Maharashtra Elections: ಮಹಾರಾಷ್ಟ್ರದಲ್ಲಿ 3 ಲಕ್ಷ ರೂ. ಕೃಷಿ ಸಾಲ ಮನ್ನಾ, ಉಚಿತ ಬಸ್ ಪ್ರಯಾಣ; ಎಂವಿಎ ಗ್ಯಾರಂಟಿ ಘೋಷಣೆ
ಕೃಷಿ ಸಮೃದ್ಧಿ ಯೋಜನೆಯಡಿ ರೈತರು ಬೆಳೆ ಸಾಲಗಳ ನಿಯಮಿತ ಮರುಪಾವತಿಗೆ ಪ್ರೋತ್ಸಾಹಕವಾಗಿ 3 ಲಕ್ಷ ರೂ. ಮತ್ತು 50,000 ರೂ.ವರೆಗಿನ ಸಾಲವನ್ನು ಮನ್ನಾ ಮಾಡುತ್ತಾರೆ ಎಂದು ಶಿವಸೇನೆ (ಯುಬಿಟಿ)-ಎನ್‌ಸಿಪಿ (ಎಸ್‌ಪಿ)-ಕಾಂಗ್ರೆಸ್ ಮೈತ್ರಿಯ ಇಂದು ಘೋಷಣೆ ಮಾಡಿದೆ.
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮುನ್ನ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಇಂದು ಚುನಾವಣಾ ಗ್ಯಾರಂಟಿಯನ್ನು ಬಿಡುಗಡೆ ಮಾಡಿತು. ಮಹಾರಾಷ್ಟ್ರ ರಾಜ್ಯದ ಮಹಿಳೆಯರಿಗೆ ತಿಂಗಳಿಗೆ 3,000 ರೂ. ಮತ್ತು ರಾಜ್ಯ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ಭರವಸೆ ನೀಡಿದೆ. ಹಾಗೇ, 3 ಲಕ್ಷ ರೂ. ಕೃಷಿ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದೆ. ನವೆಂಬರ್ 20ಕ್ಕೆ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ಮಹಾ ವಿಕಾಸ್ ಅಘಾಡಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ಮಹಾರಾಷ್ಟ್ರದಲ್ಲಿ ಕೃಷಿ ಸಮೃದ್ಧಿ ಯೋಜನೆಯಡಿಯಲ್ಲಿ 3 ಲಕ್ಷದವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ಚುನಾವಣಾ ಭರವಸೆಯಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.
ಇದನ್ನೂ ಓದಿ: ‘ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ’; ಮಹಾರಾಷ್ಟ್ರ ಚುನಾವಣೆಗೂ ಮುನ್ನ ಶರದ್ ಪವಾರ್ ಮಹತ್ವದ ಘೋಷಣೆ
ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಎಂವಿಎ ಸರ್ಕಾರವು ರಾಜ್ಯದ ಪ್ರತಿ ನಿರುದ್ಯೋಗಿ ಯುವಕರಿಗೆ ಮಾಸಿಕ 4,000 ರೂಪಾಯಿಗಳನ್ನು ನೀಡಲಿದೆ ಎಂದು ಚುನಾವಣಾ ಗ್ಯಾರಂಟಿ ಬಿಡುಗಡೆಯ ಸಂದರ್ಭದಲ್ಲಿ ಉದ್ಧವ್ ಠಾಕ್ರೆ ಹೇಳಿದರು.
ಕೃಷಿ ಸಮೃದ್ಧಿ ಯೋಜನೆಯಡಿ, ರೈತರು ಬೆಳೆ ಸಾಲಗಳ ನಿಯಮಿತ ಮರುಪಾವತಿಗೆ ಪ್ರೋತ್ಸಾಹಕವಾಗಿ 3 ಲಕ್ಷ ರೂ. ಮತ್ತು ರೂ 50,000 ವರೆಗಿನ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ಶಿವಸೇನೆ (ಯುಬಿಟಿ)-ಎನ್‌ಸಿಪಿ (ಎಸ್‌ಪಿ)-ಕಾಂಗ್ರೆಸ್ ಮೈತ್ರಿಯು ಘೋಷಿಸಿತು. ನಿರುದ್ಯೋಗಿ ಯುವಕರಿಗೆ ಮಾಸಿಕ 4,000 ರೂ. ಭತ್ಯೆ, 25 ಲಕ್ಷ ರೂ.ವರೆಗಿನ ಆರೋಗ್ಯ ವಿಮೆ ಮತ್ತು ಉಚಿತ ಔಷಧಿಗಳ ಭರವಸೆ ನೀಡಲಾಗಿದೆ.
ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ: 40 ಬಂಡಾಯ ನಾಯಕರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ
ಸದ್ಯಕ್ಕೆ ಮಹಾರಾಷ್ಟ್ರದ ಬಿಜೆಪಿ-ಶಿವಸೇನೆ-ಎನ್‌ಸಿಪಿ ಸರ್ಕಾರವು ಪ್ರಸ್ತುತ ತನ್ನ ಪ್ರಮುಖ ಲಡ್ಕಿ ಬಹಿನ್ ಯೋಜನೆಯಡಿ ಅರ್ಹ ಮಹಿಳೆಯರಿಗೆ ಮಾಸಿಕ 1,500 ರೂಪಾಯಿಗಳನ್ನು ಪಾವತಿಸುತ್ತಿದೆ. ಒಂದುವೇಳೆ ಮುಂದಿನ ಅವಧಿಗೂ ಅಧಿಕಾರಕ್ಕೆ ಬಂದರೆ ಆ ಮೊತ್ತವನ್ನು 2,100 ರೂಪಾಯಿಗಳಿಗೆ ಹೆಚ್ಚಿಸುವುದಾಗಿ ಭರವಸೆ ನೀಡಿದೆ. ಈ ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಜಾತಿ ಗಣತಿಯನ್ನು ನಡೆಸುವುದಾಗಿ ಭರವಸೆ ನೀಡಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ