AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Assembly Election: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆಯೇ ಶುರವಾಯ್ತು ಪ್ರತಿಭಟನೆ, ಕಚೇರಿಗಳು ಧ್ವಂಸ

ಮಣಿಪುರದಲ್ಲಿ ಎಲ್ಲ 60 ವಿಧಾನಸಭೆ ಕ್ಷೇತ್ರಗಳಲ್ಲೂ ಸ್ಪರ್ಧಿಸುವುದಾಗಿ ಘೋಷಿಸಿದ ಬಿಜೆಪಿ ನಿನ್ನೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್​ ತೊರೆದು ಬಿಜೆಪಿಗೆ ಸೇರಿದ್ದ ಸುಮಾರು 10 ನಾಯಕರಿಗೆ ಈ ಬಾರಿ ಬಿಜೆಪಿಯಿಂದ ಟಿಕೆಟ್​ ಸಿಕ್ಕಿದೆ. 

Manipur Assembly Election: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆಯೇ ಶುರವಾಯ್ತು ಪ್ರತಿಭಟನೆ, ಕಚೇರಿಗಳು ಧ್ವಂಸ
ಮಣಿಪುರ
TV9 Web
| Edited By: |

Updated on:Jan 31, 2022 | 10:25 AM

Share

ಗುವಾಹಟಿ: ಮಣಿಪುರದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭೆ ಚುನಾವಣೆ (Manipur Assembly Election 2022) ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ ಎಲ್ಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.  ಆದರೆ ಹೀಗೆ ಅಭ್ಯರ್ಥಿಗಳ ಲಿಸ್ಟ್​ ಬಿಡುಗಡೆ ಮಾಡುತ್ತಿದ್ದಂತೆ ಬಿಜೆಪಿ ಬೆಂಬಲಿಗರು ಪ್ರತಿಭಟನೆ, ಹಿಂಸಾಚಾರ ಶುರು ಮಾಡಿಕೊಂಡಿದ್ದಾರೆ. ಪ್ರಧಾನಿ ಮೋದಿ ಮತ್ತು ಮಣಿಪುರ ಸಿಎಂ ಎನ್. ಬಿರೆನ್​ ಸಿಂಗ್​ ಅವರ ಪ್ರತಿಕೃತಿಗಳನ್ನು ದಹಿಸಿದ್ದಾರೆ. ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಟಿಕೆಟ್​ ಆಕಾಂಕ್ಷಿಯಾಗಿದ್ದ ಅನೇಕರಿಗೆ ಅವಕಾಶ ಸಿಗದೆ ಇರುವುದೇ ಈ ಪ್ರತಿಭಟನೆಗೆ ಕಾರಣವಾಗಿದೆ. 

ಮಣಿಪುರ ರಾಜ್ಯದ ವಿವಿಧೆಡೆ ಬಿಜೆಪಿ ಕಚೇರಿಗಳನ್ನು ಧ್ವಂಸಗೊಳಿಸಲಾಗಿದೆ. ಪ್ರತಿಭಟನಾಕಾರರು ಪ್ಲೇಕಾರ್ಡ್​ಗಳನ್ನು ಹಿಡಿದು ಘೋಷಣೆ ಕೂಗುತ್ತಿದ್ದಾರೆ. ಇಂಫಾಲ್​​ನಲ್ಲಿರುವ ಬಿಜೆಪಿ ಪ್ರಧಾನ ಕಚೇರಿ ಬಳಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇನ್ನು ತಮಗೆ ಟಿಕೆಟ್​ ಸಿಕ್ಕೇಸಿಗುತ್ತದೆ ಎಂದು ಬಲವಾಗಿ ಭರವಸೆ ಇಟ್ಟುಕೊಂಡಿದ್ದ ಬಿಜೆಪಿ ಮುಖಂಡರು ರಾಜೀನಾಮೆ ಕೊಟ್ಟಿದ್ದಾರೆ. ಆದರೆ ಎಷ್ಟು ಜನ ರಾಜೀನಾಮೆ ಕೊಟ್ಟಿದ್ದಾರೆ ಎಂಬ ಖಚಿತ ಮಾಹಿತಿ ಇನ್ನೂ ಸಿಕ್ಕಿಲ್ಲ. ಮೂಲ ಬಿಜೆಪಿಗರಿಗೆ ನಿರಾಸೆ ಮಾಡಿ, ಪಕ್ಷಾಂತರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಮಣಿಪುರದಲ್ಲಿ ಎಲ್ಲ 60 ವಿಧಾನಸಭೆ ಕ್ಷೇತ್ರಗಳಲ್ಲೂ ಸ್ಪರ್ಧಿಸುವುದಾಗಿ ಘೋಷಿಸಿದ ಬಿಜೆಪಿ ನಿನ್ನೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್​ ತೊರೆದು ಬಿಜೆಪಿಗೆ ಸೇರಿದ್ದ ಸುಮಾರು 10 ನಾಯಕರಿಗೆ ಈ ಬಾರಿ ಬಿಜೆಪಿಯಿಂದ ಟಿಕೆಟ್​ ಸಿಕ್ಕಿದೆ.  ಮಣಿಪುರ ಸಿಎಂ ಎನ್​. ಬಿರೆನ್​ ಸಿಂಗ್​ ಅವರು ತಮ್ಮ ಸಾಂಪ್ರದಾಯಿಕ ವಿಧಾನಸಭಾ ಕ್ಷೇತ್ರ ಹಿಂಗಾಂಗ್​​ನಿಂದ ಸ್ಪರ್ಧಿಸಲಿದ್ದಾರೆ. ಹಾಗೇ ಮತ್ತೊಬ್ಬ ಪ್ರಮುಖ ಸಚಿವ ಬಿಸ್ವಜಿತ್​ ಸಿಂಗ್​, ತೊಂಗ್ಜು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಹಾಗೇ, ಮಾಜಿ ರಾಷ್ಟ್ರೀಯ ಫುಟ್ಬಾಲ್ ಆಟಗಾರ ಸೋಮತೈ ಸೈಜಾ, ಉಖ್ರುಲ್​​ನಿಂದ ಸ್ಪರ್ಧಿಸಲಿದ್ದಾರೆ.

2017ರ ಚುನಾವಣೆಯಲ್ಲಿ ಮಣಿಪುರದಲ್ಲಿ ಬಿಜೆಪಿ 21 ಕ್ಷೇತ್ರಗಳನ್ನು ಗೆದ್ದಿತ್ತು. ಅದಾದ ಬಳಿಕ ಸಣ್ಣ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚನೆ ಮಾಡಿತ್ತು. ಹಿಂದಿನ ಸರ್ಕಾರದಲ್ಲಿದ್ದ 19 ಶಾಸಕರಿಗೆ ಈ ಬಾರಿ ಮತ್ತೆ ಬಿಜೆಪಿ ಟಿಕೆಟ್​ ನೀಡಿದೆ. ಮೂವರನ್ನು ಕೈಬಿಟ್ಟಿದೆ.  ಈ ಬಾರಿ ಕೇವಲ ಮೂವರು ಮಹಿಳೆಯರಿಗೆ ಮತ್ತು ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಬಿಜೆಪಿ ಕಣಕ್ಕಿಳಿಸುತ್ತಿದೆ. ಬಿಜೆಪಿಗೆ ಸೇರ್ಪಡೆಯಾಗಿರುವ ಗೋವಿಂದಾಸ್ ಕೊಂತೌಜಂ ಅವರಿಗೂ ಟಿಕೆಟ್​ ಸಿಕ್ಕಿದೆ. ಈ ಬಾರಿ ಎರಡು ಹಂತದಲ್ಲಿ ಮಣಿಪುರದಲ್ಲಿ ಮತದಾನ ನಡೆಯಲಿದ್ದು, ಮತ ಎಣಿಕೆ ಮಾರ್ಚ್​ 10ಕ್ಕೆ ಇದೆ.

ಇದನ್ನೂ ಓದಿ: Bulandshahr: ವೈದ್ಯರೊಬ್ಬರ ಎಂಟು ವರ್ಷದ ಮಗನ ಅಪಹರಣ, ಹತ್ಯೆ -ಕಾರಣ?

Published On - 9:58 am, Mon, 31 January 22

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು