Sonu Sood: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ನಟ ಸೋನು ಸೂದ್ ವಿರುದ್ಧ ಎಫ್​ಐಆರ್ ದಾಖಲು

Punjab Assembly Elections 2022: ಚುನಾವಣಾ ದಿನದಂದು ಮತಗಟ್ಟೆಗೆ ತೆರಳಿ ಮತದಾರರಿಗೆ ಪ್ರಭಾವ ಬೀರಿದ ಆರೋಪದ ಮೇಲೆ ನಟ ಸೋನು ಸೂದ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.

Sonu Sood: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ನಟ ಸೋನು ಸೂದ್ ವಿರುದ್ಧ ಎಫ್​ಐಆರ್ ದಾಖಲು
ಸೋನು ಸೂದ್
Follow us
TV9 Web
| Updated By: shivaprasad.hs

Updated on: Feb 22, 2022 | 11:39 AM

ಪಂಜಾಬ್: ಮಾದರಿ ನೀತಿ ಸಂಹಿತೆಗೆ ಸಂಬಂಧಿಸಿದಂತೆ ಮೊಗಾ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ಬಾಲಿವುಡ್ ನಟ ಸೋನು ಸೂದ್ (Sonu Sood) ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಚುನಾವಣಾ ನಿಯಮಗಳನ್ನು ಉಲ್ಲಂಘಿಸಿ ಮತದಾನದ ದಿನದಂದು, ಕಾಂಗ್ರೆಸ್ ಅಭ್ಯರ್ಥಿಯಾಗಿರುವ ತಮ್ಮ ಸೋದರಿ ಪರ ಸೋನು ಸೂದ್ ಲಂಧೇಕೆ ಗ್ರಾಮದಲ್ಲಿ ಮತ ಪ್ರಚಾರ ಮಾಡುತ್ತಿರುವುದು ಕಂಡುಬಂದಿದೆ ಎಂದು ಆರೋಪಿಸಲಾಗಿದೆ. ಸೋನು ಅವರ ಸಹೋದರಿ ಮಾಳವಿಕಾ ಸೂದ್ ಸಾಚಾರ್ (Malavika Sood) ಮೊಗಾದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಪಂಜಾಬ್‌ನ ಮೋಗಾ ಜಿಲ್ಲೆಯಲ್ಲಿ ಎಸ್​​ಎಡಿ ಭಾನುವಾರದಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 ರ ಅಡಿಯಲ್ಲಿ ಸೋನು ಸೂದ್ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಎಫ್‌ಐಆರ್​ನಲ್ಲಿ ಹೇಳಲಾಗಿದೆ. ದಿ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿನ ವರದಿಯ ಪ್ರಕಾರ, ನಟ ತನ್ನ ತಾರಾ ವರ್ಚಸ್ಸನ್ನು ಬಳಸಿಕೊಂಡು ಮತದಾರರ ಮೇಲೆ ಪ್ರಭಾವ ಬೀರಲು ಬೂತ್‌ಗಳಿಗೆ ಭೇಟಿ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿತ್ತು. ನಂತರ ಪೊಲೀಸರು ಅವರ ವಾಹನವನ್ನು ವಶಪಡಿಸಿಕೊಂಡು ಮನೆಯೊಳಗೆ ಇರುವಂತೆ ಸೂಚಿಸಿದ್ದರು.

ವರದಿಗಳ ಪ್ರಕಾರ, ಸೋನು ಸೂದ್ ವಿರುದ್ಧ ಪ್ರಚಾರದ ದೂರು ಬಂದಾಗ, ನಟನಿಗೆ ಮನೆಯೊಳಗೆ ಇರಲು ತಿಳಿಸಲಾಗಿತ್ತು. ಅಲ್ಲದೇ ಫ್ಲೈಯಿಂಗ್ ಸ್ಕ್ವಾಡ್ ತಂಡವೊಂದನ್ನು ಅವರ ಮನೆಯ ಹೊರಗೆ ನಿಯೋಜಿಸಲಾಗಿತ್ತು ಎಂದು ಚುನಾವಣಾಧಿಕಾರಿ ಸತ್ವಂತ್ ಸಿಂಗ್ ತಿಳಿಸಿದ್ದಾರೆ. ಈ ನಡುವೆ ಸೋನು ಸೂದ್ ಟ್ವೀಟ್ ಮಾಡಿ, ಅಭ್ಯರ್ಥಿಗಳು ಮತಗಳನ್ನು ಖರೀದಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ದೂರಿನ ಕುರಿತು ಈ ಹಿಂದೆ ಪ್ರತಿಕ್ರಿಯಿಸಿದ್ದ ಸೋನು ಸೂದ್, ಶಿರೋಮಣಿ ಅಕಾಲಿದಳದ ಅಭ್ಯರ್ಥಿ ಬರ್ಜಿಂದರ್ ಸಿಂಗ್, ಅಲಿಯಾಸ್ ಮಖನ್ ಬ್ರಾರ್, ನನ್ನ ವಿರುದ್ಧ ಸುಳ್ಳು ದೂರು ದಾಖಲಿಸಿದ್ದಾರೆ. ಇದು ಕೇವಲ ಪಾರ್ಕಿಂಗ್ ಸಮಸ್ಯೆಯಾಗಿತ್ತು. ವಾಹನವನ್ನು ಸರಿಯಾಗಿ ನಿಲ್ಲಿಸಿರಲಿಲ್ಲ. ಬೇರೆ ಏನೂ ಇರಲಿಲ್ಲ ಎಂದು ಹೇಳಿದ್ದರು. ಮೊಗಾ ಕ್ಷೇತ್ರದಲ್ಲಿ ಇತರ ಪಕ್ಷಗಳ ಅಭ್ಯರ್ಥಿಗಳು ಮತಗಳನ್ನು ಖರೀದಿಸುತ್ತಿದ್ದಾರೆ. ಚುನಾವಣಾ ಆಯೋಗವು ಈ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆರೋಪಿಸಿ ಸೋನು ಸೂದ್ ಟ್ವೀಟ್ ಮಾಡಿ, ಮೊಗಾ ಪೊಲೀಸರ ಜೊತೆಗೆ ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಟ್ಯಾಗ್ ಮಾಡಿದ್ದರು.

ಭಾನುವಾರದಂದು 117 ಕ್ಷೇತ್ರಗಳಿಗೆ ಪಂಜಾಬ್​ನಲ್ಲಿ ಚುನಾವಣೆ ನಡೆದಿತ್ತು. ಸೋನು ಸೂದ್ ಸಹೋದರಿ ಮಾಳವಿಕಾ ಆಪ್ತ ಮೂಲಗಳ ಪ್ರಕಾರ, ಸೋನು ಸೂದ್ ಸೋಮವಾರ ಚಿತ್ರೀಕರಣದ ಸಲುವಾಗಿ ದಕ್ಷಿಣ ಆಫ್ರಿಕಾಗೆ ತೆರಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:

Samantha: ಕೀಳು ಭಾಷೆಯಲ್ಲಿ ಸಮಂತಾಗೆ ಪ್ರಶ್ನಿಸಿದ ಅಭಿಮಾನಿ; ನಟಿಯ ಉತ್ತರ ಏನಿತ್ತು?

Mysore District Judge: ವಿವೇಚನಾರಹಿತ ತೀರ್ಪು ನೀಡಿದ ಜಡ್ಜ್, ಸ್ಪೆಷಲ್ ಕ್ಲಾಸ್ ಗೆ ಅಟ್ಟಿದ ಹೈಕೋರ್ಟ್! ಏನಿದು ಪ್ರಕರಣ?

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ