ನಳಿನ್, ಡಿವಿ ಚಿತ್ರಕ್ಕೆ ಚಪ್ಪಲಿ ಹಾರ ಪ್ರಕರಣ; ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿದ ನಳಿನ್ ಕುಮಾರ್ ಕಟೀಲ್

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ನಳಿನ್ ಕುಮಾರ್ ಕಟೀಲ್ ಮತ್ತು ಸಂಸದ ಡಿವಿ ಸದಾನಂದ ಗೌಡ ಅವರ ಬ್ಯಾನರ್​ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದಕ್ಕೆ ಸಂಬಂಧಿಸಿ ಕೊನೆಗೂ ನಳಿನ್ ಕುಮಾರ್ ಕಟೀಲ್ ಮೌನ ಮುರಿದಿದ್ದಾರೆ.

ನಳಿನ್, ಡಿವಿ ಚಿತ್ರಕ್ಕೆ ಚಪ್ಪಲಿ ಹಾರ ಪ್ರಕರಣ; ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿದ ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್
Follow us
Ganapathi Sharma
|

Updated on:May 17, 2023 | 9:19 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ನಳಿನ್ ಕುಮಾರ್ ಕಟೀಲ್ (Nalin Kumar Kateel) ಮತ್ತು ಸಂಸದ ಡಿವಿ ಸದಾನಂದ ಗೌಡ (DV Sadananda Gowda) ಅವರ ಬ್ಯಾನರ್​ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದಕ್ಕೆ ಸಂಬಂಧಿಸಿ ಕೊನೆಗೂ ನಳಿನ್ ಕುಮಾರ್ ಕಟೀಲ್ ಮೌನ ಮುರಿದಿದ್ದಾರೆ. ಪ್ರಕರಣದಲ್ಲಿ ಪೊಲೀಸರು ನಡೆದುಕೊಂಡಿರುವ ರೀತಿಯನ್ನು ಖಂಡಿಸಿ ಟ್ವೀಟ್ ಮಾಡಿರುವ ಅವರು, ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

‘ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ. ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ. ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು’ ಎಂದು ಕಟೀಲ್ ಟ್ವೀಟ್ ಮಾಡಿದ್ದಾರೆ.

ಏನಿದು ಪ್ರಕರಣ?

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ಬಳಿಕ ಪುತ್ತೂರು ಬಸ್​ ನಿಲ್ದಾಣದ ಬಳಿಯಲ್ಲಿ ರಾತ್ರೋರಾತ್ರಿ ನಳಿನ್ ಕುಮಾರ್ ಕಟೀಲ್ ಹಾಗೂ ಸಂಸದ ಡಿವಿ ಸದಾನಂದ ಗೌಡ ಅವರ ಭಾವಚಿತ್ರ ಇರುವ ಶ್ರದ್ಧಾಂಜಲಿ ಬ್ಯಾನರ್ ಹಾಕಲಾಗಿದ್ದು, ಅದಕ್ಕೆ ಚಪ್ಪಲಿ ಹಾರ ಹಾಕಲಾಗಿತ್ತು. ಈ ಬಗ್ಗೆ ಪುತ್ತೂರು ನಗರಸಭಾ ಆಯುಕ್ತ ಮಧು ಮನೋಹರ್ ಹಾಗೂ ಇತರರು ಪೊಲೀಸರಿಗೆ ದೂರು ನೀಡಿದ್ದರು. ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರು.

ಆರೋಪಿಗಳ ಬಂಧಿಸಿ ಚಿತ್ರಹಿಂಸೆ ನೀಡಿದ ಪೊಲೀಸರು; ಆರೋಪ

ಘಟನೆಗೆ ಸಂಬಂಧಿಸಿದಂತೆ 9 ಜನರನ್ನು ವಶಕ್ಕೆ ಪಡೆದಿದ್ದ ಪೋಲೀಸರು ಅವರ ಮೇಲೆ ತೀವ್ರ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಪುತ್ತೂರು ಡಿವೈಎಸ್ಪಿ ನೇತೃತ್ವದಲ್ಲಿ ಆರೋಪಿಗಳಿಗೆ ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿದೆ. ಆರೋಪಿಗಳಿಗೆ ರಕ್ತ ಒಸರುವಷ್ಟು ಪೊಲೀಸರು ಥಳಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಆರೋಪಗಳು ಕೇಳಿ ಬಂದಿದ್ದವು. ನಂತರ ಹಿಂದೂ ಸಂಘಟನೆ ಮುಖಂಡ, ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಆರೋಪಿಗಳನ್ನು ಬಿಡಿಸಿಕೊಂಡು ಬಂದಿದ್ದರು. ಅಚ್ಚರಿಯ ವಿಷಯವೆಂದರೆ, ಪೊಲೀಸರಿಂದ ಹಲ್ಲೆಗೊಳಗಾದ ಕಾರ್ಯಕರ್ತರ ಪೈಕಿ ಬಹುತೇಕರು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಕಾರ್ಯನಿರ್ವಹಿಸಿದ್ದವರೇ ಆಗಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆಯೇ ನಳಿನ್ ಕುಮಾರ್ ಕಟೀಲ್ ಮತ್ತು ಸದಾನಂದ ಗೌಡ ವಿರುದ್ಧ ಜನ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಕಾರ್ಯಕರ್ತರ ವಿರುದ್ಧವೇ ನಿರ್ಗಮಿತ ಶಾಸಕ ಸಂಜೀವ ಮಠಂದೂರು ಹಾಗೂ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪ ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಮಂಗಳವಾರ ಹರಿದಾಡಿತ್ತು. ಇದಕ್ಕೂ ಬಿಜೆಪಿ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಕಾರ್ಯಕರ್ತರಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪ ವ್ಯಕ್ತವಾಗಿತ್ತು.

ಇದನ್ನೂ ಓದಿ: ನಳಿನ್, ಡಿವಿ ಭಾವಚಿತ್ರಕ್ಕೆ ಚಪ್ಪಲಿ ಹಾರ; ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯ ಆರೋಪ

ಈ ಎಲ್ಲ ಬೆಳವಣಿಗೆಗಳ ನಂತರ ನಳಿನ್ ಕುಮಾರ್ ಕಟೀಲ್ ಅವರು ಟ್ವೀಟ್ ಮಾಡಿ ಪೊಲೀಸ್ ದೌರ್ಜನ್ಯವನ್ನು ಖಂಡಿಸಿದ್ದಾರೆ. ನಳಿನ್​ ಟ್ವೀಟ್​ಗೆ ನೂರಾರು ಪ್ರತಿಕ್ರಿಯೆಗಳು ಬಂದಿದ್ದು, ಅನೇಕರು ತರಾಟೆಗೆ ತೆಗೆದುಕೊಂಡಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಹಿಂದುತ್ವ VS ಬಿಜೆಪಿ ನಾಯಕರು

ವಿಧಾನಸಭೆ ಚುನಾವಣೆಯ ಟಿಕೆಟ್ ಹಂಚಿಕೆ ವಿರುದ್ಧ ಪುತ್ತೂರಿನಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಉಂಟಾಗಿರುವ ಅಸಮಾಧಾನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದುತ್ವ ಮತ್ತು ಬಿಜೆಪಿ ನಾಯಕರ ನಡುವಿನ ಭಿನ್ನಾಭಿಪ್ರಾಯ ಹೆಚ್ಚಾಗಲು ಕಾರಣವಾಗಿದೆ. ಪರಿಣಾಮವಾಗಿ ಬಿಜೆಪಿ ಹಿರಿಯ ನಾಯಕರು ಮತ್ತು ಸಂಘಪರಿವಾರದ ನಾಯಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಮುಂಬರುವ ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಮತ್ತು ಲೋಕಸಭೆ ಚುನಾವಣೆಗಳ ಮೇಲೂ ಪರಿಣಾಮ ಬೀರಬಹುದು ಎಂದು ಜಿಲ್ಲೆಯ ರಾಜಕೀಯ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:14 pm, Wed, 17 May 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ