ಎಎಪಿ ಮಾಜಿ ನಾಯಕ ಕುಮಾರ್ ವಿಶ್ವಾಸ್ ಅವರ ಭದ್ರತೆಯನ್ನು ಪರಿಶೀಲಿಸಲಾಗುವುದು: ಸರ್ಕಾರಿ ಮೂಲಗಳು

"ಒಂದು ದಿನ, ಅವರು (ಕೇಜ್ರಿವಾಲ್) ಅವರು ಪಂಜಾಬ್ ಮುಖ್ಯಮಂತ್ರಿ ಆಗುತ್ತಾರೆ ಅಥವಾ ಸ್ವತಂತ್ರ ರಾಷ್ಟ್ರದ (ಖಾಲಿಸ್ತಾನ್) ಮೊದಲ ಪ್ರಧಾನಿಯಾಗುತ್ತಾರೆ ಎಂದು ನನಗೆ ಹೇಳಿದರು" ಎಂದು ಕುಮಾರ್ ವಿಶ್ವಾಸ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಎಎಪಿ ಮಾಜಿ ನಾಯಕ ಕುಮಾರ್ ವಿಶ್ವಾಸ್ ಅವರ ಭದ್ರತೆಯನ್ನು ಪರಿಶೀಲಿಸಲಾಗುವುದು: ಸರ್ಕಾರಿ ಮೂಲಗಳು
ಕುಮಾರ್ ವಿಶ್ವಾಸ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Feb 18, 2022 | 2:53 PM

ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ವಿರುದ್ಧ ಕಟುವಾದ ಆರೋಪಗಳನ್ನು ಮಾಡುವ ಮೂಲಕ ವಿವಾದಕ್ಕೆ ಕಾರಣವಾದ ಕವಿ ಮತ್ತು ಮಾಜಿ ಆಮ್ ಆದ್ಮಿ ಪಕ್ಷದ (AAP) ನಾಯಕ ಕುಮಾರ್ ವಿಶ್ವಾಸ್ (Kumar Vishwas) ಅವರ ಭದ್ರತೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಈ ಬೆಳವಣಿಗೆ ಬಗ್ಗೆ ಗೊತ್ತಿರುವ ಜನರು ಹೇಳಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಎಎಪಿ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಪಂಜಾಬ್‌ನ ಮುಖ್ಯಮಂತ್ರಿ ಸ್ಥಾನ ಪಡೆಯುವುದಕ್ಕಾಗಿ ಶೋಷಿತ ಮತ್ತು ಪ್ರತ್ಯೇಕತಾವಾದಿ ಗುಂಪುಗಳ ಬೆಂಬಲವನ್ನು ಪಡೆಯಲು ಸಿದ್ಧ ಎಂದು ಕುಮಾರ್ ವಿಶ್ವಾಸ್ ಹೇಳಿಕೊಂಡಿದ್ದರು.  ಎಎಪಿಯ ಸ್ಥಾಪಕ ಸದಸ್ಯರಾಗಿದ್ದ ವಿಶ್ವಾಸ್, ಕೇಜ್ರಿವಾಲ್ ಅವರು “ಸ್ವತಂತ್ರ ರಾಷ್ಟ್ರ”ದ ಮೊದಲ ಪ್ರಧಾನಿಯಾಗಲು ಅವರ “ಸೂತ್ರ” ಸಿದ್ಧವಾಗಿದೆ ಎಂದು ಹೇಳಿದ್ದಾರೆ. “ಒಂದು ದಿನ, ಅವರು (ಕೇಜ್ರಿವಾಲ್) ಅವರು ಪಂಜಾಬ್ ಮುಖ್ಯಮಂತ್ರಿ ಆಗುತ್ತಾರೆ ಅಥವಾ ಸ್ವತಂತ್ರ ರಾಷ್ಟ್ರದ (ಖಾಲಿಸ್ತಾನ್) ಮೊದಲ ಪ್ರಧಾನಿಯಾಗುತ್ತಾರೆ ಎಂದು ನನಗೆ ಹೇಳಿದರು” ಎಂದು ಕುಮಾರ್ ವಿಶ್ವಾಸ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.  ಭಾರತದ ಸಮಗ್ರತೆ ಮತ್ತು ಸಾರ್ವಭೌಮತೆಗೆ ನೇರವಾಗಿ ಧಕ್ಕೆ ತರುವ ಪಂಜಾಬ್‌ನಿಂದ ಬೇರ್ಪಡುವ ಮೂಲಕ ಪ್ರತ್ಯೇಕ ರಾಷ್ಟ್ರದ ಬೇಡಿಕೆಯನ್ನು ಸಿಖ್ ಪ್ರತ್ಯೇಕತಾವಾದಿ ಘಟಕಗಳು ಬಹಳ ಹಿಂದಿನಿಂದಲೂ ಮಾಡುತ್ತಿವೆ. ವಿಶ್ವಾಸ್ ಅವರ ಆರೋಪವು ಫೆಬ್ರವರಿ 20 ರಂದು ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎಎಪಿಯ ಭವಿಷ್ಯವನ್ನು ಹಾಳುಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದು ಕೇಜ್ರಿವಾಲ್ ಅವರ ಪ್ರತಿಷ್ಠೆ ಮೇಲೆ ದೀರ್ಘಕಾಲೀನ ಪರಿಣಾಮ ಬೀರಬಹುದು. 

ಆದಾಗ್ಯೂ ಆಮ್ ಆದ್ಮಿ ಪಕ್ಷವು ಆರೋಪಗಳನ್ನು ಕಟುವಾಗಿ ನಿರಾಕರಿಸಿದೆ ಮತ್ತು ವಿಶ್ವಾಸ್ ಅವರ ಆರೋಪಗಳನ್ನು ಸಾಬೀತುಪಡಿಸಲು ಪುರಾವೆಯನ್ನು ಕೋರಿದೆ.

ವಿಶ್ವಾಸ್ ಅವರ ಆರೋಪದ ಮೇಲೆ ಕಾಂಗ್ರೆಸ್ ಮತ್ತು ಬಿಜೆಪಿ ಎಎಪಿಯನ್ನು ಮೂಲೆಗುಂಪು ಮಾಡಿದೆ. ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಅವರು ವಿಶ್ವಾಸ್ ಅವರ ವಿಡಿಯೊ ಸಂದರ್ಶನದಲ್ಲಿ ಹೇಳಿದ ಆರೋಪಗಳ ಬಗ್ಗೆ “ನಿಷ್ಪಕ್ಷಪಾತ ತನಿಖೆಗೆ” ಆದೇಶಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದರು.  ಗುರುವಾರ, ಚುನಾವಣಾ ಅಧಿಕಾರಿಯು ಸಂದರ್ಶನವನ್ನು ಪ್ರಕಟಿಸದಂತೆ ಮಾಧ್ಯಮ ಸಂಸ್ಥೆಗಳು, ರಾಜಕೀಯ ಪಕ್ಷಗಳು ಮತ್ತು ಅವರ ಪ್ರತಿನಿಧಿಗಳನ್ನು ನಿರ್ಬಂಧಿಸಿ ಪತ್ರ ಬರೆದಿದ್ದರು. ಅದನ್ನು “ದುರುದ್ದೇಶಪೂರಿತವಾಗಿ ತಯಾರಿಸಲಾಗಿದೆ” ಎಂದು ಹೇಳಿದ್ದ  ಮುಖ್ಯ ಚುನಾವಣಾ ಅಧಿಕಾರಿ ಕೂಡಲೇ ಆ ಪತ್ರವನ್ನು ಹಿಂಪಡೆದಿದ್ದಾರೆ.

ಇದನ್ನೂ ಓದಿ: ಚುನಾವಣೆ ಉದ್ದೇಶಕ್ಕಾಗಿ ಮಾತ್ರ ಅವರು ಮಾತನಾಡುತ್ತಾರಾ?: ಮನಮೋಹನ್ ಸಿಂಗ್ ವಿರುದ್ಧ ಗುಡುಗಿದ ನಿರ್ಮಲಾ ಸೀತಾರಾಮನ್

Published On - 2:20 pm, Fri, 18 February 22

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು