ಅತೀ ಹೆಚ್ಚು ವಿಧಾನಸಭಾ ಕ್ಷೇತ್ರದ ಮೇಲೆ ಪ್ರಧಾನಿ ನರೇಂದ್ರ ಮೋದಿ ಕಣ್ಣು: ಫೆ. 27ರಂದು ಬೆಳಗಾವಿಗೆ ಭೇಟಿ
ವಿಧಾನಸಭಾ ಕ್ಷೇತ್ರದ ಮೇಲೆ ಪ್ರಧಾನಿ ನರೇಂದ್ರ ಮೋದಿ ಕಣ್ಣು ಇಟ್ಟಿದ್ದು, ಬೆಳಗಾವಿಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಮಾಸ್ಟರ್ ಪ್ಲ್ಯಾನ್ ಮಾಡುತ್ತಿದ್ದಾರೆ. ಈ ಹಿನ್ನೆಲೆ ಫೆಬ್ರವರಿ 27ರಂದು ಕುಂದಾನಗರಿ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿಲಿದ್ದಾರೆ.
ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಎರಡು ತಿಂಗಳು ಬಾಕಿ ಇದೆ. ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸಿನಿಂದ ನಡೆಯುತ್ತಿವೆ. ರಾಜ್ಯದ ಪ್ರಮುಖ ಮೂರು ಪಕ್ಷಗಳು ಮತದಾರರನ್ನು ಓಲೈಸಲು ಎಲ್ಲಾ ರೀತಿಯಿಂದಲೂ ಕಸರತ್ತು ಮಾಡುತ್ತಿದ್ದಾರೆ. ಇತ್ತ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರದ ಮೇಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ಕಣ್ಣು ಇಟ್ಟಿದ್ದು, ಬೆಳಗಾವಿಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಮಾಸ್ಟರ್ ಪ್ಲ್ಯಾನ್ ಮಾಡುತ್ತಿದ್ದಾರೆ. ಈ ಹಿನ್ನೆಲೆ ಫೆಬ್ರವರಿ 27ರಂದು ಕುಂದಾನಗರಿ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿಲಿದ್ದಾರೆ.
ಮೋದಿ ಭೇಟಿ ಹಿನ್ನೆಲೆ ಬಿಜೆಪಿ ನಾಯಕರು ಸಭೆ
ಫೆ.27 ಪ್ರಧಾನಿ ನರೇಂದ್ರ ಮೋದಿ ಭೇಟಿ ಫಿಕ್ಸ್ ಹಿನ್ನೆಲೆ ಬೆಳಗಾವಿಯ ಸರ್ಕ್ಯೂಟ್ ಹೌಸ್ನಲ್ಲಿ ಬಿಜೆಪಿ ನಾಯಕರು ಸಭೆ ನಡೆಸಿದರು. ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸರಾನಾ ನೇತೃತ್ವದಲ್ಲಿ ಸಭೆ ಮಾಡಿದ್ದು, ಶಾಸಕರಾದ ಅಭಯ ಪಾಟೀಲ್, ಅನಿಲ್ ಬೆನಕೆ ಸೇರಿ ಅನೇಕರು ಪ್ರಮುಖರು ಭಾಗಿಯಾಗಿದ್ದರು.
ಇದನ್ನೂ ಓದಿ: JP Nadda Toure: 2 ದಿನ ಜೆಪಿ ನಡ್ಡಾ ರಾಜ್ಯ ಪ್ರವಾಸ, ಕರಾವಳಿ, ಮಲೆನಾಡು ಭಾಗದ ಪಕ್ಷ ಸಂಘಟನೆಗೆ ಕಸರತ್ತು; ಇಲ್ಲಿದೆ ವೇಳಾಪಟ್ಟಿ
ರೈಲು ನಿಲ್ದಾಣ ಉದ್ಘಾಟನೆ ಮಾಡಲಿರುವ ಪ್ರಧಾನಿ ಮೋದಿ
ಮದ್ಯಾಹ್ನ 2 ಗಂಟೆಗೆ ಆಗಮಿಸಿ 3.30ರ ವರೆಗೆ ಬೆಳಗಾವಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯಿಂದ ಬೆಳಗಾವಿ ರೈಲು ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ರೈತ ಸನ್ಮಾನ ನಿಧಿಯ ಎರಡನೇ ಕಂತಿನ ಹಣವನ್ನು ಬೆಳಗಾವಿಯಿಂದಲೇ ಬಿಡುಗಡೆ ಮಾಡಲಿದ್ದಾರೆ. ನಂತರ ಬೃಹತ್ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.
ಬಿಜೆಪಿ ಮಾಸ್ಟರ್ ಪ್ಲ್ಯಾನ್
ಸಾವಗಾಂವ್, ಜಿಲ್ಲಾ ಕ್ರೀಡಾಂಗಣ, ಮಾಲಿನಿ ಗಾರ್ಡನ್, ಸಿಪಿಎಡ್ ಮೈದಾನ ಜಾಗ ಪರಿಶೀಲನೆ ಮಾಡಿದ್ದು, ಭದ್ರತಾ ಅಧಿಕಾರಿಗಳ ತಂಡ ಪರಿಶೀಲನೆ ಬಳಿಕ ಸಮಾವೇಶ ಸ್ಥಳ ನಿಗದಿ ಮಾಡಲಾಗುತ್ತದೆ. ಜಿಲ್ಲೆಯ 18 ಕ್ಷೇತ್ರಗಳಿಂದ 3 ಲಕ್ಷಕ್ಕೂ ಹೆಚ್ಚು ಜನ ಸೇರಿಸಲು ಪ್ಲ್ಯಾನ್ ಮಾಡಲಾಗುತ್ತಿದೆ. ಆ ಮೂಲಕ ಬೆಳಗಾವಿಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ.
ರಾಜದ್ಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:06 am, Mon, 20 February 23