5 ರಾಜ್ಯಗಳಲ್ಲಿ ಮತ ಎಣಿಕೆ ಮೇಲ್ವಿಚಾರಣೆ ಮಾಡಲು ಉಸ್ತುವಾರಿ, ವೀಕ್ಷಕರಿಗೆ ಮಲ್ಲಿಕಾರ್ಜುನ ಖರ್ಗೆ ನಿರ್ದೇಶನ

Mallikarjun Kharge: ಮತಗಟ್ಟೆ ಸಮೀಕ್ಷೆಗಳ ಪ್ರಕಾರ ಬಿಜೆಪಿ ಮಧ್ಯಪ್ರದೇಶದಲ್ಲಿ 47 ಶೇಕಡಾ ಮತ ಹಂಚಿಕೆ ಮತ್ತು 140-162 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರವನ್ನು ಉಳಿಸಿಕೊಳ್ಳುತ್ತದೆ. 41 ರಷ್ಟು ಮತ ಹಂಚಿಕೆಯೊಂದಿಗೆ ಕಾಂಗ್ರೆಸ್ 60-90 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ಅದು ಹೇಳಿದೆ. ಇತರರು ಶೇಕಡಾ 12 ಮತಗಳನ್ನು ಮತ್ತು 0-3 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ.

5 ರಾಜ್ಯಗಳಲ್ಲಿ ಮತ ಎಣಿಕೆ ಮೇಲ್ವಿಚಾರಣೆ ಮಾಡಲು ಉಸ್ತುವಾರಿ, ವೀಕ್ಷಕರಿಗೆ ಮಲ್ಲಿಕಾರ್ಜುನ ಖರ್ಗೆ ನಿರ್ದೇಶನ
ಮಲ್ಲಿಕಾರ್ಜುನ ಖರ್ಗೆ
Follow us
|

Updated on: Dec 02, 2023 | 3:08 PM

ದೆಹಲಿ ನವೆಂಬರ್ 02: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುವ ಮುನ್ನ, ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಶುಕ್ರವಾರ ಎಲ್ಲ ಐವರು ಉಸ್ತುವಾರಿಗಳು ಮತ್ತು ಚುನಾವಣಾ ರಾಜ್ಯಗಳ ವೀಕ್ಷಕರಿಗೆ ಮತ ಎಣಿಕೆ ಮೇಲೆ ನಿಗಾ ಇಡುವಂತೆ ಸೂಚಿಸಿದ್ದಾರೆ. ತೆಲಂಗಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ ಒಂದು ದಿನ ಮುಂಚಿತವಾಗಿ, ಕರ್ನಾಟಕ ಉಪಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ (DK ShivaKumar) ಅವರು ಶನಿವಾರ ಹೈದರಾಬಾದ್‌ಗೆ ಆಗಮಿಸುವ ನಿರೀಕ್ಷೆಯಿದೆ. ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲಾ ಅವರು ಮಧ್ಯಪ್ರದೇಶದ ಭೋಪಾಲ್‌ನಲ್ಲಿದ್ದಾರೆ.

ಎಕ್ಸಿಟ್ ಪೋಲ್ ಭವಿಷ್ಯವಾಣಿಗಳ ಪ್ರಕಾರ, ಬಿಜೆಪಿ ಮಧ್ಯಪ್ರದೇಶದಲ್ಲಿ 47 ಶೇಕಡಾ ಮತ ಹಂಚಿಕೆ ಮತ್ತು 140-162 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರವನ್ನು ಉಳಿಸಿಕೊಳ್ಳುತ್ತದೆ. 41 ರಷ್ಟು ಮತ ಹಂಚಿಕೆಯೊಂದಿಗೆ ಕಾಂಗ್ರೆಸ್ 60-90 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ಅದು ಹೇಳಿದೆ. ಇತರರು ಶೇಕಡಾ 12 ಮತಗಳನ್ನು ಮತ್ತು 0-3 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ.

ಛತ್ತೀಸ್‌ಗಢದಲ್ಲಿ ಮೂರು ಎಕ್ಸಿಟ್ ಪೋಲ್‌ಗಳು ಕಾಂಗ್ರೆಸ್‌ಗೆ ಸ್ಪಷ್ಟವಾದ ಜಯವನ್ನು ಭವಿಷ್ಯ ನುಡಿದಿವೆ. ಇತರ ಮತಗಟ್ಟೆ ಸಮೀಕ್ಷೆಗಳು ಕಾಂಗ್ರೆಸ ಪಕ್ಷವು ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಿವೆ.

ಏತನ್ಮಧ್ಯೆ, ತೆಲಂಗಾಣದಲ್ಲಿ ಗುರುವಾರ ನಡೆದ ಎಕ್ಸಿಟ್ ಪೋಲ್‌ಗಳು ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು ಸಿದ್ಧವಾಗಿದೆ. ಭಾರತದ ಅತ್ಯಂತ ಕಿರಿಯ ರಾಜ್ಯದಲ್ಲಿ 10 ವರ್ಷಗಳ ಆಡಳಿತದ ನಂತರ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಬಹುಮತದಿಂದ ಕಡಿಮೆ ಸ್ಥಾನಗಳಿಸಲಿದೆ ಎಂದು ಭವಿಷ್ಯ ನುಡಿದಿದೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ಗೆ ಅಧಿಕಾರ ಕೈ ತಪ್ಪಲಿದ್ದು, ಬಿಜೆಪಿ ಅಧಿಕಾರಕ್ಕೇರುವ ಸಾಧ್ಯತೆ ಇದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆಯನ್ನು ಡಿಸೆಂಬರ್ 4ಕ್ಕೆ ಮರು ನಿಗದಿಪಡಿಸಲಾಗಿದೆ ಎಂದು ಚುನಾವಣಾ ಆಯೋಗ ಶುಕ್ರವಾರ ಪ್ರಕಟಿಸಿದೆ. ಮಿಜೋರಾಂ ಚುನಾವಣೆಯ ಮತ ಎಣಿಕೆ ಡಿಸೆಂಬರ್ 3 ರಂದು ನಡೆಯಬೇಕಿತ್ತು.

ಇದನ್ನೂ ಓದಿ: Assembly Election Result 2023:ನಾಳೆ 4 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ, ಕ್ಷಣ ಕ್ಷಣದ ಮಾಹಿತಿಗಾಗಿ ಟಿವಿ9 ಫಾಲೋ ಮಾಡಿ

ಮತ ಎಣಿಕೆ ದಿನವನ್ನು ಬದಲಾಯಿಸುವಂತೆ ರಾಜ್ಯದ ವಿವಿಧೆಡೆಯಿಂದ ಹಲವಾರು ಪ್ರಾತಿನಿಧ್ಯಗಳು ಬಂದಿದ್ದರಿಂದ ದಿನಾಂಕವನ್ನು ಪರಿಷ್ಕರಿಸಲಾಗಿದೆ ಎಂದು ಚುನಾವಣಾ ಸಂಸ್ಥೆ ತಿಳಿಸಿದೆ.

40 ಸದಸ್ಯ ಬಲದ ಮಿಜೋರಾಂ ವಿಧಾನಸಭೆಗೆ ನವೆಂಬರ್ 7 ರಂದು ನಡೆದ ಚುನಾವಣೆಯಲ್ಲಿ, ಮಿಜೋ ನ್ಯಾಷನಲ್ ಫ್ರಂಟ್ (MNF) ಜೋರಾಮ್ ಪೀಪಲ್ಸ್ ಮೂವ್ಮೆಂಟ್ (ZPM), ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಸವಾಲನ್ನು ಎದುರಿಸಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ