ಬೆಂಗಳೂರು: ಚುನಾವಣಾಧಿಕಾರಿಗಳ ವಿರುದ್ಧವೇ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಶಾಸಕ ಕೃಷ್ಣ ಭೈರೇಗೌಡ (MLA Krishna Byre Gowda) ದೂರು ನೀಡಿದ್ದಾರೆ. ವಕೀಲರೊಂದಿಗೆ ತೆರಳಿ ಕೃಷ್ಣ ಭೈರೇಗೌಡ ದೂರು ನೀಡಿದ್ದಾರೆ. ಕ್ಷೇತ್ರದ ಮತದಾರರಿಗೆ ಆಮಿಷವೊಡ್ಡಲು ಬಿಜೆಪಿ ಮುಖಂಡ ಕೋಟ್ಯಂತರ ಮೌಲ್ಯದ ಸಾಮಗ್ರಿ ಸಂಗ್ರಹಿಸಿದ್ದರು. ಆದರೂ ಚುನಾವಣಾ ಅಧಿಕಾರಿಗಳು ಯಾವುದೇ ಪ್ರಕರಣ ದಾಖಲಿಸಿಲ್ಲ. ಯಾರೋ ಬೇನಾಮಿ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಿದ್ದು, ಕೇಸ್ ಮುಚ್ಚಿ ಹಾಕುವ ಹುನ್ನಾರ ನಡೆದಿದೆ ಎಂದು ಚುನಾವಣಾಧಿಕಾರಿಗಳ ವಿರುದ್ಧವೇ ದೂರು ದಾಖಲಿಸಿದ್ದಾರೆ. ಕಾಂಗ್ರೆಸ್ ಸೇರ್ಪಡೆ ವದಂತಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ನಿಂದ ಆಹ್ವಾನ ಬಂದಿಲ್ಲ, ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಭೈರತಿ ಬಸವರಾಜ ಸ್ಪಷ್ಟನೆ ನೀಡಿದರು. ನನಗೆ ಯಾರೂ ಫೋನ್ ಆಗಲಿ, ನೇರವಾಗಿ ಆಹ್ವಾನ ಕೊಟ್ಟಿಲ್ಲ. ನಾನು ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಈ ಬಾರಿಯೂ ಜನ ನನಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ ಎಂದು ಹೇಳಿದರು.
ವರುಣ ವಿಧಾನಸಭಾ ಕ್ಷೇತ್ರದಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಧೂಳೀಪಟ ಆಗುವುದನ್ನು ತಡೆಯುವ ಚಿಂತನೆ ಮಾಡಬೇಕು. ನಿನ್ನೆ ಬಂದ ಸರ್ವೆ ಪ್ರಕಾರ ಬಿಜೆಪಿ 60 ಸ್ಥಾನವನ್ನೂ ಗೆಲ್ಲುವುದಿಲ್ಲ. ಬಿಜೆಪಿಯವರಿಗೆ ಮಾರಿಹಬ್ಬ ಮಾಡಬೇಕೆಂದು ಜನ ಕಾಯುತ್ತಿದ್ದಾರೆ. ಹಾಗಾಗಿ ಮಾಜಿ ಸಿಎಂ ಯಡಿಯೂರಪ್ಪ ತಮ್ಮ ಸ್ಥಾನ ಉಳಿಸಿಕೊಳ್ಳಲಿ.
ಬಿಜೆಪಿ ಅವರನ್ನು ಮೂಲೆ ಗುಂಪು ಮಾಡಿದೆ. ಎಲ್.ಕೆ.ಅಡ್ವಾಣಿ ಪರಿಸ್ಥಿತಿಯೇ ಬಿ.ಎಸ್.ಯಡಿಯೂರಪ್ಪಗೆ ಬಂದಿದೆ. ಅಡ್ವಾಣಿ, ವಾಜಪೇಯಿ ದೇಶದ ಮೂಲೆಮೂಲೆ ಸುತ್ತಿ ಪಕ್ಷ ಕಟ್ಟಿದ್ರು. S.M.ಕೃಷ್ಣಗೆ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಾ ಸ್ಥಾನಮಾನ ನೀಡಿದ್ದೆವು. ಬಿಜೆಪಿಯವರು S.M.ಕೃಷ್ಣರನ್ನು ಕರೆದುಕೊಂಡು ಹೋಗಿ ಕಡೆಗಣಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ಕೃಷ್ಣ ಭೈರೇಗೌಡ ವಾಗ್ದಾಳಿ ಮಾಡಿದರು.
ಕೋಲಾರ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಮಾತನಾಡಿ, ಇದು ಕೋಲಾರ ಭಾಗದ ‘ಕೈ’ ನಾಯಕರ ಅಭಿಪ್ರಾಯ. ಸಿದ್ದರಾಮಯ್ಯ ಸ್ಪರ್ಧಿಸಲೆಂಬುದು ಅಲ್ಲಿನ ನಾಯಕರ ಅಭಿಪ್ರಾಯವಷ್ಟೇ. ಅಂತಿಮವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲ, ವೇಣುಗೋಪಾಲ್ ತೀರ್ಮಾನಿಸಲಿದ್ದಾರೆ. ನವದೆಹಲಿಯಿಂದ ಬಂದ ಬಳಿಕ ಮತ್ತೊಂದು ಸುತ್ತಿನ ಸಭೆ ನಡೆಸಿದ್ದಾರೆ.
ಇದನ್ನೂ ಓದಿ: ಚುನಾವಣೆ ಕಾರ್ಯಗಳಿಗಾಗಿ ವಾಹನಗಳಿಗೆ ಬಾಡಿಗೆ ದರ ನಿಗದಿ: ಯಾವ ವಾಹನಕ್ಕೆ ಎಷ್ಟೆಷ್ಟು? ಇಲ್ಲಿದೆ ನೋಡಿ
ಈಗಾಗಲೇ ಪಕ್ಷದ ನಾಯಕರ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ಮತ್ತೊಮ್ಮೆ ದೆಹಲಿಗೆ ಹೋಗಿ ಹೈಕಮಾಂಡ್ ಜೊತೆ ಚರ್ಚಿಸಿ ನಿರ್ಧರಿಸುತ್ತಾರೆ. ಕೋಲಾರ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಗೆದ್ದೇ ಗೆಲ್ಲುತ್ತಾರೆ. ಆದರೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.
ವಿಧಾನಸಭಾ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:14 pm, Thu, 30 March 23