ಮಧ್ಯಪ್ರದೇಶ ಚುನಾವಣೆ: 57 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

Madhya Pradesh Polls: ಬಿಜೆಪಿ ಸೋಮವಾರ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಬುಧ್ನಿಯಿಂದ, ರಾಜ್ಯದ ಗೃಹ ಸಚಿವ ನರೋತ್ತಮ್ ಮಿಶ್ರಾ ಡಾಟಿಯಾದಿಂದ, ಗೋಪಾಲ್ ಭಾರ್ಗವ ರೆಹ್ಲಿಯಿಂದ, ವಿಶ್ವಾಸ್ ಸಾರಂಗ್ ನರೇಲಾದಿಂದ ಮತ್ತು ತುಳಸಿರಾಮ್ ಸಿಲಾವತ್ ಸಾನ್ವೆರ್‌ನಿಂದ ಸ್ಪರ್ಧಿಸಲಿದ್ದಾರೆ.

ಮಧ್ಯಪ್ರದೇಶ ಚುನಾವಣೆ: 57 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ಶಿವರಾಜ್ ಸಿಂಗ್ ಚೌಹಾಣ್
Follow us
ರಶ್ಮಿ ಕಲ್ಲಕಟ್ಟ
|

Updated on:Oct 09, 2023 | 5:35 PM

ಭೋಪಾಲ್ ಅಕ್ಟೋಬರ್ 09 : ಮುಂಬರುವ ಮಧ್ಯಪ್ರದೇಶ (Madhya Pradesh Polls) ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ 57 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ (BJP) ಸೋಮವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಬುಧ್ನಿಯಿಂದ, ರಾಜ್ಯದ ಗೃಹ ಸಚಿವ ನರೋತ್ತಮ್ ಮಿಶ್ರಾ ಡಾಟಿಯಾದಿಂದ, ಗೋಪಾಲ್ ಭಾರ್ಗವ ರೆಹ್ಲಿಯಿಂದ, ವಿಶ್ವಾಸ್ ಸಾರಂಗ್ ನರೇಲಾದಿಂದ ಮತ್ತು ತುಳಸಿರಾಮ್ ಸಿಲಾವತ್ ಸಾನ್ವೆರ್‌ನಿಂದ ಸ್ಪರ್ಧಿಸಲಿದ್ದಾರೆ.

230 ಸದಸ್ಯರಿರುವ ಮಧ್ಯಪ್ರದೇಶ ವಿಧಾನಸಭೆಗೆ ನವೆಂಬರ್ 17 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 3 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಇಂದು ಭಾರತೀಯ ಚುನಾವಣಾ ಆಯೋಗ ಹೇಳಿದೆ.

ಇದನ್ನೂ ಓದಿ: Chhattisgarh polls: 64 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ, ರಾಜನಂದಗಾಂವ್‌ನಿಂದ ರಮಣ್ ಸಿಂಗ್ ಮತ್ತೆ ಸ್ಪರ್ಧೆ

ಆಗಸ್ಟ್ 17 ರಂದು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಸುಮಾರು 39 ಅಭ್ಯರ್ಥಿಗಳ ಹೆಸರುಗಳಿವೆ.

ಎರಡನೇ ಪಟ್ಟಿಯನ್ನು ಸೆಪ್ಟೆಂಬರ್ 25 ರಂದು ಬಿಡುಗಡೆ ಮಾಡಲಾಯಿತು. ಈ ಪಟ್ಟಿಯಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರಾಜ್ಯ ಸಚಿವ (MoS) ಆಹಾರ ಸಂಸ್ಕರಣಾ ಕೈಗಾರಿಕೆಗಳ (MoS) ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಉಕ್ಕು ರಾಜ್ಯ ಸಚಿವ ಫಗ್ಗನ್ ಸಿಂಗ್ ಕುಲತ್ಸೆ ಮತ್ತು ನಾಲ್ಕು ಲೋಕಸಭಾ ಸಂಸದರಿಗೆ ಟಿಕೆಟ್ ನೀಡಲಾಗಿದೆ. ಮರುದಿನವೇ  ಎಸ್ಟಿಗಳಿಗೆ ಮೀಸಲಾದ ಸ್ಥಾನವಾದ ಅಮರವಾರದಿಂದ ಮೋನಿಕಾ ಬಟ್ಟಿ ಸ್ಪರ್ಧಿಸುತ್ತಾರೆ ಎಂದು ಪಕ್ಷ ಘೋಷಿಸಿತು. ಗೊಂಡ್ವಾನಾ ಗಣತಂತ್ರ ಪಕ್ಷವನ್ನು ತೊರೆದ ನಂತರ ಅವರು ಬಿಜೆಪಿ ಸೇರಿದ್ದರು. . ಚುನಾವಣೆ ನಡೆಯುತ್ತಿರುವ ಐದು ರಾಜ್ಯಗಳ ಪೈಕಿ ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿದೆ.

ಮುಂದಿನ ತಿಂಗಳು ಛತ್ತೀಸ್‌ಗಢ, ತೆಲಂಗಾಣ, ರಾಜಸ್ಥಾನ ಮತ್ತು ಮಿಜೋರಾಂನಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ನಾಲ್ಕನೇ ಪಟ್ಟಿಯಲ್ಲಿರುವ ಕೆಲವು ಪ್ರಮುಖ ಅಭ್ಯರ್ಥಿಗಳು

ಶಿವರಾಜ್ ಸಿಂಗ್ ಚೌಹಾಣ್ (ಬುಧ್ನಿ), ಡಾ ನರೋತ್ತಮ್ ಮಿಶ್ರಾ (ದಾಟಿಯಾ), ಡಾ ಅರವಿಂದ್ ಸಿಂಗ್ ಭದೌರಿಯಾ (ಅಟರ್) ಪ್ರದ್ಯುಮನ್ ಸಿಂಗ್ ತೋಮರ್ (ಗ್ವಾಲಿಯರ್), ಗೋವಿಂದ್ ಸಿಂಗ್ ರಜಪೂತ್ (ಸುರ್ಖಿ), ರಾಹುಲ್ ಸಿಂಗ್ ಲೋಧಿ (ಖರ್ಗಾಪುರ್), ರಾಜೇಂದ್ರ ಶುಕ್ಲಾ (ರೇವಾ), ಬಿಶೌಲಾಲ್ ಸಿಂಗ್ (ಅನುಪ್ಪುರ್), ವಿಶ್ವಾಸ್ ಸಾರಂಗ್ (ನರೇಲಾ),ಕೃಷ್ಣ ಗೌರ್ (ಗೋವಿಂದಪುರ) ತುಳಸಿರಾಮ್ ಸಿಲಾವತ್ (ಸಾನ್ವರ್), ಹರ್ದೀಪ್ ಸಿಂಗ್ ಡ್ಯಾಂಗ್ (ಸುವಾಸ್ರಾ).

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:16 pm, Mon, 9 October 23

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್