AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಲ್​ ಸಂತೋಷ್ ವಿರುದ್ಧ ಶೆಟ್ಟರ್ ಆರೋಪಕ್ಕೆ ನಳಿನ್ ಕುಮಾರ್ ಕಟೀಲ್ ತಿರುಗೇಟು; ಏನಂದರು ಬಿಜೆಪಿ ರಾಜ್ಯಾಧ್ಯಕ್ಷ?

ಬಿಜೆಪಿಯಿಂದ ಟಿಕೆಟ್ ಕೈತಪ್ಪಲು ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್​ ಸಂತೋಷ್ ಕಾರಣ ಎಂಬ ಜಗದೀಶ ಶೆಟ್ಟರ್ ಆರೋಪಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.

ಬಿಎಲ್​ ಸಂತೋಷ್ ವಿರುದ್ಧ ಶೆಟ್ಟರ್ ಆರೋಪಕ್ಕೆ ನಳಿನ್ ಕುಮಾರ್ ಕಟೀಲ್ ತಿರುಗೇಟು; ಏನಂದರು ಬಿಜೆಪಿ ರಾಜ್ಯಾಧ್ಯಕ್ಷ?
ನಳಿನ್ ಕುಮಾರ್ ಕಟೀಲು
ಗಣಪತಿ ಶರ್ಮಾ
|

Updated on:Apr 18, 2023 | 3:01 PM

Share

ಮುಖ್ಯಾಂಶಗಳು

  • ಬಿಎಲ್​ ಸಂತೋಷ್ ವಿರುದ್ಧ ಶೆಟ್ಟರ್ ಆರೋಪಕ್ಕೆ ನಳಿನ್ ಕುಮಾರ್ ಕಟೀಲ್ ತಿರುಗೇಟು
  • ಯಾರೋ ಒಬ್ಬರ ನಿರ್ಣಯದಂತೆ ನಮ್ಮಲ್ಲಿ ಅಭ್ಯರ್ಥಿ ಆಯ್ಕೆ ಮಾಡಲಾಗುವುದಿಲ್ಲ ಎಂದ ಕಟೀಲ್
  • ಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಬೇಕಿದ್ದರೂ ಸ್ಪರ್ಧಿಸಬಹುದು; ಪುತ್ತೂರಿನಲ್ಲಿ ಪುತ್ತಿಲ ಸ್ಪರ್ಧೆ ಬಗ್ಗೆ ಕಟೀಲ್ ಪ್ರತಿಕ್ರಿಯೆ

ಮಂಗಳೂರು: ಬಿಜೆಪಿಯಿಂದ ಟಿಕೆಟ್ ಕೈತಪ್ಪಲು ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್​ ಸಂತೋಷ್ ಕಾರಣ ಎಂಬ ಜಗದೀಶ ಶೆಟ್ಟರ್ (Jagadish Shettar) ಆರೋಪಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ತಿರುಗೇಟು ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಯಾರೋ ಒಬ್ಬರ ನಿರ್ಣಯದಂತೆ ನಮ್ಮಲ್ಲಿ ಅಭ್ಯರ್ಥಿ ಆಯ್ಕೆ ಮಾಡಲಾಗುವುದಿಲ್ಲ. ಒಮ್ಮತದ ಅಭಿಪ್ರಾಯದ ಮೇಲೆ ಚುನಾವಣಾ ಪ್ರಕ್ರಿಯೆ ನಡೆಯುತ್ತದೆ. ಮತಗಟ್ಟೆ ಕಾರ್ಯಕರ್ತರ ವೋಟ್​​ ಮೂಲಕ ಅಭಿಪ್ರಾಯ ಸಂಗ್ರಹಿಸುತ್ತೇವೆ. ಶೆಟ್ಟರ್ ಪಾರ್ಟಿ ಅಧ್ಯಕ್ಷ ಆಗಿದ್ದವರು, ಸಾಮೂಹಿಕ ನಾಯಕತ್ವ ಗೊತ್ತಿದೆ. ಪಕ್ಷದಿಂದ ಹೊರಗೆ ಹೋಗಿ ಹೀಗೆಲ್ಲ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.

ಬಿಎಲ್ ಸಂತೋಷ್ ಸಂಘಟನೆ ಕಾರ್ಯ ಮಾಡುತ್ತಿದ್ದಾರೆ. ನಮ್ಮಲ್ಲಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿ ಇವೆ. ಅವುಗಳ ಮೂಲಕ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ. ನಮ್ಮ ಪಕ್ಷಕ್ಕೆ ಅದರದ್ದೇ ಆದ ಕೆಲವು ನಿಯಮಗಳಿವೆ. ಮಾನಸಿಕವಾಗಿ ಯಾವುದೋ ಕಾರಣಕ್ಕೆ ಶೆಟ್ಟರ್ ಪಕ್ಷ ತೊರೆದಿದ್ದಾರೆ. ಅವರನ್ನು ಕಾಂಗ್ರೆಸ್ ಹೇಗೆ ನಡೆಸಿಕೊಳ್ಳುತ್ತದೆ ಎಂಬುವುದನ್ನು ಕಾದು ನೋಡುತ್ತೇವೆ. ರಾಷ್ಟ್ರೀಯ ನಾಯಕರು ಅವರ ಮನೆ ಬಾಗಿಲಿಗೆ ಹೋದರೂ ಗೌರವ ಕೊಟ್ಟಿಲ್ಲ. ಹಿರಿಯರ ಮನವೊಲಿಕೆ ನಂತರವೂ ಶೆಟ್ಟರ್ ಬಿಜೆಪಿ ಬಿಟ್ಟು ಹೋಗಿದ್ದಾರೆ ಎಂದು ನಳಿನ್ ಕುಮಾರ್ ಹೇಳಿದ್ದಾರೆ.

ಪುತ್ತೂರಿನಲ್ಲಿ ಪುತ್ತಿಲ ಸ್ಪರ್ಧೆಯಿಂದ ಸಮಸ್ಯೆ ಇಲ್ಲ

ಪುತ್ತೂರಿನಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದಿರುವ ಅರುಣ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಬೇಕಿದ್ದರೂ ಸ್ಪರ್ಧಿಸಬಹುದು. ತಮ್ಮ ಅಪೇಕ್ಷೆ ಈಡೇರದಿದ್ದಾಗ ನಾಮಪತ್ರ ಸಲ್ಲಿಸುತ್ತಾರೆ. ಪುತ್ತೂರು ಬಿಜೆಪಿಯ ಭದ್ರಕೋಟೆ. ಇಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ನಮ್ಮ ಕಾರ್ಯಕರ್ತರು ರಾಷ್ಟ್ರೀಯ ವಿಚಾರಧಾರೆ ಜೊತೆ ಕೈಜೋಡಿಸುತ್ತಾರೆ. ಬಿಜೆಪಿ ಯಾವುದನ್ನೂ ವಿರೋಧಿಸುವುದಿಲ್ಲ, ನಮಗೆ ಗೆಲುವಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನನಗೆ ಮಾತ್ರವಲ್ಲ ರಾಮದಾಸ್​ಗೂ ಟಿಕೆಟ್​ ತಪ್ಪಿಸಿದ್ದು ಬಿಎಲ್​ ಸಂತೋಷ್​: ಸಾಲು ಸಾಲು ಆರೋಪಗಳನ್ನು ಮಾಡಿದ ಜಗದೀಶ್ ಶೆಟ್ಟರ್

ಪುತ್ತೂರಿನಲ್ಲಿ ಅರುಣ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದರಿಂದ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಈ ಮಧ್ಯೆ, ಪುತ್ತಿಲ ಅವರ ನಾಮಪತ್ರ ಸಲ್ಲಿಕೆ ವೇಳೆ ಸುಮಾರು ಹತ್ತು ಸಾವಿರ ಜನ ಸೇರಿರುವುದು ಬಿಜೆಪಿ ಪಾಳಯದಲ್ಲಿ ಆತಂಕ ಮೂಡಿಸಿದೆ ಎನ್ನಲಾಗಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:58 pm, Tue, 18 April 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್