ನಮ್ಮ ಮೇಲಿನ ನಾಯಕರು ದುರ್ಬಲ ಮುಖ್ಯಮಂತ್ರಿಯನ್ನು ಬಯಸುತ್ತಾರೆ; ರಾಹುಲ್ ಗಾಂಧಿ ವಿರುದ್ಧ ನವಜೋತ್ ಸಿಧು ಟೀಕೆ

ಈ ಬಾರಿ ಮುಖ್ಯಮಂತ್ರಿಯನ್ನು ನೀವೇ ಆರಿಸಬೇಕು. ಮೇಲಿರುವ ಜನರು ತಮ್ಮ ತಾಳಕ್ಕೆ ತಕ್ಕಂತೆ ಕುಣಿಯುವ ದುರ್ಬಲ ಮುಖ್ಯಮಂತ್ರಿಯನ್ನು ಬಯಸುತ್ತಾರೆ, ನಿಮಗೆ ಅಂತಹ ಮುಖ್ಯಮಂತ್ರಿ ಬೇಕೇ? ಎಂದು ನವಜೋತ್ ಸಿಂಗ್ ಸಿಧು ಪಂಜಾಬ್​ನಲ್ಲಿ ತಮ್ಮ ಬೆಂಬಲಿಗರಿಗೆ ಪ್ರಶ್ನಿಸಿದ್ದಾರೆ.

ನಮ್ಮ ಮೇಲಿನ ನಾಯಕರು ದುರ್ಬಲ ಮುಖ್ಯಮಂತ್ರಿಯನ್ನು ಬಯಸುತ್ತಾರೆ; ರಾಹುಲ್ ಗಾಂಧಿ ವಿರುದ್ಧ ನವಜೋತ್ ಸಿಧು ಟೀಕೆ
ನವಜೋತ್ ಸಿಂಗ್ ಸಿಧು
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Feb 04, 2022 | 5:25 PM

ಚಂಡೀಗಢ: ಫೆ. 6ರಂದು ಪಂಜಾಬ್‌ನಲ್ಲಿ ಕಾಂಗ್ರೆಸ್‌ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬ ಬಗ್ಗೆ ಘೋಷಣೆ ಮಾಡುವುದಾಗಿ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ. ಪಂಜಾಬ್​ಗೆ ಭಾನುವಾರ ಭೇಟಿ ನೀಡಲಿರುವ ರಾಹುಲ್ ಗಾಂಧಿ ಈ ವೇಳೆ ಸಿಎಂ ಅಭ್ಯರ್ಥಿ ಹೆಸರು ಘೋಷಿಸಲಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ (Charanjit Singh Channi) ಮತ್ತು ಪಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು (Navjot Singh Sidhu) ನಡುವೆ ಯಾರು ಸಿಎಂ ಅಭ್ಯರ್ಥಿಯಾಗಲಿದ್ದಾರೆ ಎಂಬುದು ಸದ್ಯದ ಕುತೂಹಲವಾಗಿದೆ. ಆದರೆ, ಇದರ ನಡುವೆ ನವಜೋತ್ ಸಿಂಗ್ ಸಿಧು ಕಾಂಗ್ರೆಸ್​ನ ಹೈಕಮಾಂಡ್​ಗೆ ಕಟುವಾದ ಸಂದೇಶವನ್ನು ರವಾನಿಸಿದ್ದಾರೆ. ನಮ್ಮ ಮೇಲಿರುವ ನಾಯಕರು ಯಾವಾಗಲೂ ತಮ್ಮ ತಾಳಕ್ಕೆ ತಕ್ಕಂತೆ ಕುಣಿಯುವ ದುರ್ಬಲ ಮುಖ್ಯಮಂತ್ರಿಯನ್ನು ಬಯಸುತ್ತಾರೆ ಎಂದು ಸಿಧು ಹೇಳಿದ್ದಾರೆ.

ಹೊಸ ಪಂಜಾಬ್ ನಿರ್ಮಾಣ ಮಾಡುವುದು ಮುಖ್ಯಮಂತ್ರಿಯ ಕೈಯಲ್ಲಿದೆ. ಈ ಬಾರಿ ಮುಖ್ಯಮಂತ್ರಿಯನ್ನು ನೀವೇ ಆರಿಸಬೇಕು. ಮೇಲಿರುವ ಜನರು ತಮ್ಮ ತಾಳಕ್ಕೆ ತಕ್ಕಂತೆ ಕುಣಿಯುವ ದುರ್ಬಲ ಮುಖ್ಯಮಂತ್ರಿಯನ್ನು ಬಯಸುತ್ತಾರೆ, ನಿಮಗೆ ಅಂತಹ ಮುಖ್ಯಮಂತ್ರಿ ಬೇಕೇ? ಎಂದು ನವಜೋತ್ ಸಿಂಗ್ ಸಿಧು ಪಂಜಾಬ್​ನಲ್ಲಿ ತಮ್ಮ ಬೆಂಬಲಿಗರಿಗೆ ಪ್ರಶ್ನಿಸಿದ್ದಾರೆ.

ನವಜೋತ್ ಸಿಂಗ್ ಸಿಧು ಮುಖ್ಯಮಂತ್ರಿ ಹುದ್ದೆಗೇರಬೇಕೆಂದು ಬಹುಕಾಲದಿಂದ ಆಸೆ ಪಟ್ಟಿದ್ದಾರೆ. ಸೆಪ್ಟೆಂಬರ್‌ನಲ್ಲಿ ಕಾಂಗ್ರೆಸ್ ಪಕ್ಷವು ಅವರ ಪ್ರತಿಸ್ಪರ್ಧಿ ಅಮರಿಂದರ್ ಸಿಂಗ್ ಅವರನ್ನು ವಜಾಗೊಳಿಸಿದಾಗ ತಾವೇ ಸಿಎಂ ಆಗಬೇಕೆಂದು ಬಯಸಿದ್ದರು. ಆದರೆ, ಚರಣ್​ಜಿತ್ ಸಿಂಗ್ ಚನ್ನಿ ಅವರನ್ನು ಸಿಎಂ ಆಗಿ ಮಾಡಲಾಗಿತ್ತು.

ಇದೀಗ ಸಾರ್ವಜನಿಕ ಪೈಪೋಟಿಯಲ್ಲಿ ಸಿಎಂ ಚರಣ್​ಜಿತ್ ಸಿಂಗ್ ಚನ್ನಿ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರನ್ನು ಹಿಂದಿಕ್ಕಿದ್ದಾರೆ. ಫೆಬ್ರವರಿ 20ರಂದು ನಡೆಯಲಿರುವ ಪಂಜಾಬ್ ಚುನಾವಣೆಗೆ ಕಾಂಗ್ರೆಸ್ ಚರಣ್​ಜಿತ್ ಸಿಂಗ್ ಚನ್ನಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ. ಅವರು ಮುಖ್ಯಮಂತ್ರಿ ಹುದ್ದೆಗೆ ಪಕ್ಷದ ಆಯ್ಕೆಯಾಗಬಹುದು ಎನ್ನಲಾಗಿದೆ. ಇದೇ ಕಾರಣಕ್ಕೆ ಅವರು ಒಂದು ಕ್ಷೇತ್ರದಲ್ಲಿ ಸೋಲನ್ನು ಅನುಭವಿಸಿದರೆ ಇನ್ನೊಂದು ಕ್ಷೇತ್ರದಿಂದ ಗೆಲ್ಲಬಹುದು ಎಂಬ ಅಂದಾಜಿನಿಂದ ಈ ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ.

ಭಾನುವಾರ ಲೂಧಿಯಾನದಲ್ಲಿ ರಾಹುಲ್ ಗಾಂಧಿ ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ವಾರ, ಪಂಜಾಬ್‌ಗೆ ರಾಹುಲ್ ಗಾಂಧಿ ಭೇಟಿ ನೀಡಿದ ಸಂದರ್ಭದಲ್ಲಿ ಚರಣ್​ಜಿತ್ ಸಿಂಗ್ ಚನ್ನಿ ಮತ್ತು ನವಜೋತ್ ಸಿಂಗ್ ಸಿಧು ಇಬ್ಬರೂ ವೇದಿಕೆಯಲ್ಲಿ ಏಕತೆಯನ್ನು ಪ್ರದರ್ಶಿಸಿದ್ದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷದಿಂದ (ಎಎಪಿ) ಸೂಚನೆಯನ್ನು ಪಡೆದುಕೊಂಡು, ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ಕಾಂಗ್ರೆಸ್ ಸಾರ್ವಜನಿಕ ಸಮೀಕ್ಷೆಯನ್ನು ಪ್ರಾರಂಭಿಸಿತ್ತು.

ಇದನ್ನೂ ಓದಿ: Punjab Elections 2022: ಸಿಧು VS ಚನ್ನಿ; ಪಂಜಾಬ್​ ಚುನಾವಣೆಗೆ ಕಾಂಗ್ರೆಸ್​ನಿಂದ ಇಂದೇ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಸಾಧ್ಯತೆ

10 ದಿನಗಳೊಳಗೆ ಪಂಜಾಬ್ ಸಿಎಂ ಅಭ್ಯರ್ಥಿ ಹೆಸರನ್ನು ಘೋಷಿಸಿ; ರಾಹುಲ್ ಗಾಂಧಿಗೆ ನವಜೋತ್ ಸಿಂಗ್ ಸಿಧು ಒತ್ತಾಯ

Published On - 3:41 pm, Fri, 4 February 22