ಇನ್ನು ಆರು ದಿನ ಉಳಿದಿದೆ, ಯಾರನ್ನೂ ಬಿಡುವುದಿಲ್ಲ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಕಮಲ್ ನಾಥ್

ನಾನು ಇದನ್ನು ಪೃಥ್ವಿಪುರ ಮತ್ತು ನಿವಾರಿ ಆಡಳಿತಕ್ಕೆ ಹೇಳಲು ಬಯಸುತ್ತೇನೆ, ನೀವು ಏನು ಮಾಡುತ್ತಿದ್ದೀರಿ, ಅದನ್ನು ಎಚ್ಚರಿಕೆಯಿಂದ ಆಲಿಸಿ, ನಾಳೆಯ ದಿನ, ನೀವು ಮತ್ತು ನಾನು ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಯಾರನ್ನೂ ಸುಮ್ಮನೆ ಬಿಡುವುದಿಲ್ಲ, ಇನ್ನೂ ಆರು ದಿನಗಳು ಉಳಿದಿವೆ. ಜೋ ಕರ್ನಾ ಹೈ ಕರ್ ಲೇ.. ಪರ್ ಆಗೇ ಪಾಂಚ್ ಸಾಲ್ ಭಿ ಕಾಟ್ನಾ ಹೈ ಆಪ್ಕೋ (ನಿಮಗೆ ಏನು ಬೇಕೋ ಅದನ್ನು ಮಾಡಿ, ಆದರೆ ಮುಂದಿನ ಐದು ವರ್ಷಗಳನ್ನು ಸಹ ನೀವು ಕಳೆಯಬೇಕು) ಎಂದು ಅವರು ಹೇಳಿದರು.

ಇನ್ನು ಆರು ದಿನ ಉಳಿದಿದೆ, ಯಾರನ್ನೂ ಬಿಡುವುದಿಲ್ಲ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಕಮಲ್ ನಾಥ್
ಕಮಲ್ ನಾಥ್
Follow us
ರಶ್ಮಿ ಕಲ್ಲಕಟ್ಟ
|

Updated on:Nov 11, 2023 | 2:46 PM

ಭೋಪಾಲ್ ನವೆಂಬರ್ 11: ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ (Congress) ಹಿರಿಯ ನಾಯಕ ಕಮಲ್ ನಾಥ್ (Kamal Nath) ಅವರು ನಿವಾರಿ ಜಿಲ್ಲಾಡಳಿತಕ್ಕೆ (Niwari district administration)ಕಠಿಣ ಎಚ್ಚರಿಕೆ ನೀಡಿದ್ದು, ಮುಂದಿನ ಐದು ವರ್ಷಗಳ ಬಗ್ಗೆ ಯೋಚಿಸುವಾಗ ಕ್ರಮ ಎದುರಿಸುವುದಕ್ಕೂ  ಸಿದ್ಧರಾಗಿ ಎಂದು ಹೇಳಿದ್ದಾರೆ. ನಿವಾರಿಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕಮಲ್ ನಾಥ್, ಆರೋಪಗಳನ್ನು ವಿವರಿಸದೇ, ಯಾರೊಬ್ಬರನ್ನೂ ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ನಾನು ಇದನ್ನು ಪೃಥ್ವಿಪುರ ಮತ್ತು ನಿವಾರಿ ಆಡಳಿತಕ್ಕೆ ಹೇಳಲು ಬಯಸುತ್ತೇನೆ, ನೀವು ಏನು ಮಾಡುತ್ತಿದ್ದೀರಿ, ಅದನ್ನು ಎಚ್ಚರಿಕೆಯಿಂದ ಆಲಿಸಿ, ನಾಳೆಯ ದಿನ, ನೀವು ಮತ್ತು ನಾನು ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಯಾರನ್ನೂ ಸುಮ್ಮನೆ ಬಿಡುವುದಿಲ್ಲ, ಇನ್ನೂ ಆರು ದಿನಗಳು ಉಳಿದಿವೆ. ಜೋ ಕರ್ನಾ ಹೈ ಕರ್ ಲೇ.. ಪರ್ ಆಗೇ ಪಾಂಚ್ ಸಾಲ್ ಭಿ ಕಾಟ್ನಾ ಹೈ ಆಪ್ಕೋ (ನಿಮಗೆ ಏನು ಬೇಕೋ ಅದನ್ನು ಮಾಡಿ, ಆದರೆ ಮುಂದಿನ ಐದು ವರ್ಷಗಳನ್ನು ಸಹ ನೀವು ಕಳೆಯಬೇಕು) ಎಂದು ಅವರು ಹೇಳಿದರು.

ಸ್ಥಳೀಯ ಆಡಳಿತಕ್ಕೆ ಕಾಂಗ್ರೆಸ್ ನಾಯಕ ಬೆದರಿಕೆ ಹಾಕಿರುವುದು ಇದೇ ಮೊದಲಲ್ಲ. ಜನವರಿಯಲ್ಲಿ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ನಿವಾರಿ ಜಿಲ್ಲೆಯ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದು, ಎಂಟು ತಿಂಗಳಲ್ಲಿ ಅವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಹೇಳಿದ್ದರು. ಪೊಲೀಸರು ಮಿತಿಮೀರಿದ ಮತ್ತು ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಕಮಲ್ ನಾಥ್ ಆರೋಪಿಸಿದ್ದರು.

2018 ರಲ್ಲಿ ನಡೆದ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತು, ಕಮಲ್ ನಾಥ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಆದಾಗ್ಯೂ, 2020 ರಲ್ಲಿ 22 ಶಾಸಕರೊಂದಿಗೆ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿಗೆ ಬದಲಾದ ನಂತರ ರಾಜಕೀಯ ಕ್ರಾಂತಿಯು ರಾಜ್ಯವನ್ನು ಅಲುಗಾಡಿಸಿತು. ತನ್ನ ಕೊನೆಯ ಸರ್ಕಾರದ ಪತನವನ್ನು ತಡೆಯಲು ವಿಫಲವಾದ ನಂತರ ಅವರು ಮಧ್ಯಪ್ರದೇಶದಲ್ಲಿ ಚುಕ್ಕಾಣಿ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: ಬಿವೈ ವಿಜಯೇಂದ್ರ ಕರ್ನಾಟಕ ಬಿಜೆಪಿ ಅಧ್ಯಕ್ಷ; ಇದು ಸ್ವಜನಪಕ್ಷಪಾತ ಎಂದ ಸುರ್ಜೇವಾಲಾ

ನವೆಂಬರ್ 17 ರಂದು ಒಂದೇ ಹಂತದಲ್ಲಿ ಚುನಾವಣೆಗೆ ಒಳಪಡುವ ಐದು ರಾಜ್ಯಗಳಲ್ಲಿ ಮಧ್ಯಪ್ರದೇಶವೂ ಒಂದಾಗಿದೆ ಮತ್ತು ಮತಗಳ ಎಣಿಕೆ ಡಿಸೆಂಬರ್ 3 ರಂದು ನಡೆಯಲಿದೆ. ಮತದಾರರು 230 ವಿಧಾನಸಭಾ ಕ್ಷೇತ್ರಗಳಿಂದ ಶಾಸಕರನ್ನು ಆಯ್ಕೆ ಮಾಡುತ್ತಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Sat, 11 November 23

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ