Northeast Assembly Election Result 2023: ಇಂದು ತ್ರಿಪುರ, ಮೇಘಾಲಯ, ನಾಗಾಲ್ಯಾಂಡ್​ ವಿಧಾನಸಭಾ ಫಲಿತಾಂಶ

ಇಂದು ತ್ರಿಪುರ, ಮೇಘಾಲಯ, ನಾಗಾಲ್ಯಾಂಡ್​ ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯಲಿದ್ದು,. ಚುನಾವಣಾ ಫಲಿತಾಂಶದ ಅಪ್​ಡೇಟ್​​ಗಳು ಟಿವಿ9 ಕನ್ನಡ ಡಿಜಿಟಲ್​​​ನ ‘ಚುನಾವಣೆ​ 2023’ ಪುಟದಲ್ಲಿ ಹಾಗೂ ಚುನಾವಣಾ ಆಯೋಗದ ವೆಬ್​ಸೈಟ್​ನಲ್ಲಿ ದೊರೆಯಲಿದೆ.

Northeast Assembly Election Result 2023: ಇಂದು ತ್ರಿಪುರ, ಮೇಘಾಲಯ, ನಾಗಾಲ್ಯಾಂಡ್​ ವಿಧಾನಸಭಾ ಫಲಿತಾಂಶ
ಸಾಂದರ್ಭಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on: Mar 02, 2023 | 7:21 AM

ನವದೆಹಲಿ: ತ್ರಿಪುರಾ, ನಾಗಾಲ್ಯಾಂಡ್‌ ಹಾಗೂ ಮೇಘಾಲಯ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ (Assembly Election Results 2023) ಇಂದು( ಮಾರ್ಚ್2) ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಎದೆಯಲ್ಲಿ ಅಭ್ಯರ್ಥಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ. ತ್ರಿಪುರಾ (Tripura), ನಾಗಾಲ್ಯಾಂಡ್‌ನಲ್ಲಿ (Nagaland) ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದ್ದು, ಮೇಘಾಲಯದಲ್ಲಿ (meghalaya) ಜಿದ್ದಾಜಿದ್ದಿನ ಪೈಪೋಟಿ ಏರ್ಪಡಲಿದೆ ಎಂದು ಎಕ್ಸಿಟ್​​​ಪೋಲ್​ಗಳು ಭವಿಷ್ಯ ನುಡಿದಿರುವುದು ಕುತೂಹಲ ಹೆಚ್ಚಳಕ್ಕೆ ಕಾರಣವಾಗಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಸಂಜೆ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದೆ. ಚುನಾವಣಾ ಫಲಿತಾಂಶದ ಅಪ್​ಡೇಟ್​​ಗಳು ಟಿವಿ9 ಕನ್ನಡ ಡಿಜಿಟಲ್​​​ನ ‘ಚುನಾವಣೆ​ 2023’ ಪುಟದಲ್ಲಿ ಹಾಗೂ ಚುನಾವಣಾ ಆಯೋಗದ ವೆಬ್​ಸೈಟ್​ನಲ್ಲಿ ದೊರೆಯಲಿದೆ.

ಈಶಾನ್ಯ ರಾಜ್ಯಗಳ ಒಟ್ಟು 180 ಸ್ಥಾನಗಳಿಗೆ ಫೆಬ್ರುವರಿ 16 ಮತ್ತು 28ರಂದು ಮತದಾನ ನಡೆದಿತ್ತು. ತ್ರಿಪುರಾದ 60 ಸ್ಥಾನಗಳ ವಿಧಾನಸಭೆಯಲ್ಲಿ ಬಹುಮತಕ್ಕೆ 31 ಸೀಟು ಬೇಕು. ಇನ್ನು ಮೇಘಾಲಯ ಹಾಗೂ ನಾಗಾಲ್ಯಾಂಡ್​​​ನ ತಲಾ 59 ವಿಧಾನಸಭಾ ಸ್ಥಾನಗಳಲ್ಲಿ ಬಹುಮತಕ್ಕೆ 30 ಸೀಟು ಬೇಕು.

ಪ್ರಸ್ತುತ ನಾಗಾಲ್ಯಾಂಡ್‌ನಲ್ಲಿ ಎನ್‌ಡಿಪಿಪಿ ಮತ್ತು ಬಿಜೆಪಿ ಮೈತ್ರಿ ಸರ್ಕಾರಿ ಅಸ್ತಿತ್ವದಲ್ಲಿದ್ದು, ಎನ್‌ಡಿಪಿಪಿಯ ನೀಫಿಯು ರಿಯೊ ಮುಖ್ಯಮಂತ್ರಿಯಾಗಿದ್ದಾರೆ. ತ್ರಿಪುರಾದಲ್ಲಿ ಬಿಜೆಪಿ ಮತ್ತು ಐಪಿಎಫ್‌ಟಿ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದು, ಮಾಣಿಕ್‌ ಶಾ ಮುಖ್ಯಮಂತ್ರಿಯಾಗಿದ್ದಾರೆ. ಎನ್‌ಪಿಪಿ ಮುಖ್ಯಸ್ಥ ಕಾನ್ರಾಡ್ ಕೆ. ಸಂಗ್ಮಾ ಹಲವು ಪಕ್ಷಗಳ ಜತೆ ಮೈತ್ರಿ ಮಾಡಿಕೊಂಡು ಮೇಘಾಲಯದಲ್ಲಿ ಸರ್ಕಾರ ಮುನ್ನಡೆಸುತ್ತಿದ್ದಾರೆ.

ಎಕ್ಸಿಟ್​ ಪೋಲ್ ಹೇಳಿದ್ದೇನು?

ತ್ರಿಪುರಾದಲ್ಲಿ ಬಿಜೆಪಿ ಸುಲಭವಾಗಿ ಬಹುಮತ ಪಡೆಯಲಿದ್ದು, ನಾಗಾಲ್ಯಾಂಡ್‌ನಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮೇಘಾಲಯದಲ್ಲಿ ಜಿದ್ದಾಜಿದ್ದಿನ ಪೈಪೋಟಿ ನಡೆಯಲಿದೆ ಎಂದು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ಮೇಘಾಲಯದಲ್ಲಿ ಕಾನ್ರಾಡ್ ಸಂಗ್ಮಾ ಅವರ ಎನ್‌ಪಿಪಿ (ನ್ಯಾಷನಲ್ ಪೀಪಲ್ಸ್ ಪಾರ್ಟಿ) ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಯಿದೆ ಎಂದು ಎಕ್ಸಿಟ್​ಪೋಲ್​ಗಳು ಹೇಳಿವೆ.

ತ್ರಿಪುರಾದ 60 ಸ್ಥಾನಗಳ ವಿಧಾನಸಭೆಯಲ್ಲಿ ಬಹುಮತಕ್ಕೆ 31 ಸೀಟು ಬೇಕು. 30 ವರ್ಷಗಳಿಗೂ ಹೆಚ್ಚು ಕಾಲ ರಾಜ್ಯವನ್ನು ಆಳಿದ ಎಡಪಕ್ಷಗಳು ಈ ಬಾರಿ ಕೇವಲ 12 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಇಲ್ಲಿ ಕಾಂಗ್ರೆಸ್​​ಗೆ ಸೀಟು ಸಿಗುವುದಿಲ್ಲ ಎಂದು ಎಕ್ಸಿಟ್​​ಪೋಲ್ ಭವಿಷ್ಯ ನುಡಿದಿವೆ.

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು