ದಮನಿತರನ್ನು ಸಶಕ್ತಗೊಳಿಸಲು ಬಿಜೆಪಿ ಬದ್ಧ, ಕನ್ನಡದಲ್ಲಿ ಟ್ವೀಟ್​ ಮಾಡಿ ಜನಾಶೀರ್ವಾದ ಬಯಸಿದ ಪ್ರಧಾನಿ ಮೋದಿ

ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕವನ್ನು ಘೋಷಣೆ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಟ್ವೀಟ್​ ಮಾಡುವ ಮೂಲಕ ಕರ್ನಾಟಕ ಜನತೆಯ ಆರ್ಶೀವಾದ ಬಯಸಿದ್ದಾರೆ.

ದಮನಿತರನ್ನು ಸಶಕ್ತಗೊಳಿಸಲು ಬಿಜೆಪಿ ಬದ್ಧ, ಕನ್ನಡದಲ್ಲಿ ಟ್ವೀಟ್​ ಮಾಡಿ ಜನಾಶೀರ್ವಾದ ಬಯಸಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿImage Credit source: goodreturns.in
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 29, 2023 | 10:01 PM

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು (Election Commission of India)ರಾಜ್ಯದ 224 ವಿಧಾನಸಭಾ (Vidhana Sabha) ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು (Election Date) ಘೋಷಣೆ ಮಾಡಿದೆ. ಮೇ 10ರ ಬುಧವಾರದಂದು 224 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು ಮೇ 13ರ ಶನಿವಾರದಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಈ ವಿಷಯ ಹೊರ ಬೀಳುತ್ತಿದಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡುವ ಮೂಲಕ ಕರ್ನಾಟಕ ಜನತೆಯ ಆರ್ಶೀವಾದ ಬಯಸಿದ್ದಾರೆ. ಕನ್ನಡದಲ್ಲಿ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಕರ್ನಾಟಕ ಅಭಿವೃದ್ಧಿಯ ಶಕ್ತಿಕೇಂದ್ರ ಕಷ್ಟಪಟ್ಟು ದುಡಿಯುವ ರಾಜ್ಯದ ಜನರಿಗೆ ಧನ್ಯವಾದಗಳು. ಕರ್ನಾಟಕದ ಬೆಳವಣಿಗೆಯ ಪಯಣವನ್ನು ವೇಗಗೊಳಿಸಲು ಹಾಗೂ ಬಡವರನ್ನು, ಸಮಾಜದಲ್ಲಿ ಮೂಲೆಗುಂಪಾದವರನ್ನು ದಮನಿತರನ್ನು ಸಶಕ್ತಗೊಳಿಸಲು ಬಿಜೆಪಿ ಬದ್ಧವಾಗಿದೆ. ನಾವು ನಮ್ಮ ಅಭಿವೃದ್ಧಿಯ ಕಾರ್ಯಸೂಚಿಯನ್ನು ಆಧರಿಸಿ ಜನಾಶೀರ್ವಾದವನ್ನು ಬಯಸುತ್ತೇವೆ ಎಂದು ಬರೆದುಕೊಂಡಿದ್ದಾರೆ. 

ರಾಜ್ಯ ಬಿಜೆಪಿ ಘಟಕ ಕೂಡ ಟ್ವೀಟ್​ ಮಾಡಿದ್ದು, ರಾಜ್ಯದಲ್ಲಿ ಕಮಲ ಅರಳುವ ದಿನಾಂಕ ನಿಶ್ಚಯವಾಗಿದೆ. ಸ್ಪಷ್ಟ ಬಹುಮತದೊಂದಿಗೆ ಆಶೀರ್ವಾದ ಮಾಡಲು ಕನ್ನಡಿಗರು ಉತ್ಸುಕರಾಗಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರಲು ಇಂದಿನಿಂದ ಹಗಲಿರುಳು ಶ್ರಮಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ. ಕರ್ನಾಟಕ ಗೆಲ್ಲಲಿದೆ ಎಂದು ಬರೆಯಲಾಗಿದೆ.

ಏಪ್ರಿಲ್ 13 ರಂದು ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಸಲಾಗುವುದು, ಏಪ್ರಿಲ್ 20 ರಂದು ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿರುತ್ತದೆ. ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಮೇ 13 ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

ರಾಜ್ಯದಲ್ಲಿ 5,21,73,579 ಜನ ಮತದಾರರಿದ್ದಾರೆ. 2,62,42,561 ಜನ ಪುರುಷ ಮತದಾರರು ಹಾಗೂ 2,59,26,319 ಮಹಿಳಾ ಮತದಾರರಿದ್ದಾರೆ. 80 ವರ್ಷ ಮೇಲ್ಪಟ್ಟವರು 12,15,763 ಜನ ಇದ್ದಾರೆ. 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. 9,17,241 ಮಂದಿ ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 4,699 ತೃತೀಯ ಲಿಂಗಿ ಮತದಾರರಿದ್ದಾರೆ.

ಇದನ್ನೂ ಓದಿ: Karnataka Election: ಈ ಬಾರಿ ಕಾಂಗ್ರೆಸ್​ಗೆ 115ಕ್ಕೂ ಹೆಚ್ಚು ಸ್ಥಾನ, ಬಿಜೆಪಿಗೆ 68; ಎಬಿಪಿ ಸಿ ಓಟರ್ ಸಮೀಕ್ಷೆ

17 ವರ್ಷ ಮೇಲ್ಪಟ್ಟವರು 1,25,406 ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದು ಇತ್ತೀಚೆಗೆ ರಾಜ್ಯ ವಿಧಾನಸಭೆ ಚುನಾವಣೆಯ ಸಿದ್ಧತೆ ಪರಿಶೀಲನೆಗಾಗಿ ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮಾಹಿತಿ ನೀಡಿದರು.

ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳು ಇರಲಿವೆ. ಒಂದು ಮತಗಟ್ಟೆಯಲ್ಲಿ 883 ಜನ ಮತ ಹಾಕಬಹುದಾಗಿದೆ. ನಗರ ಪ್ರದೇಶಗಳಲ್ಲಿ 24,063 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 34,219 ಮತಗಟ್ಟೆಗಳು ಇರಲಿವೆ. ಹಾಗೇ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳು ಇರುವಂತೆ ನೋಡಿಕೊಳ್ಳಲಾಗುವುದು. ಅಂಗವಿಕಲರಿಗೆ ವ್ಹೀಲ್​ಚೇರ್ ವ್ಯವಸ್ಥೆ ಇರಲಿದೆ. ಅಭ್ಯರ್ಥಿಗಳು ಸುವಿಧಾ ಮೂಲಕವೂ ನಾಮಪತ್ರ ಸಲ್ಲಿಸಬಹುದು.

ಇದನ್ನೂ ಓದಿ: Karnataka Elections 2023: ನೀತಿ ಸಂಹಿತೆ ಉಲ್ಲಂಘನೆ ಕಂಡರೆ cVIGIL App​​ ಮೂಲಕ ದೂರು ಸಲ್ಲಿಸಿ; ಆ್ಯಪ್ ಬಳಸುವುದು ಹೇಗೆ?

ಅಫಿಡವಿಟ್ ಕೂಡ ಸಲ್ಲಿಕೆ ಮಾಡಬಹುದು. ಅಪರಾಧ ಪ್ರಕರಣಗಳು ಇದ್ದರೆ ಮೂರು ಬೇರೆ ಬೇರೆ ಪತ್ರಿಕೆಗಳಲ್ಲಿ ಜಾಹೀರಾತು ನೀಡಿರಬೇಕು. ಆನ್​​ಲೈನ್​​ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪೇಪರ್ ಕಟ್ಟಿಂಗ್ ಕೂಡ ಅಪ್​ಲೋಡ್ ಮಾಡಬೇಕು. ಸಭೆ, ಸಮಾರಂಭ ಮಾಡುವುದಕ್ಕೂ ಆನ್​​ಲೈನ್ ಮೂಲಕವೇ ಮನವಿ ಸಲ್ಲಿಸಬಹುದು ಎಂದು ಇತ್ತೀಚೆಗೆ ರಾಜೀವ್ ಕುಮಾರ್  ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:01 pm, Wed, 29 March 23

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?