AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Punjab elections ಮೊಗಾ ಮತಗಟ್ಟೆಯಲ್ಲಿ ನಟ ಸೋನು ಸೂದ್ ಎಸ್‌ಯುವಿ ವಶ ಪಡಿಸಿದ ಪೊಲೀಸ್

Sonu Sood ಮೊಗಾ ಕ್ಷೇತ್ರದಲ್ಲಿ ಇತರ ಪಕ್ಷಗಳ ಅಭ್ಯರ್ಥಿಗಳು ಮತಗಳನ್ನು ಖರೀದಿಸುತ್ತಿದ್ದಾರೆ. ಚುನಾವಣಾ ಆಯೋಗವು ಈ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆರೋಪಿಸಿ ಸೋನು ಸೂದ್  ಟ್ವೀಟ್ ಮಾಡಿದ್ದು, ಮೊಗಾ ಪೊಲೀಸರ ಜೊತೆಗೆ ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಟ್ಯಾಗ್ ಮಾಡಿದ್ದಾರೆ.

Punjab elections ಮೊಗಾ ಮತಗಟ್ಟೆಯಲ್ಲಿ ನಟ ಸೋನು ಸೂದ್ ಎಸ್‌ಯುವಿ ವಶ ಪಡಿಸಿದ ಪೊಲೀಸ್
ಸೋನು ಸೂದ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Feb 20, 2022 | 4:26 PM

Share

ಮೊಗಾ: ಭಾನುವಾರ ಪಂಜಾಬ್ ವಿಧಾನಸಭಾ ಚುನಾವಣೆಗೆ (Punjab Polls)ಮತದಾನ ನಡೆಯುತ್ತಿದ್ದಾಗ ಮೊಗಾ ಜಿಲ್ಲೆಯ ಲಂಧೇಕೆ ಗ್ರಾಮದಲ್ಲಿ “ಸಂಶಯಾಸ್ಪದ ಚಟುವಟಿಕೆ” ನಡೆಸಲಾಗುತ್ತಿದೆ ಎಂಬ ವರದಿಗಳ ನಂತರ ಬಾಲಿವುಡ್ ನಟ ಮತ್ತು ಸಾಮಾಜಿಕ ಕಾರ್ಯಕರ್ತ ಸೋನು ಸೂದ್  (Sonu Sood) ಕುಳಿತಿದ್ದ ಎಸ್‌ಯುವಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸೋನು ಸೂದ್ ಅವರ ಸಹೋದರಿ ಮಾಳವಿಕಾ ಸೂದ್ (Malvika Sood) ಸಾಚಾರ್ ಅವರು ಮೋಗಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಸೋನು ಸೂದ್ ಮತಗಟ್ಟೆ ಪ್ರವೇಶಿಸಲು ಯತ್ನಿಸುತ್ತಿದ್ದರು. ಈ ವೇಳೆ ಅವರ ಕಾರನ್ನು ಜಪ್ತಿ ಮಾಡಿ ಮನೆಗೆ ಕಳುಹಿಸಲಾಗಿದೆ. ಮನೆಯಿಂದ ಹೊರಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮೊಗಾ ಜಿಲ್ಲಾ ಪಿಆರ್‌ಒ ಪ್ರದ್ಭದೀಪ್ ಸಿಂಗ್  ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ಟ್ವೀಟ್  ಮಾಡಿದೆ. ಅನುಮಾನಾಸ್ಪದ ಚಟುವಟಿಕೆಯ ಆಧಾರದ ಮೇಲೆ ಎಸ್‌ಯುವಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ದೇವಿಂದರ್ ಸಿಂಗ್ ಹೇಳಿದ್ದಾರೆ. ಲಂಧೇಕೆ ಗ್ರಾಮದ ಮತಗಟ್ಟೆ ಬಳಿ ಎಸ್‌ಯುವಿ ಸುತ್ತಾಡುತ್ತಿರುವ ಬಗ್ಗೆ ನಮಗೆ ದೂರು ಬಂದಿದೆ. ನಾವು ಅದನ್ನು ವಶಪಡಿಸಿಕೊಂಡಿದ್ದೇವೆ. ಮುಂದಿನ ಕ್ರಮ ನಡೆಯುತ್ತಿದೆ ಎಂದ ಅವರು ಹೇಳಿದ್ದಾರೆ. ಈ ವಾಹನ ಸೋನು ಸೂದ್ ಅವರ ಪರಿಚಯಸ್ಥರಿಗೆ ಸೇರಿದ್ದು, ಅವರು ಮೊಗಾದಲ್ಲಿ ಚುನಾವಣಾ ಪ್ರಚಾರದ ವೇಳೆ ಅದನ್ನು ಬಳಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಸೋನು ಸೂದ್‌ಗೆ ಮೊಗಾ ಕ್ಷೇತ್ರದಲ್ಲಿ ಮತ ಇಲ್ಲದ ಕಾರಣ ಆ ಪ್ರದೇಶದಲ್ಲಿ ಓಡಾಡಲು ಅವಕಾಶವಿಲ್ಲ. ಹಾಗಾಗಿ  ಅವರುಮನೆಯಲ್ಲೇ ಇರುವಂತೆ ಸೂಚಿಸಿದ್ದೇನೆ. ಆದರೆ, ಅವರು ನಿರ್ದೇಶನವನ್ನು ಉಲ್ಲಂಘಿಸಿದ್ದಾರೆ. ಆದ್ದರಿಂದ, ನಾನು ಅವರ ಮನೆಯ ವಿಡಿಯೊ ಕಣ್ಗಾವಲು ನಿರ್ದೇಶಿಸಿದೆ  ಎಂದು ಸತ್ವಂತ್ ಸಿಂಗ್ ಹೇಳಿದ್ದಾರೆ.

ಪ್ರತಿಸ್ಪರ್ಧಿ ಪಕ್ಷಗಳು ಮತಗಳನ್ನು ಖರೀದಿಸುತ್ತಿವೆ: ಸೋನು ಸೂದ್ ಆರೋಪ

ಶಿರೋಮಣಿ ಅಕಾಲಿದಳದ ಅಭ್ಯರ್ಥಿ ಬರ್ಜಿಂದರ್ ಸಿಂಗ್, ಅಲಿಯಾಸ್ ಮಖನ್ ಬ್ರಾರ್, ನನ್ನ ವಿರುದ್ಧ ಸುಳ್ಳು ದೂರು ದಾಖಲಿಸಿದ್ದಾರೆ. ಇದು ಕೇವಲ ಪಾರ್ಕಿಂಗ್ ಸಮಸ್ಯೆಯಾಗಿತ್ತು. ವಾಹನವನ್ನು ಸರಿಯಾಗಿ ನಿಲ್ಲಿಸಿರಲಿಲ್ಲ. ಬೇರೆ ಏನೂ ಇರಲಿಲ್ಲ ಎಂದು ಸೋನು ಸೂದ್  ಹೇಳಿದ್ದಾರೆ

ಮೊಗಾ ಕ್ಷೇತ್ರದಲ್ಲಿ ಇತರ ಪಕ್ಷಗಳ ಅಭ್ಯರ್ಥಿಗಳು ಮತಗಳನ್ನು ಖರೀದಿಸುತ್ತಿದ್ದಾರೆ. ಚುನಾವಣಾ ಆಯೋಗವು ಈ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆರೋಪಿಸಿ ಸೋನು ಸೂದ್  ಟ್ವೀಟ್ ಮಾಡಿದ್ದು, ಮೊಗಾ ಪೊಲೀಸರ ಜೊತೆಗೆ ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಟ್ಯಾಗ್ ಮಾಡಿದ್ದಾರೆ.

ಇವಿಎಂ ದೋಷದಿಂದ ನಾಲ್ಕು ಬೂತ್‌ಗಳಲ್ಲಿ ಮತದಾನ ವಿಳಂಬ

ಏತನ್ಮಧ್ಯೆ, ವಿದ್ಯುನ್ಮಾನ ಮತಯಂತ್ರಗಳಲ್ಲಿ (ಇವಿಎಂ) ದೋಷದಿಂದಾಗಿ ಮೊಗಾ ಜಿಲ್ಲೆಯ ನಾಲ್ಕು ಬೂತ್‌ಗಳಲ್ಲಿ ಮತದಾನ ವಿಳಂಬವಾಯಿತು.

ಬಾಘಪುರಾಣ ಕ್ಷೇತ್ರದ ಮತಗಟ್ಟೆ ಸಂಖ್ಯೆ 198, ನಿಹಾಲ್ ಸಿಂಗ್ ವಾಲಾ ಕ್ಷೇತ್ರದ 13 ಮತ್ತು ಮೊಗಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 160 ಮತ್ತು 161 ರಲ್ಲಿ ಮತದಾನ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕಾಲಿ ಅಭ್ಯರ್ಥಿ, ಕಾಂಗ್ರೆಸ್ ನಾಯಕರ ನಡುವೆ ಮಾತಿನ ಚಕಮಕಿ

ಅಕಾಲಿ ಅಭ್ಯರ್ಥಿ ಬರ್ಜಿಂದರ್ ಸಿಂಗ್, ಅಲಿಯಾಸ್ ಮಖಾನ್ ಬ್ರಾರ್ ಮತ್ತು ಕಾಂಗ್ರೆಸ್ ಮುಖಂಡ ಅಮರೀಶ್ ಬಗ್ಗಾ, ಮೊಗಾದ ಬಿಎಡ್ ಕಾಲೇಜು ಬಳಿ ಮಾಜಿ ಕೌನ್ಸಿಲರ್ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಕೂಡಲೇ ಮಧ್ಯ ಪ್ರವೇಶಿಸಿದ ಪೊಲೀಸರು ಎರಡೂ ಕಡೆಯವರನ್ನು ಸಮಾಧಾನಪಡಿಸಿದರು. ನಂತರ, ಬ್ರಾರ್ ಹೇಳಿದರು, “ಹೌದು, ನಮ್ಮ ನಡುವೆ ಮಾತಿನ ಚಕಮಕಿ ನಡೆಯಿತು, ಈಗ ಸರಿಹೋಗಿದೆ ಎಂದಿದ್ದಾರೆ. ಅಕಾಲಿಗಳು ಮೊಗದಲ್ಲಿ ಸೋಲನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ, ಈಗ ಅವರು ಅಂತಹ ಮಟ್ಟಕ್ಕೆ ಇಳಿಯುತ್ತಿದ್ದಾರೆ ಎಂದು ಬಗ್ಗಾ ಪ್ರತಿಕ್ರಯಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್: ಸಂಯೋಜಿತ ಅವಳಿಗಳ ಮತದಾನದ ಗೌಪ್ಯತೆ ಖಚಿತಪಡಿಸಿಕೊಳ್ಳಲು ವಿಶೇಷ ವ್ಯವಸ್ಥೆ ಮಾಡಿದ ಚುನಾವಣಾ ಆಯೋಗ

Published On - 1:39 pm, Sun, 20 February 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ