ಯಾರಾಗಲಿದ್ದಾರೆ ಮಧ್ಯಪ್ರದೇಶ ಸಿಎಂ? ಶಿವರಾಜ್ ಸಿಂಗ್ ಚೌಹಾಣ್​ಗೆ ಮತ್ತೆ ಮಣೆ ಹಾಕಿಲಿದೆಯಾ ಬಿಜೆಪಿ

|

Updated on: Dec 03, 2023 | 6:15 PM

ಶಿವರಾಜ್ ಸಿಂಗ್ ಚೌಹಾಣ್ ಬಿಜೆಪಿಯ ಅತ್ಯಂತ ಅನುಭವಿ ಮುಖ್ಯಮಂತ್ರಿ. ಶಿವರಾಜ್ ಸಿಂಗ್ ಚೌಹಾಣ್ 2005 ರಲ್ಲಿ ಮೊದಲ ಬಾರಿಗೆ ಮಧ್ಯಪ್ರದೇಶದ ಮುಖ್ಯಮಂತ್ರಿಯಾದರು. ಅಂದಿನ ಮುಖ್ಯಮಂತ್ರಿ ಬಾಬುಲಾಲ್ ಗೌರ್ ರಾಜೀನಾಮ ನೀಡಿದ ನಂತರ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು.

ಯಾರಾಗಲಿದ್ದಾರೆ ಮಧ್ಯಪ್ರದೇಶ ಸಿಎಂ? ಶಿವರಾಜ್ ಸಿಂಗ್ ಚೌಹಾಣ್​ಗೆ ಮತ್ತೆ ಮಣೆ ಹಾಕಿಲಿದೆಯಾ ಬಿಜೆಪಿ
ಶಿವರಾಜ್ ಸಿಂಗ್ ಚೌಹಾಣ್
Follow us on

ಭೋಪಾಲ್, ಡಿಸೆಂಬರ್ 3: ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ (Madhya Pradesh Assembly Election Result) ಬಹುತೇಕ ಅಂತಿಮಗೊಂಡಿದ್ದು, ಅಧಿಕಾರ ಉಳಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಆದರೆ ಈ ಬಾರಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಮುಂದಿಡದೇ ಬಿಜೆಪಿ (BJP) ಚುನಾವಣಾ ಪ್ರಚಾರ ನಡೆಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತಂತ್ರಗಾರಿಕೆಯೇ ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಮುಖ್ಯ ಕಾರಣ ಎನ್ನಲಾಗುತ್ತಿದೆ. ಆಡಳಿತ ವಿರೋಧಿ ಅಲೆ ತಡೆಯಲು ಹಲವು ಮಂದಿ ಕೇಂದ್ರ ಸಚಿವರು, ಸಂಸದರನ್ನೂ ಬಿಜೆಪಿ ಕಣಕ್ಕಿಳಿಸಿತ್ತು. ಹೀಗಿರುವಾಗ ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲವೂ ಹೆಚ್ಚಾಗಿದೆ. ಹಾಲಿ ಸಿಎಂ, ಅನುಭವಿ ರಾಜಕಾರಣಿ ಶಿವರಾಜ್ ಸಿಂಗ್ ಚೌಹಾಣ್, ಜ್ಯೋತಿರಾದಿತ್ಯ ಸಿಂಧಿಯಾ ಹೆಸರು ಮುಂಚೂಣಿಯಲ್ಲಿವೆ. ಆದರೆ, ಚೌಹಾಣ್​ಗೆ ಅವಕಾಶ ಸಿಗುವ ಸಾಧ್ಯತೆ ಕಡಿಮೆ ಎಂದೂ ಕೆಲವು ಮೂಲಗಳು ಹೇಳುತ್ತಿವೆ. ಒಂದು ವೇಳೆ ಹಾಗಾದಲ್ಲಿ, ಮಧ್ಯ ಪ್ರದೇಶದಲ್ಲಿ ಚೌಹಾಣ್ ರಾಜಕಾರಣ ಬಹುತೇಕ ತೆರೆಯ ಮರೆಗೆ ಸರಿಯುವ ಸಾಧ್ಯತೆಗಳೂ ಇವೆ.

ಶಿವರಾಜ್ ಸಿಂಗ್ ಚೌಹಾಣ್ ರಾಜಕೀಯ ಪಯಣ

ಶಿವರಾಜ್ ಸಿಂಗ್ ಚೌಹಾಣ್ ಅವರು ಹದಿಮೂರನೇ ವಯಸ್ಸಿನಲ್ಲಿಯೇ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಸೇರುವ ಮೂಲಕ ರಾಜಕೀಯದತ್ತ ಆಕರ್ಷಿತರಾದವರು. ಅವರು 10 ನೇ ತರಗತಿಯಲ್ಲಿದ್ದಾಗಲೇ ತಮ್ಮ ಜೀವನದ ಮೊದಲ ಚುನಾವಣೆಯಲ್ಲಿ (ವಿದ್ಯಾರ್ಥಿ ಚುನಾವಣೆ) ಸ್ಪರ್ಧಿಸಿದರು. 11ನೇ ತರಗತಿಯಲ್ಲಿ ಪ್ರಥಮ ಬಾರಿಗೆ ಚುನಾವಣೆಯಲ್ಲಿ ಗೆದ್ದು ವಿದ್ಯಾರ್ಥಿ ಸಂಘದ ಅಧ್ಯಕ್ಷರಾದರು. ಶಿವರಾಜ್ ಸಿಂಗ್ ಚೌಹಾಣ್ ಅವರು 1976-77ರಲ್ಲಿ ಆಗಿನ ಪ್ರಧಾನಿ ಇಂದಿರಾಗಾಂಧಿ ಅವರು ವಿಧಿಸಿದ ತುರ್ತು ಪರಿಸ್ಥಿತಿಯನ್ನು ಬಲವಾಗಿ ವಿರೋಧಿಸಿ ರಾಜಕೀಯದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡರು.

ಶಿವರಾಜ್ ಸಿಂಗ್ ಚೌಹಾಣ್ ಅವರು 1990 ರಲ್ಲಿ ಮೊದಲ ಬಾರಿಗೆ ಶಾಸಕರಾದರು ಮತ್ತು 1991 ರಲ್ಲಿ ಅವರು ವಿದಿಶಾ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಗೆದ್ದು ಮೊದಲ ಬಾರಿಗೆ ಸಂಸತ್ ಭವನವನ್ನು ಪ್ರವೇಶಿಸಿದರು.

ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ದೇಶದಲ್ಲಿ ಅನೇಕ ನಾಯಕರು ಗುರುತಿಸಿಕೊಂಡರು. ಅವರಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ಒಬ್ಬರು. ಶಿವರಾಜ್ ಸಿಂಗ್ ಚೌಹಾಣ್ ಅವರು ತುರ್ತು ಪರಿಸ್ಥಿತಿಯನ್ನು ಬಲವಾಗಿ ವಿರೋಧಿಸಿದ್ದರು, ಇದರಿಂದಾಗಿ ಅವರು 1976-77ರಲ್ಲಿ ಜೈಲು ಪಾಲಾಗಿದ್ದರು.

ಜೈಲಿನಿಂದ ಹೊರಬಂದ ನಂತರ ಅವರನ್ನು ಎಬಿವಿಪಿಯ ಸಂಚಾಲಕ, ಪ್ರಧಾನ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ಕಾರ್ಯಕಾರಿ ಸದಸ್ಯರನ್ನಾಗಿಯೂ ಮಾಡಲಾಯಿತು. 1988 ರಲ್ಲಿ ಅವರನ್ನು ಭಾರತೀಯ ಜನತಾ ಯುವ ಮೋರ್ಚಾದ ಅಧ್ಯಕ್ಷರನ್ನಾಗಿ ಮಾಡಲಾಯಿತು.

ಶಿವರಾಜ್ ಸಿಂಗ್ ಚೌಹಾಣ್ ಮೊದಲ ಬಾರಿಗೆ ವಿದಿಶಾ ಕ್ಷೇತ್ರದಿಂದ ಚುನಾವಣೆಯಲ್ಲಿ ಗದ್ದು ಸಂಸತ್ ಭವನ ತಲುಪಿದ್ದರು. ಇದಕ್ಕೆ ಕಾರಣ ಅಟಲ್ ಬಿಹಾರಿ ವಾಜಪೇಯಿ ಅವರ ರಾಜೀನಾಮೆ. ನಿಜವಾಗಿ ಏನಾಯಿತು ಎಂದರೆ 1991ರ ಲೋಕಸಭೆ ಚುನಾವಣೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ವಿದಿಶಾ ಮತ್ತು ಲಖನೌ 2 ಸ್ಥಾನಗಳಿಂದ ಸ್ಪರ್ಧಿಸಿದ್ದರು. ಅವರು ಚುನಾವಣೆಯಲ್ಲಿ ಈ ಎರಡೂ ಸ್ಥಾನಗಳನ್ನು ಗೆದ್ದರು. ನಂತರ ಅವರು ವಿದಿಶಾ ಸ್ಥಾನಕ್ಕೆ ರಾಜೀನಾಮೆ ನೀಡಿದರು, ಲಖನೌಗೆ ಆದ್ಯತೆ ನೀಡಿದರು. ಈ ಕಾರಣಕ್ಕಾಗಿ ಬಿಜೆಪಿಯು ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ವಿದಿಶಾದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮಾಡಿತು ಮತ್ತು ಶಿವರಾಜ್ ಸಿಂಗ್ ಚೌಹಾಣ್ 1991 ರಿಂದ 2005 ರವರೆಗೆ ವಿದಿಶಾದಿಂದ ಸಂಸದರಾಗಿದ್ದರು. ವಿದಿಶಾ ಕ್ಷೇತ್ರದಿಂದ ಗೆದ್ದು ಇದುವರೆಗೆ ಐದು ಬಾರಿ ಸಂಸತ್ತಿಗೆ ಹೋಗಿದ್ದಾರೆ. ಆ ಅವಧಿಯಲ್ಲಿ, ಅವರು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಸಲಹಾ ಸಮಿತಿ, ನಗರ ಮತ್ತು ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಸಲಹಾ ಸಮಿತಿ, ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಮಿತಿ, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಸಲಹಾ ಸಮಿತಿ, ಹಿಂದಿ ಸಲಹಾ ಸಮಿತಿ ಮತ್ತು ಕಾರ್ಮಿಕ ಮತ್ತು ಕಲ್ಯಾಣ ಸಮಿತಿಯಂತಹ ಪ್ರಮುಖ ಸಮಿತಿಗಳ ಸದಸ್ಯರಾಗಿ ನೇಮಕಗೊಂಡರು.

ಸಿಎಂ ಆಗಿ ಹಲವು ದಾಖಲೆ ಸೃಷ್ಟಿಸಿರುವ ಶಿವರಾಜ್ ಸಿಂಗ್ ಚೌಹಾಣ್

ಶಿವರಾಜ್ ಸಿಂಗ್ ಚೌಹಾಣ್ ಬಿಜೆಪಿಯ ಅತ್ಯಂತ ಅನುಭವಿ ಮುಖ್ಯಮಂತ್ರಿ. ಶಿವರಾಜ್ ಸಿಂಗ್ ಚೌಹಾಣ್ 2005 ರಲ್ಲಿ ಮೊದಲ ಬಾರಿಗೆ ಮಧ್ಯಪ್ರದೇಶದ ಮುಖ್ಯಮಂತ್ರಿಯಾದರು. ಅಂದಿನ ಮುಖ್ಯಮಂತ್ರಿ ಬಾಬುಲಾಲ್ ಗೌರ್ ರಾಜೀನಾಮ ನೀಡಿದ ನಂತರ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಶಿವರಾಜ್ ಸಿಂಗ್ ಚೌಹಾಣ್ ನಾಯಕತ್ವದಲ್ಲಿ ಬಿಜೆಪಿ 2008 ಮತ್ತು 2013 ರ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಗದ್ದಿತು, ನಂತರ ಅವರು ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಂಡರು.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಕಾರಣವಾದ ಐದು ಅಂಶಗಳು ಇಲ್ಲಿವೆ

2018 ರಲ್ಲಿ ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದು ಕಮಲ್ ನಾಥ್ ಅವರನ್ನು ಮಧ್ಯಪ್ರದೇಶದ ಹೊಸ ಮುಖ್ಯಮಂತ್ರಿಯನ್ನಾಗಿ ಮಾಡಿತು, ಆದರೆ ಆ ಸರ್ಕಾರವು ಎರಡು ವರ್ಷಗಳನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಅದರ ನಂತರ 2020 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿತು. ಶಿವರಾಜ್ ಸಿಂಗ್ ಚೌಹಾಣ್ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ನಾಲ್ಕನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ