೊಂಡಿದೆ.
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ