AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಾಗಲಿದ್ದಾರೆ ಮಧ್ಯ ಪ್ರದೇಶ ಸಿಎಂ? ಶಿವರಾಜ್ ಸಿಂಗ್ ಚೌಹಾಣ್ ಭೇಟಿಯಾದ ಸಿಂಧಿಯಾ

Madhya Pradesh Election Result 2023: ಮಧ್ಯ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಆದರೆ, ಮುಂದಿನ ಮುಖ್ಯಮಂತ್ರಿ ಯಾರೆಂಬ ಬಗ್ಗೆ ಪಕ್ಷವು ಈ ವರೆಗೆ ಸುಳಿವು ಬಿಟ್ಟುಕೊಟ್ಟಿಲ್ಲ. ಪಕ್ಷವು ಭರ್ಜರಿ ಮುನ್ನಡೆ ಸಾಧಿಸಿರುವ ಬೆನ್ನಲ್ಲೇ ಜ್ಯೋತಿರಾದಿತ್ಯ ಸಿಂಧಿಯಾ ಅವರು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಯಾರಾಗಲಿದ್ದಾರೆ ಮಧ್ಯ ಪ್ರದೇಶ ಸಿಎಂ? ಶಿವರಾಜ್ ಸಿಂಗ್ ಚೌಹಾಣ್ ಭೇಟಿಯಾದ ಸಿಂಧಿಯಾ
ಜ್ಯೋತಿರಾದಿತ್ಯ ಸಿಂಧಿಯಾ & ಶಿವರಾಜ್ ಸಿಂಗ್ ಚೌಹಾಣ್
Ganapathi Sharma
|

Updated on:Dec 03, 2023 | 12:32 PM

Share

ಭೋಪಾಲ್, ಡಿಸೆಂಬರ್ 3: ಮಧ್ಯ ಪ್ರದೇಶದ ವಿಧಾನಸಭಾ ಚುನಾವಣೆ (Madhya Pradesh Assembly Election Results 2023) ಫಲಿತಾಂಶ ಇನ್ನೇನು ಕೆಲವೇ ಹೊತ್ತಿನಲ್ಲಿ ಪೂರ್ಣವಾಗಿ ಪ್ರಕಟವಾಗಲಿದ್ದು, ಆಡಳಿತಾರೂಢ ಬಿಜೆಪಿ (BJP) ಮತ್ತೆ ಅಧಿಕಾರಕ್ಕೇರುವುದು ಬಹುತೇಕ ದೃಢಪಟ್ಟಿದೆ. ರಾಜ್ಯದಾದ್ಯಂತ ಬಿಜೆಪಿ ಕಾರ್ಯಕರ್ತರು ಸಂಭ್ರಮದಲ್ಲಿದ್ದಾರೆ. ಫಲಿತಾಂಶದ ಜೊತೆ ಜೊತೆಗೇ ರಾಜಕೀಯ ಚಟುವಟಿಕೆಗಳು ಕೂಡ ಬಿರುಸುಗೊಂಡಿವೆ. ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ್ದಾರೆ. ಈ ಬಾರಿ ಬಿಜೆಪಿ ಮುಖ್ಯಮಂತ್ರಿ ಸ್ಥಾನಕ್ಕೆ ಯಾರ ಹೆಸರನ್ನೂ ಮುಂದಿಟ್ಟಿಲ್ಲ. ಫಲಿತಾಂಶದ ನಂತರವೇ ಸಿಎಂ ಆಯ್ಕೆ ಮಾಡಲಾಗವುದು ಎಂದು ಹೇಳಿತ್ತು. ಹೀಗಾಗಿ ಇದೀಗ ಊಹಾಪೋಹಗಳು ಪ್ರಾರಂಭವಾಗಿವೆ.

ಚುನಾವಣೆ ಬಿಜೆಪಿಗೆ ಕಷ್ಟಕರವಾಗಿ ಕಂಡುಬಂದಿದ್ದರಿಂದ ಕೈಲಾಸ್​ ವಿಜಯವರ್ಗಿಯರಿಂದ ಹಿಡಿದು ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ವರೆಗೆ ಪಕ್ಷವು ಹಿರಿಯ ಮುಖಂಡರನ್ನು ಕಣಕ್ಕಿಳಿಸಿತ್ತು. ಸಿಂಧಿಯಾ ಮತ್ತು ಶಿವರಾಜ್ ಅವರೇ ಹಲವು ಸಭೆಗಳನ್ನು ನಡೆಸಿದ್ದರು ಮತ್ತು ಪಿಎಂ ಮೋದಿ ಅವರು ನಿರಂತರವಾಗಿ ರಾಜ್ಯದಲ್ಲಿ ಸಮಾವೇಶಗಳಲ್ಲಿ ಭಾಗಿಯಾಗಿ ಮತಯಾಚಿಸಿದ್ದರು. ಇದೆಲ್ಲದರ ಪರಿಣಾಮ ಚುನಾವಣಾ ಫಲಿತಾಂಶದ ಮೇಲೆ ಉಂಟಾಗಿದ್ದು, ಬಿಜೆಪಿಗೆ ಪ್ರಯೋಜನವಾಗಿದೆ.

ಇದೀಗ ಸಿಂಧಿಯಾ ಅವರು ಚೌಹಾಣ್ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲವನ್ನು ಹೆಚ್ಚಿಸಿದೆ.

ಫಲಿತಾಂಶದ ಕ್ಷಣಕ್ಷಣದ ಅಪ್​ಡೇಟ್​ಗಳಿಗೆ ಓದಿ: Assembly Election Results 2023 LIVE: ತೆಲಂಗಾಣದಲ್ಲಿ ಮೊದಲ ಗೆಲುವು ದಾಖಲಿಸಿದ ಕಾಂಗ್ರೆಸ್

2018ರ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮಧ್ಯೆ ಜಿದ್ದಾಜಿದ್ದಿಯ ಪೈಪೋಟಿ ಏರ್ಪಟ್ಟು ಸರಳ ಬಹುಮತಕ್ಕೆ ಕೆಲವೇ ಸ್ಥಾನಗಳು ಕಾಂಗ್ರೆಸ್​ಗೆ ಕಡಿಮೆಯಾಗಿದ್ದವು. ನಂತರ ಪಕ್ಷೇತರರು ಹಾಗೂ ಇತರರ ಬೆಂಬಲದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆಯಾಗಿತ್ತು. ಆದರೆ, ಇದಾದ ಒಂದೂವರೆ ವರ್ಷದಲ್ಲೇ ಜ್ಯೋತಿರಾದಿತ್ಯ ಸಿಂಧಿಯಾ ಬಂಡಾಯವೆದ್ದು, ಬೆಂಬಲಿಗ ಶಾಸಕರೊಂದಿಗೆ ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಕಾಂಗ್ರೆಸ್ ಸರ್ಕಾರ ಪತನವಾಗಿತ್ತು. ನಂತರ ಬಿಜೆಪಿ ಸರ್ಕಾರ ರಚನೆಯಾಗಿ ಪುನಃ ಶಿವರಾಜ್ ಸಿಂಗ್ ಚೌಹಾಣ್ ಮುಖ್ಯಮಂತ್ರಿ ಆಗಿದ್ದರು.

ಈ ಬಾರಿ ಬಿಜೆಪಿಯು ಚುನಾವಣೆಗೂ ಮುನ್ನ ಸಿಎಂ ಅಭ್ಯರ್ಥಿಯನ್ನು ಘೋಷಿಸಿಲ್ಲ. ಸಿಎಂ ಹುದ್ದೆಯ ರೇಸ್​ನಲ್ಲಿ ಚೌಹಾಣ್, ಸಿಂಧಿಯಾ ಸೇರಿ ಹಲವರ ಹೆಸರು ಕೇಳಿಬರುತ್ತಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:27 pm, Sun, 3 December 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ