ಬಿಜೆಪಿ ಟಿಕೆಟ್ ವಂಚಿತರ ಬಂಡಾಯ ಶಮನಗೊಳಿಸಲು ಭೂಪೇಂದ್ರ ಯಾದವ್​​​ಗೆ ಟಾಸ್ಕ್ ನೀಡಿದ ಅಮಿತ್ ಶಾ

Madhya Pradesh election: ಇಂದೋರ್ ವಿಭಾಗದಲ್ಲಿ ಅರ್ಧ ಡಜನ್ ಗೂ ಹೆಚ್ಚು ಕ್ಷೇತ್ರಗಳಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸುವ ಮೂಲಕ ಬಿಜೆಪಿ ಅಭ್ಯರ್ಥಿಗಳಿಗೆ ತೊಂದರೆ ಸೃಷ್ಟಿಸಿದ್ದಾರೆ. ಅವರನ್ನು ಭೇಟಿ ಮಾಡಿ ಅಸಮಾಧಾನ ಹೋಗಲಾಡಿಸುವ ಪ್ರಯತ್ನವೂ ಆರಂಭವಾಗಿದೆ. ಕೆಲವು ಕೋಪಗೊಂಡ ನಾಯಕರನ್ನು ಇಂದೋರ್‌ಗೆ ಕರೆಸಲಾಗಿದೆ. ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗೆ ಏಕಾಏಕಿ ಚರ್ಚೆ ನಡೆಸಿ ನಾಮಪತ್ರ ಹಿಂಪಡೆಯುವಂತೆ ಸೂಚಿಸಿದ್ದಾರೆ.

ಬಿಜೆಪಿ ಟಿಕೆಟ್ ವಂಚಿತರ ಬಂಡಾಯ ಶಮನಗೊಳಿಸಲು ಭೂಪೇಂದ್ರ ಯಾದವ್​​​ಗೆ ಟಾಸ್ಕ್ ನೀಡಿದ ಅಮಿತ್ ಶಾ
ಭೂಪೇಂದ್ರ ಯಾದವ್
Edited By: ರಶ್ಮಿ ಕಲ್ಲಕಟ್ಟ

Updated on: Oct 31, 2023 | 4:31 PM

ಭೋಪಾಲ್ ಅಕ್ಟೋಬರ್ 31: ನವೆಂಬರ್ 17 ರಂದು ಮಧ್ಯಪ್ರದೇಶದಲ್ಲಿ (Madhya Pradesh) ನಡೆಯಲಿರುವ ವಿಧಾನಸಭಾ ಚುನಾವಣೆಗೆ (Madhya Pradesh Election)  ಅಖಾಡ ಸಜ್ಜಾಗುತ್ತಿದೆ.‌ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾಗಿದೆ. ಅಕ್ಟೋಬರ್ 21ರಿಂದ ಆರಂಭವಾದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಕ್ಟೋಬರ್ 30ಕ್ಕೆ ಮುಕ್ತಾಯಗೊಂಡಿದೆ. ಅಕ್ಟೋಬರ್ 30 ರಂದು ರಾಜ್ಯದ ಎಲ್ಲಾ 230 ವಿಧಾನಸಭಾ ಕ್ಷೇತ್ರಗಳಲ್ಲಿ 2489 ಅಭ್ಯರ್ಥಿಗಳಿಂದ 2811 ನಾಮಪತ್ರಗಳು ಸಲ್ಲಿಕೆಯಾಗಿವೆ. ಅಕ್ಟೋಬರ್ 21 ರಿಂದ ಅಕ್ಟೋಬರ್ 30 ರವರೆಗೆ ಮಧ್ಯಪ್ರದೇಶದಲ್ಲಿ ಒಟ್ಟು 3832 ಅಭ್ಯರ್ಥಿಗಳು ಸಲ್ಲಿಸಿದ್ದಾರೆ. ಅಕ್ಟೋಬರ್ 31 ರಂದು ನಾಮಪತ್ರಗಳ ಪರಿಶೀಲನೆ ನಡೆದಿದೆ. ನವೆಂಬರ್ 2 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ನವೆಂಬರ್ 17 ರಂದು ಇಡೀ ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಮತ್ತೆ ಅಧಿಕಾರದ ಗದ್ದುಗೆ ಹಿಡಿಯಲು ಹವಣಿಸುತ್ತಿರುವ ಆಡಳಿತರೂಢ ಬಿಜೆಪಿ ಪಕ್ಷದಲ್ಲಿ ಬಂಡಾಯದ ಬಿಸಿ ಜೋರಾಗಿದೆ. ಹಲವು ಹಿರಿಯನಾಯಕರಿಗೆ ಟಿಕೆಟ್ ತಪ್ಪಿಸಿ ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಟಿಕೆಟ್ ವಂಚಿತರಾದ ನಾಯಕರು ಬಂಡಾಯದ ಬಾವುಟ ಹಾರಿಸಿ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ. ಬಂಡಾಯದ ಬಿಸಿ ತಣ್ಣಗಾಗಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಖುದ್ದು ಅಖಾಡಕ್ಕೆ ಇಳಿದಿದ್ದಾರೆ.

ಇಂದೋರ್ ವಿಭಾಗದಲ್ಲಿ ಅರ್ಧ ಡಜನ್ ಗೂ ಹೆಚ್ಚು ಕ್ಷೇತ್ರಗಳಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸುವ ಮೂಲಕ ಬಿಜೆಪಿ ಅಭ್ಯರ್ಥಿಗಳಿಗೆ ತೊಂದರೆ ಸೃಷ್ಟಿಸಿದ್ದಾರೆ. ಅವರನ್ನು ಭೇಟಿ ಮಾಡಿ ಅಸಮಾಧಾನ ಹೋಗಲಾಡಿಸುವ ಪ್ರಯತ್ನವೂ ಆರಂಭವಾಗಿದೆ. ಕೆಲವು ಕೋಪಗೊಂಡ ನಾಯಕರನ್ನು ಇಂದೋರ್‌ಗೆ ಕರೆಸಲಾಗಿದೆ. ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗೆ ಏಕಾಏಕಿ ಚರ್ಚೆ ನಡೆಸಿ ನಾಮಪತ್ರ ಹಿಂಪಡೆಯುವಂತೆ ಸೂಚಿಸಿದ್ದಾರೆ.

ಧಾರ್ ಜಿಲ್ಲೆಯ ರಾಜೀವ್ ಯಾದವ್ ಮತ್ತು ರಂಜನಾ ಬಘೇಲ್ ಅವರನ್ನು ಅಮಿತ್ ಶಶ ಭೇಟಿ ಮಾಡಿದ್ದಾರೆ. ಬುರ್ಹಾನ್‌ಪುರದಿಂದ ಸ್ವತಂತ್ರವಾಗಿ ನಾಮಪತ್ರ ಸಲ್ಲಿಸಿದ್ದ ಮಾಜಿ ಸಂಸದ ನಂದಕುಮಾರ್‌ ಚೌಹಾಣ್‌ ಅವರ ಪುತ್ರ ಹರ್ಷ್‌ ಚೌಹಾಣ್‌ ಅವರಿಗೂ ಕರೆ ಮಾಡಿದ್ದಾರೆ. ಆದರೆ ಹರ್ಷ್ ಚೌಹಾನ್ ಬುರ್ಹಾನ್‌ಪುರದಲ್ಲಿ ದೊಡ್ಡ ರ್ಯಾಲಿ ನಡೆಸಿ ನಾಮಪತ್ರ ಸಲ್ಲಿಸಿದ್ದಾರೆ. ಒಂದೋ ಗೆಲ್ಲುತ್ತೇವೆ, ಇಲ್ಲವೇ ಹುತಾತ್ಮರಾಗುತ್ತೇವೆ ಎಂದು ಹೇಳಿ ಬಿಜೆಪಿ ನಾಯರಿಗೆ ಸಡ್ಡು ಹೊಡೆದಿದ್ದಾರೆ.

ಮಧ್ಯಪ್ರದೇಶದಲ್ಲಿ ಹೆಚ್ಚುತ್ತಿರುವ ಬಂಡಾಯ ಶಮನ ಮಾಡಲು ನೆಚ್ಚಿನ ಭಂಟ ಭೂಪೇಂದ್ರ ಯಾದವ್ ಗೆ ಟಾಸ್ಕ್ ನೀಡಿದ್ದಾರೆ. ಮಂಗಳವಾರ ಇಂದೋರ್ ನ ಬ್ರಿಲಿಯಂಟ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿಭಾಗ ಮಟ್ಟದ ಸಭೆ ಕರೆಯಲಾಗಿದೆ. ರಾಜ್ಯ ಉಸ್ತುವಾರಿ ಭೂಪೇಂದ್ರ ಯಾದವ್ ಸಭೆ ನಡೆಸಲಿದ್ದಾರೆ. ಇಂದೋರ್ ವಿಭಾಗದ ಹತ್ತಕ್ಕೂ ಹೆಚ್ಚು ಕೋಪಗೊಂಡ ನಾಯಕರನ್ನು ಕರೆಸಲಾಗಿದೆ. ಅವರಲ್ಲಿ ಕೆಲವರು ನಾಮಪತ್ರವನ್ನೂ ಸಲ್ಲಿಸಿದ್ದಾರೆ. ಈಗ ಯಾದವ್ ಅವರೊಂದಿಗೆ ಒಂದೊಂದಾಗಿ ಚರ್ಚಿಸಿ ನಾಮಪತ್ರ ಹಿಂಪಡೆಯುವಂತೆ ಹೇಳುತ್ತಿದ್ದಾರೆ‌ . ಕೆಲವರು ನಾಮಪತ್ರ ವಾಪಾಸ್ ಪಡೆಯಲು ಒಪ್ಪಿದ್ರೆ ಇನ್ನು ಕೆಲವರು ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:  Chandrababu Naidu: ಆಂಧ್ರದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಗೆ ಮಧ್ಯಂತರ ಜಾಮೀನು ಮಂಜೂರು

ಇನ್ನು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಬುಧನಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ಕುಟುಂಬದ ಆಸ್ತಿ ಬಹಿರಂಗಪಡಿಸಿದ್ದಾರೆ. ಸಿಎಂ ಚೌಹಾಣ್ ಅವ್ರ ಪತ್ನಿ ಸಾಧನಾ ಸಿಂಗ್ ಶಿವರಾಜ್ ಸಿಂಗ್ ಚೌಹಾಣ್ ಅವರಿಗಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ. ಇಬ್ಬರಿಗೂ ಸುಮಾರು 68 ಲಕ್ಷ ಸಾಲವಿದೆ. ಇದರೊಂದಿಗೆ ಸಿಎಂ ಬಳಿ ರಿವಾಲ್ವರ್ ಇದ್ದು ಇದರ ಬೆಲೆ 5500 ರೂ. ಆಗಿದೆ‌. ಇವ್ಬರ ಬಳಿ ಎರಡು ಕೋಟಿಗೂ ಹೆಚ್ಚು ಮೌಲ್ಯದ ಚರ ಆಸ್ತಿ ಇದ್ದರೆ 7 ಕೋಟಿಗೂ ಹೆಚ್ಚು ಮೌಲ್ಯದ ಸ್ಥಿರಾಸ್ತಿ ಇದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us