ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶಕ್ಕಾಗಿ ಬಿಜೆಪಿ ಆಯ್ಕೆ ಮಾಡಿ: ಮತದಾರರಲ್ಲಿ ಮೋದಿ ಮನವಿ

ಬಿಜೆಪಿಯಿಂದ ಮಾತ್ರ ಮಧ್ಯಪ್ರದೇಶವನ್ನು 21ನೇ ಶತಮಾನದ ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶವನ್ನಾಗಿ ಮಾಡಲು ಸಾಧ್ಯ ಎಂಬ ಅಚಲ ನಂಬಿಕೆಯನ್ನು ಜನರು ಹೊಂದಿದ್ದಾರೆ. ಮಧ್ಯಪ್ರದೇಶದ ಜನರು ಡಬಲ್ ಎಂಜಿನ್ ಸರ್ಕಾರದ ಪ್ರಯೋಜನಗಳನ್ನು ನೋಡುತ್ತಿದ್ದಾರೆ ಮತ್ತು ಅದರ ಅಗತ್ಯವನ್ನು ಸಹ ಅರ್ಥಮಾಡಿಕೊಳ್ಳುತ್ತಿದ್ದಾರೆ.

ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶಕ್ಕಾಗಿ ಬಿಜೆಪಿ ಆಯ್ಕೆ ಮಾಡಿ: ಮತದಾರರಲ್ಲಿ ಮೋದಿ ಮನವಿ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on: Nov 15, 2023 | 2:27 PM

ದೆಹಲಿ ನವೆಂಬರ್ 15: ಈ ಬಾರಿಯ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ(Madhya Pradesh Election) ಪ್ರಚಾರ, ಬದಲಿಗೆ ಸಾರ್ವಜನಿಕರಿಂದ ಆಶೀರ್ವಾದ ಪಡೆಯುವ ಅಭಿಯಾನ ಬಹಳ ವಿಶೇಷವಾಗಿತ್ತು. ರಾಜ್ಯದ ಮೂಲೆ ಮೂಲೆಗೂ ಹೋಗಿ ಹಲವು ಜನರನ್ನು ಭೇಟಿ ಮಾಡಿ ಸಂವಾದ ನಡೆಸಿದ್ದೇನೆ. ಬಿಜೆಪಿ ಮೇಲೆ ಜನರಿಗೆ ಇರುವ ಪ್ರೀತಿ, ಬಿಜೆಪಿ (BJP) ಮೇಲೆ ಇಟ್ಟಿರುವ ನಂಬಿಕೆಯೇ ನಮ್ಮ ದೊಡ್ಡ ಆಸ್ತಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಚುನಾವಣೆಯಲ್ಲಿ ಮಧ್ಯಪ್ರದೇಶದ ಮಹಿಳಾ ಶಕ್ತಿಯೇ ಮುಂದೆ ಬಂದು ಬಿಜೆಪಿಯ ಬಾವುಟ ಹಾರಿಸುತ್ತಿದೆ. ಮಹಿಳಾ ಸಬಲೀಕರಣವು ಬಿಜೆಪಿಯ ಆದ್ಯತೆಯಂತೆಯೇ, ಅದೇ ರೀತಿ ಮಹಿಳೆಯರು ಬಿಜೆಪಿ ಸರ್ಕಾರವನ್ನು ತಮ್ಮ ಆದ್ಯತೆಯನ್ನಾಗಿ ಮಾಡಿದ್ದಾರೆ. ಇಂದಿನ ಹೊಸ ಪೀಳಿಗೆಯು ಭಾರತದ ಮುಂದಿನ 25 ವರ್ಷಗಳನ್ನು ಮತ್ತು ತಮ್ಮದೇ ಆದ 25 ವರ್ಷಗಳನ್ನು ಒಟ್ಟಿಗೆ ನೋಡುತ್ತಿದೆ. ಅದಕ್ಕಾಗಿಯೇ ನಮ್ಮ ಯುವಕರು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿಯನ್ನು ಪೂರೈಸಲು ಹೆಗಲಿಗೆ ಹೆಗಲು ಕೊಟ್ಟು ಮುಂದೆ ಬರುತ್ತಿದ್ದಾರೆ.

ಬಿಜೆಪಿಯಿಂದ ಮಾತ್ರ ಮಧ್ಯಪ್ರದೇಶವನ್ನು 21ನೇ ಶತಮಾನದ ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶವನ್ನಾಗಿ ಮಾಡಲು ಸಾಧ್ಯ ಎಂಬ ಅಚಲ ನಂಬಿಕೆಯನ್ನು ಜನರು ಹೊಂದಿದ್ದಾರೆ. ಮಧ್ಯಪ್ರದೇಶದ ಜನರು ಡಬಲ್ ಎಂಜಿನ್ ಸರ್ಕಾರದ ಪ್ರಯೋಜನಗಳನ್ನು ನೋಡುತ್ತಿದ್ದಾರೆ ಮತ್ತು ಅದರ ಅಗತ್ಯವನ್ನು ಸಹ ಅರ್ಥಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Tribal Pride Day: ಬಿರ್ಸಾ ಮುಂಡಾ ಜನ್ಮದಿನ, ಬುಡಕಟ್ಟು ಜನಾಂಗದ ಐಕಾನ್​​ನ ಪ್ರತಿಮೆಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ಕಾಂಗ್ರೆಸ್‌ನ ವಂಶಾಡಳಿತ ರಾಜಕಾರಣ ಮತ್ತು ನಕಾರಾತ್ಮಕತೆಯ ಬಗ್ಗೆ ಮಧ್ಯಪ್ರದೇಶದವರು ಎಷ್ಟು ಕೋಪಗೊಂಡಿದ್ದಾರೆ ಎಂಬುದನ್ನು ನಾನು ರ‍್ಯಾಲಿಗಳಲ್ಲಿ ನೋಡಿದ್ದೇನೆ. ಮಧ್ಯಪ್ರದೇಶದ ಅಭಿವೃದ್ಧಿಗೆ ಕಾಂಗ್ರೆಸ್‌ಗೆ ದೂರದೃಷ್ಟಿ, ಮಾರ್ಗಸೂಚಿ ಇಲ್ಲ. ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶಕ್ಕಾಗಿ ಬಿಜೆಪಿಯನ್ನು ಆಯ್ಕೆ ಮಾಡಿ, ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಕಮಲವನ್ನು ಆಯ್ಕೆ ಮಾಡಿ ಎಂದು ಮಧ್ಯಪ್ರದೇಶದ ಎಲ್ಲಾ ಮತದಾರರನ್ನು ನಾನು ಕೇಳುತ್ತೇನೆ ಎಂದು ಮೋದಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ