Punjab Assembly Elections: ಅಪ್ಪ ಗೆಲ್ಲುವವರೆಗೂ ನಾನು ಮದುವೆಯಾಗುವುದಿಲ್ಲ; ನವಜೋತ್ ಸಿಂಗ್ ಸಿಧು ಮಗಳು ಶಪಥ

ಪಂಜಾಬ್​ನ ಜನರು ಹಣಕ್ಕಾಗಿ ತಮ್ಮನ್ನು ಮಾರಿಕೊಳ್ಳುವುದಿಲ್ಲ, ಅವರು ಸತ್ಯಕ್ಕೆ ಮತ ಹಾಕುತ್ತಾರೆ. ನಮ್ಮ ರಾಜ್ಯದ ಜನರು ಸತ್ಯಕ್ಕೆ ಮಾತ್ರ ಮತ ಹಾಕುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ರಾಬಿಯಾ ಸಿಧು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Punjab Assembly Elections: ಅಪ್ಪ ಗೆಲ್ಲುವವರೆಗೂ ನಾನು ಮದುವೆಯಾಗುವುದಿಲ್ಲ; ನವಜೋತ್ ಸಿಂಗ್ ಸಿಧು ಮಗಳು ಶಪಥ
ನವಜೋತ್ ಸಿಂಗ್ ಸಿಧು ಮಗಳು ರಾಬಿಯಾ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Feb 11, 2022 | 6:00 PM

ಅಮೃತಸರ: ಫೆಬ್ರವರಿ 20ರಂದು ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೂ (Punjab Assemly Polls 2022) ಮುನ್ನ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು (Navjot Singh Sidhu) ಅವರ ಪುತ್ರಿ ರಾಬಿಯಾ ಸಿಧು ಅಮೃತಸರ (ಪೂರ್ವ) ಕ್ಷೇತ್ರದಲ್ಲಿ ತಮ್ಮ ತಂದೆಯ ಪರ ಪ್ರಚಾರ ನಡೆಸಿದ್ದಾರೆ. ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಬಿಯಾ, ಕಾಂಗ್ರೆಸ್ ಸಿಎಂ ಅಭ್ಯರ್ಥಿ ಮತ್ತು ಹಾಲಿ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ (Charanjit Singh Channi) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಗೇ, ನನ್ನ ತಂದೆ ಗೆಲ್ಲುವವರೆಗೂ ನಾನು ಮದುವೆಯಾಗುವುದಿಲ್ಲ ಎಂದು ನವಜೋತ್ ಸಿಂಗ್ ಸಿಧು ಮಗಳು ರಾಬಿಯಾ ಪ್ರತಿಜ್ಞೆ ಮಾಡಿದ್ದಾರೆ.

ತಾವು ಬಡವ ಎಂದು ಚರಣ್​​ಜಿತ್ ಸಿಂಗ್ ಚನ್ನಿ ಘೋಷಿಸಿಕೊಂಡಿದ್ದಾರೆ. ಆದರೆ, ಅದು ನಿಜವೇ? ಅವರ ಖಾತೆಗಳನ್ನು ಪರಿಶೀಲನೆ ಮಾಡಿದರೆ ಸತ್ಯಾಂಶ ತಿಳಿಯುತ್ತದೆ. ಚನ್ನಿ ಅವರ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿದರೆ 133 ಕೋಟಿ ರೂ.ಗೂ ಹೆಚ್ಚು ಹಣ ಪತ್ತೆಯಾಗುತ್ತದೆ ಎಂದು ರಾಬಿಯಾ ಸಿಧು ಆರೋಪಿಸಿದ್ದಾರೆ.

ಪಂಜಾಬ್ ಚುನಾವಣೆ 2022ರ ಕಾಂಗ್ರೆಸ್‌ನ ಸಿಎಂ ಅಭ್ಯರ್ಥಿಯಾಗಿ ತನ್ನ ತಂದೆಯ ಹೆಸರನ್ನು ಘೋಷಿಸದ ಬಗ್ಗೆ ರಾಬಿಯಾ ಅಸಮಾಧಾನಗೊಂಡಿದ್ದಾರೆ. ಬಹುಶಃ ಹೈಕಮಾಂಡ್ ಮೇಲೆ ಸಾಕಷ್ಟು ಒತ್ತಡವಿತ್ತು. ಆದರೆ ನೀವು ಪ್ರಾಮಾಣಿಕ ವ್ಯಕ್ತಿಯನ್ನು ದೀರ್ಘಕಾಲ ತಡೆಹಿಡಿಯಲು ಸಾಧ್ಯವಿಲ್ಲ. ಯಾರಿಗೆ ಪ್ರಾಮಾಣಿಕತೆ ಇರುವುದಿಲ್ಲವೋ ಅವರು ಖಂಡಿತ ಒಂದು ದಿನ ಕೆಳಗೆ ಬೀಳುತ್ತಾರೆ ಎಂದು ರಾಬಿಯಾ ಸಿಧು ಭವಿಷ್ಯ ನುಡಿದಿದ್ದಾರೆ.

ಪಂಜಾಬ್‌ನಲ್ಲಿರುವ ಇಂದಿನ ಪರಿಸ್ಥಿತಿಯಿಂದ ನವಜೋತ್ ಸಿಂಗ್ ಸಿಧುಗೆ ನೋವಾಗಿದೆ. ನನ್ನ ತಂದೆ ಗೆಲ್ಲುವವರೆಗೂ ತಾನು ಮದುವೆಯಾಗುವುದಿಲ್ಲ ಎಂದು ರಾಬಿಯಾ ಸಿಧು ಹೇಳಿದ್ದಾರೆ. ಪಂಜಾಬ್​ನ ಜನರು ಹಣಕ್ಕಾಗಿ ತಮ್ಮನ್ನು ಮಾರಿಕೊಳ್ಳುವುದಿಲ್ಲ, ಅವರು ಸತ್ಯಕ್ಕೆ ಮತ ಹಾಕುತ್ತಾರೆ. ನಮ್ಮ ರಾಜ್ಯದ ಜನರು ಸತ್ಯಕ್ಕೆ ಮಾತ್ರ ಮತ ಹಾಕುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ರಾಬಿಯಾ ಸಿಧು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನನ್ನ ತಂದೆ ನವಜೋತ್ ಸಿಂಗ್ ಸಿಧು ಕಳೆದ 14 ವರ್ಷಗಳಿಂದ ಪಂಜಾಬ್‌ಗಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಪಂಜಾಬ್ ರಾಜ್ಯಕ್ಕೆ ಹೊಸ ಮಾದರಿಯನ್ನು ರಚಿಸುತ್ತಿದ್ದಾರೆ. ಅವರನ್ನು ಎಲ್ಲರೂ ಗೌರವಿಸಬೇಕು. ನನ್ನ ತಂದೆಯನ್ನು ಯಾವ ಕಾಂಗ್ರೆಸ್ ನಾಯಕರ ಜೊತೆಯೂ ಹೋಲಿಕೆ ಮಾಡಲು ಸಾಧ್ಯವಿಲ್ಲ. ಪಂಜಾಬ್ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ನನ್ನ ತಂದೆ ಮಾತ್ರ ಈ ರಾಜ್ಯವನ್ನು ಉಳಿಸಲು ಸಾಧ್ಯ. ನನ್ನ ತಂದೆಯ ರಾಜಕೀಯ ವಿರೋಧಿಗಳು ಮತ್ತು ಇತರರು ಅವರನ್ನು ಹಿಂದಕ್ಕೆ ತಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ರಾಬಿಯಾ ತನ್ನ ತಂದೆ ನವಜೋತ್ ಸಿಂಗ್ ಸಿಧು ವಿರುದ್ಧ ಅಮೃತಸರದಿಂದ (ಪೂರ್ವ) ಸ್ಪರ್ಧಿಸುತ್ತಿರುವ ಎಸ್‌ಎಡಿ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಮಜಿಥಿಯಾ ಅವರು ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರ ಸೋದರ ಮಾವ. ಮಜಿಥಿಯಾ ಅಂಕಲ್ ರಾಜಕೀಯದ ಎಬಿಸಿಡಿ ಕಲಿಯಲು ನನ್ನ ತಂದೆಯ ಬಳಿಗೆ ಬಂದರು. ಒಂದು ಕಡೆ ಡ್ರಗ್ಸ್ ಮತ್ತು ಇನ್ನೊಂದು ಕಡೆ ಅಭಿವೃದ್ಧಿ, ಉದ್ಯೋಗ ಮತ್ತು ಶಿಕ್ಷಣದ ಆಯ್ಕೆಯಿದೆ. ಇದರಲ್ಲಿ ಯಾವುದನ್ನು ಆಯ್ಕೆ ಮಾಡಬೇಕು ಎಂಬುದು ನಾಯಕನಿಗೆ ತಿಳಿದಿರಬೇಕು ಎಂದು ರಾಬಿಯಾ ಸಿಧು ಟೀಕಿಸಿದ್ದಾರೆ.

ಇದನ್ನೂ ಓದಿ: Punjab Election ಪಂಜಾಬ್​​ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಗೆ ಕಾಂಗ್ರೆಸ್ ಸಿದ್ಧತೆ, ರಾಹುಲ್ ನಿರ್ಧಾರಕ್ಕೆ ಬದ್ಧ ಎಂದ ಸಿಧು

ಪಂಜಾಬ್: ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಚರಣ್​​ಜಿತ್ ಸಿಂಗ್ ಚನ್ನಿ ಎಂದು ಘೋಷಿಸಿದ ರಾಹುಲ್ ಗಾಂಧಿ

Published On - 5:59 pm, Fri, 11 February 22

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ