AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Temjen Imna Along: ಸಿನಿಮಾ ಡೈಲಾಗ್ ಟ್ವೀಟ್ ಮಾಡಿ ಚುನಾವಣೆಯಲ್ಲಿ ಗೆದ್ದ ಖುಷಿ ಹಂಚಿಕೊಂಡ ನಾಗಾಲ್ಯಾಂಡ್ ಸಚಿವ ತೆಮ್ಜೆನ್ ಇಮ್ನಾ ಅಲೋಂಗ್

Nagaland Election Result ನಾಗಾಲ್ಯಾಂಡ್‌ನ ಅಲೋಂಗ್ಟಾಕಿ ಕ್ಷೇತ್ರದಿಂದ ತೇಮ್ಜೆನ್ ಇಮ್ನಾ ಅಲೋಂಗ್ ಗೆದ್ದಿದ್ದಾರೆ. ಮತ ಎಣಿಕೆ ಆರಂಭವಾಗುತ್ತಿದ್ದಂತೆ ಬಿಜೆಪಿ-ಎನ್‌ಡಿಪಿಪಿ ಮೈತ್ರಿಕೂಟ ರಾಜ್ಯದಲ್ಲಿ ಪ್ರಬಲ ಮುನ್ನಡೆ ಕಾಯ್ದುಕೊಂಡಿದೆ.

Temjen Imna Along: ಸಿನಿಮಾ ಡೈಲಾಗ್ ಟ್ವೀಟ್ ಮಾಡಿ ಚುನಾವಣೆಯಲ್ಲಿ ಗೆದ್ದ ಖುಷಿ ಹಂಚಿಕೊಂಡ ನಾಗಾಲ್ಯಾಂಡ್ ಸಚಿವ ತೆಮ್ಜೆನ್ ಇಮ್ನಾ ಅಲೋಂಗ್
ತೆಮ್ಜೆನ್ ಇಮ್ನಾ ಅಲೋಂಗ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Mar 02, 2023 | 6:57 PM

Share

ಇದು 2023 ರ ಈಶಾನ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು, ಬಹುತೇಕ ಫಲಿತಾಂಶಗಳು ಪ್ರಕಟವಾಗಿವೆ. ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ (Nagaland) ಆಡಳಿತಾರೂಢ ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (NDPP) ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿರುವುದರಿಂದ ತೀವ್ರ ಕುತೂಹಲ ಕೆರಳಿಸಿದೆ. ನಾಗಾಲ್ಯಾಂಡ್ ಸಚಿವ ತೆಮ್ಜೆನ್ ಇಮ್ನಾ ಅಲಾಂಗ್ (Temjen Imna Along) ತಮ್ಮ ಹಾಸ್ಯದ ಮಾತುಗಳಿಂದ ಜನ ಪ್ರೀತಿ ಗಳಿಸಿದವರು. ಅವರ ಟ್ವೀಟ್ ಗಳು ಲವಲವಿಕೆಯಿಂದ ಕೂಡಿರುತ್ತವೆ. ನಾಗಾಲ್ಯಾಂಡ್ ಚುನಾವಣೆಯಲ್ಲಿ ಗೆದ್ದ ನಂತರ ಅಲಾಂಗ್ ಬಾಲಿವುಡ್ ಡೈಲಾಗ್ ಜತೆ ತಮ್ಮ ಫೋಟೊವೊಂದನ್ನು ಶೇರ್ ಮಾಡಿ ಗೆಲುವಿನ ಖುಷಿ ಹಂಚಿಕೊಂಡಿದ್ದಾರೆ.

ನಾಗಾಲ್ಯಾಂಡ್‌ನ ಅಲೋಂಗ್ಟಾಕಿ ಕ್ಷೇತ್ರದಿಂದ ತೇಮ್ಜೆನ್ ಇಮ್ನಾ ಅಲೋಂಗ್ ಗೆದ್ದಿದ್ದಾರೆ. ಮತ ಎಣಿಕೆ ಆರಂಭವಾಗುತ್ತಿದ್ದಂತೆ ಬಿಜೆಪಿ-ಎನ್‌ಡಿಪಿಪಿ ಮೈತ್ರಿಕೂಟ ರಾಜ್ಯದಲ್ಲಿ ಪ್ರಬಲ ಮುನ್ನಡೆ ಕಾಯ್ದುಕೊಂಡಿದೆ. ಒಮ್ಮೆ ಹಿನ್ನಡೆಯಾಗಿ ಮತ್ತೆ ಗೆಲುವಿನ ನಗೆ ಬೀರಿದ ಅಲಾಂಗ್, ಹಾರ್ ಕೇ ಜೀತ್ನೇವಾಲೋಂಕೋ …..ಕೆಹ್ತೆ ಹೈ ಎಂದು ನಾಗಾಲ್ಯಾಂಡ್ ನ ಸಾಂಪ್ರದಾಯಿಕ ಉಡುಗೆ ತೊಟ್ಟಿರುವ ಅವರ ಫೋಟೊವನ್ನು ಟ್ವೀಟ್ ಮಾಡಿದ್ದಾರೆ. ಶಾರುಖ್ ಖಾನ್-ಕಾಜೋಲ್ ನಟಿಸಿದ ಸೂಪರ್ ಹಿಟ್ ಬಾಲಿವುಡ್ ಚಿತ್ರ ಬಾಜಿಗರ್​​ನ ಡೈಲಾಗ್ ನ್ನು ಅಲಾಂಗ್ ಇಲ್ಲಿ ಬಳಸಿದ್ದಾರೆ.ಸಿನಿಮಾದಲ್ಲಿ ಶಾರುಖ್ ಖಾನ್, ಹಾರ್ ಕೇ ಜೀತ್ನೇವಾಲೋಂಕೋ ಬಾಜೀಗರ್ ಕೆಹ್ತೇ ಹೈ ಎಂದು ಹೇಳುತ್ತಾರೆ.

ಇದನ್ನೂ ಓದಿ: Tripura Election Results: ತ್ರಿಪುರಾದಲ್ಲಿ ಕಿಂಗ್ ಮೇಕರ್ ಆಗಲಿದೆಯೇ ಟಿಪ್ರಾ ಮೋಥಾ? ಯಾರಿದು ಪ್ರದ್ಯೋತ್ ಬಿಕ್ರಮ್ ಮಾಣಿಕ್ಯ ದೆಬ್ಬರ್ಮಾ?

ಪೋಸ್ಟ್ ಈಗಾಗಲೇ 31.4 ಲೈಕ್ ಮತ್ತು 1,724 ಬಾರಿ ರೀಟ್ವೀಟ್ ಆಗಿದೆ,. ನಾಗಾಲ್ಯಾಂಡ್‌ನಲ್ಲಿ ಸೋಮವಾರ (ಫೆಬ್ರವರಿ 27) ಮತದಾನ ನಡೆದಿದೆ. ಬಿಜೆಪಿ-ಎನ್‌ಡಿಪಿಪಿ ಮೈತ್ರಿಕೂಟವು ಸ್ಥಾನಗಳಲ್ಲಿ ಗಣನೀಯ ಮುನ್ನಡೆಯೊಂದಿಗೆ ಆರಾಮದಾಯಕ ಗೆಲುವಿಗೆ ಸಿದ್ಧವಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:55 pm, Thu, 2 March 23

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ