ಅಧಿಕಾರದಲ್ಲಿರುವವರು ದ್ವೇಷ ಹರಡುತ್ತಿದ್ದಾರೆ; ವಯನಾಡ್ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ

ಏಪ್ರಿಲ್‌ನಲ್ಲಿ ನಡೆದ ಚುನಾವಣಾ ಫಲಿತಾಂಶಗಳ ನಂತರ ರಾಹುಲ್ ಗಾಂಧಿ ತಮ್ಮ ಸ್ಥಾನವನ್ನು ತೆರವು ಮಾಡಿ ರಾಯ್ ಬರೇಲಿಯನ್ನು ಆಯ್ಕೆ ಮಾಡಿಕೊಂಡ ನಂತರ ವಯನಾಡ್ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿಯನ್ನು ಘೋಷಿಸಲಾಗಿತ್ತು. ಇಂದು ವಯನಾಡಿನಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ ಅವರು ತಮ್ಮ ಚೊಚ್ಚಲ ಚುನಾವಣೆಗೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ.

ಅಧಿಕಾರದಲ್ಲಿರುವವರು ದ್ವೇಷ ಹರಡುತ್ತಿದ್ದಾರೆ; ವಯನಾಡ್ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ
ಪ್ರಿಯಾಂಕಾ ಗಾಂಧಿ
Follow us
ಸುಷ್ಮಾ ಚಕ್ರೆ
|

Updated on: Oct 23, 2024 | 5:51 PM

ವಯನಾಡ್: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಇಂದು ವಯನಾಡು ಲೋಕಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ತಮ್ಮ 17ನೇ ವಯಸ್ಸಿನಲ್ಲಿ ಕೇರಳದ ವಯನಾಡ್‌ಗೆ ಮೊದಲ ಬಾರಿಗೆ ತಮ್ಮ ತಾಯಿ ಸೋನಿಯಾ ಗಾಂಧಿ ಪರ ಪ್ರಚಾರಕ್ಕೆ ಬಂದ ಸಮಯವನ್ನು ಅವರು ನೆನಪಿಸಿಕೊಂಡರು. ಅವರು ಲೋಕಸಭೆಯ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ಕಾಂಗ್ರೆಸ್ ಭದ್ರಕೋಟೆ ವಯನಾಡಿನಲ್ಲಿ ರೋಡ್‌ಶೋ ಉದ್ದೇಶಿಸಿ ಮಾತನಾಡಿದರು.

ಅಧಿಕಾರದಲ್ಲಿರುವವರು ದ್ವೇಷ ತುಂಬಿದ ಸಿದ್ಧಾಂತವನ್ನು ಹರಡುತ್ತಿರುವ ಕಾಲದಲ್ಲಿ ನಾವು ಬದುಕುತ್ತಿದ್ದೇವೆ. ಇದು ಭಾರತದ ಅಡಿಪಾಯವನ್ನು ನಿರ್ಮಿಸಿದ ರಾಜಕೀಯವಲ್ಲ ಎಂದು ಅವರು ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: Wayanad Bypolls: ವಯನಾಡಿ​​ನಲ್ಲಿ ಮಹಿಳಾ ಸಮರ; ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ

“ನಾವು ಬಹಳ ವಿಚಿತ್ರವಾದ ಸಮಯದಲ್ಲಿ ವಾಸಿಸುತ್ತೇವೆ. ಅಧಿಕಾರದಲ್ಲಿರುವವರು ದ್ವೇಷದ ಸಿದ್ಧಾಂತವನ್ನು ಹರಡುತ್ತಿರುವ ಸಮಯದಲ್ಲಿ ನಾವು ಬದುಕುತ್ತಿದ್ದೇವೆ. ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಅವರು ಹಿಂಜರಿಯುವುದಿಲ್ಲ. ಇದು ನಮ್ಮ ರಾಷ್ಟ್ರದ ಅಡಿಪಾಯವನ್ನು ನಿರ್ಮಿಸಿದ ರಾಜಕೀಯವಲ್ಲ. ನಾವು ಸತ್ಯ, ನ್ಯಾಯ, ಸಮಾನತೆಗಾಗಿ ಹೋರಾಡುತ್ತಿದ್ದೇವೆ. ಈ ಮೌಲ್ಯಗಳು ನನ್ನ ಸಹೋದರನನ್ನು ದೇಶಾದ್ಯಂತ 1000 ಕಿಲೋಮೀಟರ್ ಪ್ರಯಾಣಿಸಲು ಪ್ರೇರೇಪಿಸಿತು. ನಿಮ್ಮ ಬೆಂಬಲವಿಲ್ಲದೆ ಅವನು ಅದನ್ನು ಮಾಡಲು ಸಾಧ್ಯವಿರಲಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: Wayanad Bypolls: ವಯನಾಡ್ ಉಪಚುನಾವಣೆಗೆ ನಾಳೆ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ

ಮುಂಬರುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣಾ ಪದಾರ್ಪಣೆಗೆ ಸಿದ್ಧತೆ ನಡೆಸುತ್ತಿರುವ ಪ್ರಿಯಾಂಕಾ ಅವರಿಗೆ ಇಂದು ಕಲ್ಪೆಟ್ಟಾದಲ್ಲಿ ಯುಡಿಎಫ್ ಮುಖಂಡರು, ಕಾರ್ಯಕರ್ತರು ಸೇರಿದಂತೆ ಸಾವಿರಾರು ಜನರಿಂದ ಅದ್ದೂರಿ ಸ್ವಾಗತ ದೊರೆಯಿತು. ಮಂಗಳವಾರ ರಾತ್ರಿ ತನ್ನ ತಾಯಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರೊಂದಿಗೆ ವಯನಾಡು ಜಿಲ್ಲೆಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ, ಕಲ್ಪೆಟ್ಟಾ ಹೊಸ ಬಸ್ ನಿಲ್ದಾಣದಿಂದ ತನ್ನ ಸಹೋದರ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ರೋಡ್ ಶೋ ನಡೆಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ