ಮೋದಿ ನೇತೃತ್ವದಲ್ಲಿ ಬಿಜೆಪಿ ಮತ್ತೊಮ್ಮೆ ತನ್ನ ಸಾಮರ್ಥ್ಯ ಸಾಬೀತು ಮಾಡಿದೆ: ಪ್ರಲ್ಹಾದ್​ ಜೋಶಿ

|

Updated on: Dec 03, 2023 | 8:57 PM

ಇವತ್ತು ಬಂದ ಫಲಿತಾಂಶದಲ್ಲಿ ಜನತೆಯ ಆಶೀರ್ವಾದ ನಮಗೆ ಸಿಕ್ಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿದ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಮತದಾರರು ಮನ್ನಣೆ ನೀಡಿದ್ದಾರೆ. ದೇಶದ ಜನತೆಗೆ ಧನ್ಯವಾದಗಳು. ಇವತ್ತು ಬಂದಿರುವ ಫಲಿತಾಂಶ ಜನರ ಆಶೀರ್ವಾದವಾಗಿದೆ. ಸನ್ಮಾನ್ಯ ಮೋದಿಯವರಿಗೆ ನಾನು ವಿಶೇಷವಾಗಿ ದೇಶದ ಜನರ ಪರವಾಗಿ ಧನ್ಯವಾದಗಳು ಹೇಳುತ್ತೇನೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದರು.

ಮೋದಿ ನೇತೃತ್ವದಲ್ಲಿ ಬಿಜೆಪಿ ಮತ್ತೊಮ್ಮೆ ತನ್ನ ಸಾಮರ್ಥ್ಯ ಸಾಬೀತು ಮಾಡಿದೆ: ಪ್ರಲ್ಹಾದ್​ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ
Follow us on

ನವದೆಹಲಿ, ಡಿ.03: ಪ್ರಧಾನ ಮಂತ್ರಿ ನರೇಂದ್ರ ಮೋದಿ(Narendra Modi)ಯವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷ ಮೂರು ರಾಜ್ಯಗಳಲ್ಲಿ ಭಾರೀ ಜಯಭೇರಿ ಬಾರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ(Pralhad Joshi) ಹೇಳಿದ್ದಾರೆ. ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ಮೋದಿ ನೇತೃತ್ವದಿಂದಾಗಿ ನಾವು ಮೂರು ರಾಜ್ಯಗಳಲ್ಲಿ ದೊಡ್ಡ ಗೆಲುವು ಪಡೆಯಲು ಸಾಧ್ಯವಾಗಿದೆ. ಈ ಹಿನ್ನಲೆ ಮೋದಿಯವರಿಗೆ ಅಭಿನಂದನೆಗಳನ್ನು ಹಾಗೂ ದೇಶದ ಜನತೆಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.

“ಇವತ್ತು ಬಂದ ಫಲಿತಾಂಶದಲ್ಲಿ ಜನತೆಯ ಆಶೀರ್ವಾದ ನಮಗೆ ಸಿಕ್ಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿದ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಮತದಾರರು ಮನ್ನಣೆ ನೀಡಿದ್ದಾರೆ. ದೇಶದ ಜನತೆಗೆ ಧನ್ಯವಾದಗಳು. ಇವತ್ತು ಬಂದಿರುವ ಫಲಿತಾಂಶ ಜನರ ಆಶೀರ್ವಾದವಾಗಿದೆ. ಸನ್ಮಾನ್ಯ ಮೋದಿಯವರಿಗೆ ನಾನು ವಿಶೇಷವಾಗಿ ದೇಶದ ಜನರ ಪರವಾಗಿ ಧನ್ಯವಾದಗಳು ಹೇಳುತ್ತೇನೆ. ಈ ಶುಭ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರ ಆತ್ಮ ವಿಶ್ವಾಸ ಇಮ್ಮಡಿಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ:Narendra Modi: ಪಂಚರಾಜ್ಯ ಚುನಾವಣೆ: ಬಿಜೆಪಿಗೆ ಆಶೀರ್ವದಿಸಿದ ಜನತಾ ಜನಾರ್ದನನಿಗೆ ಪ್ರಧಾನಿ ನರೇಂದ್ರ ಮೋದಿ ನಮನ

ರಾಜಸ್ಥಾನದಲ್ಲಿ ಬಿಜೆಪಿ ಚುನಾವಣಾ ಉಸ್ತುವಾರಿ ವಹಿಸಿದ್ದ ಪ್ರಲ್ಹಾದ್​ ಜೋಶಿ ಅವರು ಈ ಚುನಾವಣೆಯ ಗೆಲುವನ್ನು ಕಾಂಗ್ರೆಸ್‌ನ ಸುಳ್ಳು ಭರವಸೆಯ ವಿರುದ್ಧದ ಗೆಲುವು ಎಂದ ವಿಶ್ಲೇಷಣೆ ‌ಮಾಡಿದರು‌. ಕಾಂಗ್ರೆಸ್​ನ ಪೊಳ್ಳು ಆಶ್ವಾಸನೆಗಳನ್ನು ಜನರು ತಿರಸ್ಕರಿಸಿದ್ದಾರೆ. ತೆಲಂಗಾಣ ಬಿಟ್ಟು ಉಳಿದ ಕಡೆ ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ. ಬಿಆರ್‌ಎಸ್ ದುರಾಡಳಿತದ ಪರಿಣಾಮ ಕಾಂಗ್ರೆಸ್ ತೆಲಂಗಾಣದಲ್ಲಿ ಗೆಲ್ಲುವಂತಾಗಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ದುರಾಡಳಿತದ ಬಗ್ಗೆ ಜನರಿಗೆ ತಿಳಿಸಿದ್ದೆವು. ಮಧ್ಯಪ್ರದೇಶದಲ್ಲಿ ಡಬಲ್ ಇಂಜಿನ್ ಸರ್ಕಾರದ ಕೆಲಸಗಳು ಜನರ ಈ ತೀರ್ಪು ನೀಡುವಂತೆ ಮಾಡಿದೆ.


ಸೂಕ್ಷ್ಮವಾಗಿ ಗಮನಿಸಿದರೆ ಮೂರು ರಾಜ್ಯದ ಚುನಾವಣೆಗಳಲ್ಲಿ ಜನರು ಪ್ರಧಾನಿ ಮೋದಿಯವರಿಗೆ ತಮ್ಮ ಆಶೀರ್ವಾದ ಮಾಡಿದ್ದಾರೆ. ಇದು ಸಾಮಾನ್ಯ ಗೆಲುವಲ್ಲ, ಮಧ್ಯಪ್ರದೇಶದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ. ರಾಜಸ್ಥಾನದಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಜಯಭೇರಿ ಬಾರಿಸಿದೆ. ಛತ್ತೀಸ್‌ಗಢದಲ್ಲಿ ಕೂಡ ಬಿಜೆಪಿ ಅದ್ಭುತ ಗೆಲುವು ದಾಖಲಿಸಿದೆ. ತೆಲಂಗಾಣದಲ್ಲಿ ಕಳೆದ ಬಾರಿ ಬಿಜೆಪಿ ಕೇವಲ ಒಂದು ಸ್ಥಾನವನ್ನು ಗೆದ್ದಿತ್ತು, ಆದರೆ, ಈ ಬಾರಿ ಅಲ್ಲಿಂದ ಎರಡಂಕಿಗೆ ಹೋಗಿದ್ದೇವೆ. ಓಟ್ ಶೇರ್ 14% ರಿಂದ 15% ಹೆಚ್ಚಾಗಿದೆ. ಇದರಿಂದ ಪ್ರಧಾನಿ ಮೋದಿ ಮೇಲೆ ಜನರ ನಂಬಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂಬುದನ್ನು ಈ ಫಲಿತಾಂಶ ಸ್ಪಷ್ಟಪಡಿಸಿದೆ.

ಪ್ರಧಾನಿ ಮೋದಿಯವರ ಸರ್ಕಾರದ ಮೇಲೆ ವಿಶ್ವಾಸವಿಟ್ಟು ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಈ ಐತಿಹಾಸಿಕ ಗೆಲುವಿಗೆ ಕಾರಣರಾದ ಮತದಾರರು, ಶ್ರಮಿಸಿದ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಅನಂತ ಧನ್ಯವಾದಗಳು ಎಂದು ಜೋಶಿ ಹೇಳಿದರು. ಇದು ಪ್ರತಿಯೊಬ್ಬ ಕಾರ್ಯಕರ್ತರ ಕಠಿಣ ಪರಿಶ್ರಮದ ಫಲಿತಾಂಶವಾಗಿದೆ. ಬಿಜೆಪಿಯು ತನ್ನ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ದೇಶಕ್ಕೆ ಮೋದಿಯವರು ನೀಡಿರುವ ಗ್ಯಾರಂಟಿಗೆ ಜನ ಪದೇ ಪದೇ ತಮ್ಮ ಅಭಿಮಾನದ ಮುದ್ರೆಯನ್ನು ಒತ್ತಿದ್ದಾರೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ಗೆ ಯಾವುದೇ ಭವಿಷ್ಯವಿಲ್ಲ ಎಂಬುದು ಖಾತ್ರಿಯಾಗಿದೆ ಎಂದು ಪ್ರಲ್ಹಾದ್​ ಜೋಶಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:54 pm, Sun, 3 December 23