Assembly Election Result 2023: ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್​ ಮುನ್ನಡೆ

ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಲಿದ್ದು, ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್​ ಆರಂಭಿಕ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯ 230 ಸ್ಥಾನಗಳಿಗೆ ಮತ ಎಣಿಕೆ 8 ಗಂಟೆಯಿಂದ 52 ಜಿಲ್ಲಾ ಕೇಂದ್ರಗಳಲ್ಲಿ ನಡೆಯುತ್ತಿದೆ. ಮೊದಲಿಗೆ ಅಂಚೆ ಮತಪತ್ರಗಳನ್ನು ಎಣಿಕೆ ಮಾಡಲಾಯಿತು, ನಂತರ ಮತಗಳ ಎಣಿಕೆಯು ಇವಿಎಂಗಳೊಂದಿಗೆ ಪ್ರಾರಂಭವಾಯಿತು. ಮತ ಎಣಿಕೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು 5,061 ಮತ ಎಣಿಕೆ ಟೇಬಲ್‌ಗಳನ್ನು ಅಳವಡಿಸಲಾಗಿದೆ.

Assembly Election Result 2023: ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್​ ಮುನ್ನಡೆ
ಮತ ಎಣಿಕೆImage Credit source: Hindustan Times
Follow us
ನಯನಾ ರಾಜೀವ್
|

Updated on:Dec 03, 2023 | 9:45 AM

ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಲಿದ್ದು, ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್​ ಆರಂಭಿಕ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯ 230 ಸ್ಥಾನಗಳಿಗೆ ಮತ ಎಣಿಕೆ 8 ಗಂಟೆಯಿಂದ 52 ಜಿಲ್ಲಾ ಕೇಂದ್ರಗಳಲ್ಲಿ ನಡೆಯುತ್ತಿದೆ. ಮೊದಲಿಗೆ ಅಂಚೆ ಮತಪತ್ರಗಳನ್ನು ಎಣಿಕೆ ಮಾಡಲಾಯಿತು, ನಂತರ ಮತಗಳ ಎಣಿಕೆಯು ಇವಿಎಂಗಳೊಂದಿಗೆ ಪ್ರಾರಂಭವಾಯಿತು. ಮತ ಎಣಿಕೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು 5,061 ಮತ ಎಣಿಕೆ ಟೇಬಲ್‌ಗಳನ್ನು ಅಳವಡಿಸಲಾಗಿದೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಮಾಜಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮಾ, ಪ್ರಹ್ಲಾದ್ ಸಿಂಗ್ ಪಟೇಲ್, ಫಗ್ಗನ್ ಸಿಂಗ್ ಕುಲಸ್ತೆ ಮತ್ತು ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ಕಮಲ್ ನಾಥ್ ಅವರಂತಹ ಅನೇಕ ಪ್ರಮುಖರು ಕಣದಲ್ಲಿದ್ದಾರೆ. 2018 ರಲ್ಲಿ, ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು ಆದರೆ ಮಾರ್ಚ್ 2020 ರಲ್ಲಿ ಸರ್ಕಾರ ಪತನವಾಯಿತು.

ತೆಲಂಗಾಣದಲ್ಲಿ ನವೆಂಬರ್ 30 ರಂದು 119 ಸ್ಥಾನಗಳಿಗೆ ಮತದಾನ ನಡೆಯಿತು. ಎಕ್ಸಿಟ್ ಪೋಲ್‌ಗಳು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಚುಕ್ಕಾಣಿ ಹಿಡಿದಿರುವ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಕೇವಲ 34-44 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ಸೂಚಿಸಿದ್ದು, ಕಾಂಗ್ರೆಸ್ 63 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ.

ಮತ್ತಷ್ಟು ಓದಿ: Rajasthan Election Result 2023: ರಾಜಸ್ಥಾನದಲ್ಲಿ ಸಚಿನ್ ಪೈಲಟ್​, ಅಶೋಕ್​ ಗೆಹ್ಲೋಟ್​, ವಸುಂಧರಾ ರಾಜೆಗೆ ಆರಂಭಿಕ ಮುನ್ನಡೆ

ತೆಲಂಗಾಣದಲ್ಲಿ ಒಟ್ಟು 119 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ. ತೆಲಂಗಾಣದಲ್ಲಿ ಬಿಜೆಪಿಯ ಪ್ರತಿಷ್ಠೆಗೆ ಧಕ್ಕೆಯಾಗಿದೆ. ಇತ್ತೀಚೆಗಿನ ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದ್ದರಿಂದ ಇದು ಕೂಡ ಮುಖ್ಯವಾಗಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಕೇವಲ ಒಂದು ಸ್ಥಾನ ಮಾತ್ರ ಸಿಕ್ಕಿತ್ತು. ಆದರೆ ಕಾಂಗ್ರೆಸ್ 19 ಸ್ಥಾನಗಳನ್ನು ಪಡೆದಿತ್ತು. ಅಸಾದುದ್ದೀನ್ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದ್-ಉಲ್ ಮುಸ್ಲಿಮೀನ್ ಪಕ್ಷ 7 ಸ್ಥಾನಗಳನ್ನು ಪಡೆದಿತ್ತು.

ಆಡಳಿತಾರೂಢ ಬಿಆರ್‌ಎಸ್ (ಆಗಿನ ಟಿಆರ್‌ಎಸ್) 88 ಸ್ಥಾನಗಳನ್ನು ಪಡೆದಿತ್ತು. ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಗಜ್ವೆಲ್ ಮತ್ತು ಕಾಮರೆಡ್ಡಿ ವಿಧಾನಸಭೆಯಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಕೂಡ ಇದೇ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇಂದು ಇವಿಎಂ ತೆರೆದ ತಕ್ಷಣ ಇಬ್ಬರೂ ಹಿರಿಯ ನಾಯಕರ ಭವಿಷ್ಯ ನಿರ್ಧಾರವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:25 am, Sun, 3 December 23