ಮಣಿಪುರ ವಿಧಾನಸಭೆ ಚುನಾವಣೆ; 40 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್​

ಮಣಿಪುರದಲ್ಲಿ ಒಟ್ಟು 60 ವಿಧಾನಸಭಾ ಕ್ಷೇತ್ರಗಳಿದ್ದು, ಫೆಬ್ರವರಿ 27 ಮತ್ತು ಮಾರ್ಚ್​ 3ರಂದು ಮತದಾನ ನಡೆಯಲಿದೆ. ಹಾಗೇ, ಮಾರ್ಚ್ 3ರಂದು ಮತಎಣಿಕೆ ಇದೆ. 2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 28 ಕ್ಷೇತ್ರಗಳನ್ನು ಗೆದ್ದುಕೊಂಡು, ಸಂಪೂರ್ಣ ಬಹುಮತಪಡೆದ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.

ಮಣಿಪುರ ವಿಧಾನಸಭೆ ಚುನಾವಣೆ; 40 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್​
ಕಾಂಗ್ರೆಸ್​ ಬಾವುಟ
Follow us
| Updated By: Lakshmi Hegde

Updated on: Jan 22, 2022 | 8:38 PM

ಮಣಿಪುರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. 40 ಮಂದಿಯ ಲಿಸ್ಟ್ ಬಿಡುಗಡೆ ಮಾಡಿದ್ದು, ಮಣಿಪುರ ರಾಜ್ಯ ಮಾಜಿ ಮುಖ್ಯಮಂತ್ರಿ ಒಕ್ರಂ ಇಬೋಬಿ ಸಿಂಗ್ ಅವರು ತೌಬಲ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಮಣಿಪುರ ಕಾಂಗ್ರೆಸ್ ಪ್ರಮುಖ ನಾಯಕ ತೊಕ್ಚೊಮ್ ಲೋಕೇಶ್ವರ್ ಸಿಂಗ್ ಅವರು ಖುಂಡ್ರಕ್‌ಪಾಮ್‌ ಕ್ಷೇತ್ರದಿಂದ ಹಾಗೂ ಪಂಗೆಜಂ ಶರತ್ ಚಂದ್ರ ಸಿಂಗ್ ಅವರು ಹೈಂಜಾಂಗ್​​ನಿಂದ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಇನ್ನುಳಿದಂತೆ ಮೊಹಮ್ಮದ್​ ಅಮೀನ್ ಶಾ ಅವರು ಖೇತ್ರಿಗಾವೋದಿಂದ ಮತ್ತು ಸೆರಾಮ್ ನೀಕೆನ್ ಸಿಂಗ್, ಥೋಂಗ್ಜು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಮಣಿಪುರದಲ್ಲಿ ಒಟ್ಟು 60 ವಿಧಾನಸಭಾ ಕ್ಷೇತ್ರಗಳಿದ್ದು, ಫೆಬ್ರವರಿ 27 ಮತ್ತು ಮಾರ್ಚ್​ 3ರಂದು ಮತದಾನ ನಡೆಯಲಿದೆ. ಹಾಗೇ, ಮಾರ್ಚ್ 3ರಂದು ಮತಎಣಿಕೆ ಇದೆ. 2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 28 ಕ್ಷೇತ್ರಗಳನ್ನು ಗೆದ್ದುಕೊಂಡು, ಸಂಪೂರ್ಣ ಬಹುಮತಪಡೆದ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ನಂತರ ಹಲವು ನಾಯಕರು ಕಾಂಗ್ರೆಸ್ ಬಿಟ್ಟರು. ಅದಾದ ಬಳಿಕ ಬಿಜೆಪಿ ಅಲ್ಲಿ ನಾಗಾ ಪೀಪಲ್ಸ್​ ಫ್ರಂಟ್​ (NPF). ನ್ಯಾಶನಲ್​ ಪೀಪಲ್ಸ್ ಪಾರ್ಟಿ (NPP), ಲೋಕ ಜನಶಕ್ತಿ  ಪಾರ್ಟಿ (LJP) ಮತ್ತು ಇತರ ಸ್ವತಂತ್ರ ಅಭ್ಯರ್ಥಿಗಳೊಂದಿಗೆ ಸೇರಿ ಸರ್ಕಾರ ರಚನೆ ಮಾಡಿತ್ತು.  ಈ ಬಾರಿ ಚುನಾವಣೆಯಲ್ಲಿ ಮೊದಲ ಹಂತದಲ್ಲಿ 6 ಜಿಲ್ಲೆಗಳು ಮತ್ತು ಎರಡನೇ ಹಂತದಲ್ಲಿ 10 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.

ಅಂದಹಾಗೆ, ಮಣಿಪುರ ಸೇರಿ ಚುನಾವಣೆಯ ನಡೆಯಲಿರುವ ಎಲ್ಲ ಪಂಚರಾಜ್ಯಗಳಲ್ಲಿ ಚುನಾವಣಾ ಪ್ರಚಾರ ಸಭೆಗಳು, ರೋಡ್​ಶೋ, ರ್ಯಾಲಿಗಳು ಸೇರಿ ಭೌತಿಕ ಸಭೆಗಳಿಗೆ ಹೇರಲಾಗಿದ್ದ ನಿರ್ಬಂಧವನ್ನು ಚುನಾವಣಾ ಆಯೋಗ ಜನವರಿ 31ರವರೆಗೆ ವಿಸ್ತರಿಸಿದೆ. ಮೊಟ್ಟಮೊದಲು ಜನವರಿ 8ರಂದು ಸುದ್ದಿಗೋಷ್ಠಿ ನಡೆಸಿದ್ದ ಚುನಾವಣಾ ಆಯೋಗದ ಅಧಿಕಾರಿಗಳು ಐದು ರಾಜ್ಯಗಳಾದ ಗೋವಾ, ಮಣಿಪುರ, ಉತ್ತರಪ್ರದೇಶ, ಉತ್ತರಾಖಂಡ್​, ಪಂಜಾಬ್​​ಗಳಲ್ಲಿ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿತ್ತು. ಆದರೆ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ರಾಜಕೀಯ ಪಕ್ಷಗಳೂ ಜನವರಿ 15ರವರೆಗೆ  ರೋಡ್ ಶೋ, ಸಾರ್ವಜನಿಕ ಪ್ರಚಾರದ ನೆಪದಲ್ಲಿ ಜನರನ್ನು ಸೇರಿಸುವ, ಪ್ರಚಾರ ಸಭೆ, ರ್ಯಾಲಿಗಳನ್ನು ನಡೆಸುವಂತಿಲ್ಲ ಎಂದು ಹೇಳಿದ್ದರು. ನಂತರ ಜನವರಿ 15ರಂದು ಮತ್ತೊಮ್ಮೆ ಸಭೆ ನಡೆಸಿ, ನಿರ್ಬಂಧ ಅವಧಿಯನ್ನು ಜನವರಿ 22ರವರೆಗೆ ವಿಸ್ತರಣೆ ಮಾಡಿದ್ದರು.

ಇದನ್ನೂ ಓದಿ: ಬಾಡಿಗೆ ತಾಯ್ತನದ ಮೂಲಕ ಪಡೆಯುವ ಮಗು ರೆಡಿಮೇಡ್​ ಬೇಬಿ ಎಂದ ಲೇಖಕಿ; ಈಗ ಯಾಕೆ ಇಂಥ ಟ್ವೀಟ್​?-ನೆಟ್ಟಿಗರಿಂದ ಅಸಮಾಧಾನ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ